ಬೆಂಗಳೂರು: ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಅಂಗನವಾಡಿ ಕಾರ್ಯಕರ್ತೆಯರಿಗೆ ಡಾ. ಅಶ್ವತ್ಥನಾರಾಯಣ ಫೌಂಡೇಶನ್ ವತಿಯಿಂದ ಫ್ರೀ ನರ್ಸರಿ ಟೀಚರ್ಸ್ ಟ್ರೈನಿಂಗ್ ಹಾಗೂ ಮಕ್ಕಳ ನಿರ್ವಹಣೆ ಕುರಿತು ತರಬೇತಿ ನೀಡಲು ನಿರ್ಧರಿಸಲಾಗಿದೆ.
ಈ ಕುರಿತಂತೆ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ್, ಶನಿವಾರ ಖ್ಯಾತ ಶಿಕ್ಷಣ ತಜ್ಞ ಡಾ. ಗುರುರಾಜ ಕರ್ಜಗಿ ಅವರ ಜತೆ ಸಮಾಲೋಚನೆ ನಡೆಸಿದರು. ತರಬೇತಿ ನೀಡಲು ಡಾ. ಕರ್ಜಗಿ ಸಮ್ಮತಿ ಸೂಚಿಸಿದ್ದಾರೆ. ಮಾತುಕತೆ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ, ಅಂಗನವಾಡಿ ಕಾರ್ಯಕರ್ತೆಯರ ತರಬೇತಿಗೆ ತಗಲುವ ವೆಚ್ಚವನ್ನು ಡಾ. ಅಶ್ವತ್ಥನಾರಾಯಣ ಫೌಂಡೇಶನ್ ಭರಿಸಲಿದೆ.
ಡಾ.ಗುರುರಾಜ ಕರ್ಜಗಿ ನೇತೃತ್ವ ಸಂಸ್ಥೆ ಬೋಧನಾ ಕೌಶಲ, ಸಣ್ಣ ಮಕ್ಕಳ ನಿರ್ವಹಣೆ, ಅವರ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರದ ಕುರಿತು ತರಬೇತಿ ನೀಡಲಿದೆ. ಶೀಘ್ರದಲ್ಲಿ ಈ ಯೋಜನೆ ಜಾರಿಗೆ ಬರಲಿದೆ. ಡಾ. ಕರ್ಜಗಿ ಅವರು ಈ ಜವಾಬ್ದಾರಿ ವಹಿಸಿಕೊಂಡಿರುವುದು ಬಹಳ ಸಂತಸದ ವಿಷಯ ಎಂದು ಹೇಳಿದರು.