ETV Bharat / city

ಏ.1ಕ್ಕೆ ಕೇಂದ್ರ ಸಚಿವ ಅಮಿತ್ ಶಾ ಆಗಮನ: ಪೂರ್ವ ಸಿದ್ಧತಾ ಸಭೆ ನಡೆಸಿದ ಸೋಮಶೇಖರ್ - ಸಹಕಾರ ಕ್ಷೇತ್ರ ಕುರಿತು ಸೋಮಶೇಖರ್ ಮಾತನಾಡಿರುವುದು

ಅಮಿತ್ ಶಾ ಆಗಮಿಸಲಿರುವ ಹಿನ್ನೆಲೆ, ಸಚಿವ ಎಸ್.ಟಿ. ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು.

meeting leads by Minister Somashekhar
ಸಚಿವ ಸೋಮಶೇಖರ್ ನೇತೃತ್ವದಲ್ಲಿ ಸಭೆ
author img

By

Published : Mar 25, 2022, 6:42 AM IST

ಬೆಂಗಳೂರು: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಏಪ್ರಿಲ್ 1ರಂದು ಬೆಂಗಳೂರಿಗೆ ಆಗಮಿಸಲಿರುವ ಹಿನ್ನೆಲೆ, ಅಂದು ನಡೆಯಲಿರುವ ಕಾರ್ಯಕ್ರಮಗಳ ರೂಪುರೇಷೆಗಳ ಕುರಿತು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು.

ಕೇಂದ್ರದಲ್ಲಿ ನೂತನವಾಗಿ ಸಹಕಾರ ಸಚಿವಾಲಯ ರಚನೆಯಾಗಿದ್ದು, ಸಹಕಾರ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳನ್ನು ತರಲು ಅಮಿತ್ ಶಾ ಅವರು ಮುಂದಾಗಿದ್ದಾರೆ. ಹೀಗಾಗಿ ಸಹಕಾರ ಇಲಾಖೆಗೆ ನೆರವಾಗುವ ಕಾನೂನುಗಳಿಗೆ ತಿದ್ದುಪಡಿ ತರಲು ಸಲಹೆ ಸೂಚನೆಗಳನ್ನು ನೀಡಿದರೆ ಅದನ್ನು ಸಚಿವ ಅಮಿತ್ ಶಾ ಅವರ ಗಮನಕ್ಕೆ ತರಲಾಗುವುದು ಎಂದು ಸಹಕಾರಿಗಳಿಗೆ ತಿಳಿಸಿದರು.

ಸಹಕಾರ ಇಲಾಖೆಗೆ ಅಗತ್ಯವಿರುವ ನೆರವು, ಕಾನೂನು ತಿದ್ದುಪಡಿಗಳ ಪಟ್ಟಿ ಮಾಡಲಾಗಿದೆ. ಸಹಕಾರ ಕ್ಷೇತ್ರದಲ್ಲಿನ ಆದಾಯ ತೆರಿಗೆ ರದ್ದು ಮಾಡುವುದು, ನಬಾರ್ಡ್ ನಿಂದ ಮಂಜೂರಾಗುವ ಸಾಲದ ಮಿತಿ ಹೆಚ್ಚಳ, ಕೆಲವೊಂದು ಕಾಯ್ದೆಗೆ ತಿದ್ದುಪಡಿ ಮಾಡುವ ಬಗ್ಗೆ ಅಧಿಕಾರಿಗಳು ಪಟ್ಟಿ ಮಾಡಿದ್ದಾರೆ. ಇದರ ಹೊರತಾಗಿ ಮತ್ತೇನಾದರೂ ಬೇಡಿಕೆಗಳಿದ್ದರೆ ಕೂಡಲೇ ಸಲ್ಲಿಸುವಂತೆ ಸೂಚಿಸಿದರು.

ಕಳೆದ ವರ್ಷದಲ್ಲಿ ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಮಿತ್ ಶಾ ಅವರನ್ನು ಆಹ್ವಾನಿಸಲಾಗಿತ್ತು. ಇದೀಗ ನಮ್ಮ ಆಹ್ವಾನವನ್ನು ಸ್ವೀಕರಿಸಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಏಪ್ರಿಲ್ 1ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮ ತುಂಬಾ ಅಚ್ಚುಕಟ್ಟಾಗಿ ನಡೆಯಬೇಕು. ಸಹಕಾರಿಗಳೆಲ್ಲ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.

ಇದನ್ನೂ ಓದಿ: ವಯಸ್ಸಿನ ಬಗ್ಗೆ ಪರಸ್ಪರ ಕಾಲೆಳೆದುಕೊಂಡ ಸಿದ್ದರಾಮಯ್ಯ- ಈಶ್ವರಪ್ಪ

ಸಭೆಯಲ್ಲಿ ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ.ಪಾಟೀಲ್, ಭೈರತಿ ಬಸವರಾಜ್, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಸಹಾಕರ ಸಂಘಗಳ ನಿಬಂಧಕರಾದ ಎಸ್.ಜಿಯಾಉಲ್ಲಾ, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.