ಬೆಂಗಳೂರು: ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ ಪ್ರಕರಣದ ಆರೋಪಿಯಾಗಿರುವ ಕುಳ್ಳ ದೇವರಾಜ್ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಆರೋಪದಡಿ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.
ಸೈಟ್ ವಿಚಾರಕ್ಕೆ ಕೃಷ್ಣಮೂರ್ತಿ ಎಂಬುವವರಿಗೆ ಕುಳ್ಳ ದೇವರಾಜ್ ಧಮ್ಕಿ ಹಾಕಿ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ್ದಾನೆ ಎಂಬ ಆರೋಪ ಹೊರಿಸಲಾಗಿದ್ದು, ಈ ಕುರಿತು ಕೃಷ್ಣಮೂರ್ತಿ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪೊಲೀಸರು ಕುಳ್ಳ ದೇವರಾಜ್ ಮೇಲೆ ಐಪಿಸಿ ಸೆಕ್ಷನ್ 506, 34, 504, ಹಾಗೂ ಎಸ್‌ಸಿ, ಎಸ್‌ಟಿ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಖಾಸಗಿ ಆಸ್ಪತ್ರೆಗೆ ಬರುವ ಉಸಿರಾಟ ಸಂಬಂಧಿತ ರೋಗಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯ
ಶಾಸಕ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ ಪ್ರಕರಣದ ಆರೋಪಿ ವಿರುದ್ಧ ಈ ಹಿಂದೆ ರಾಜಾನಕುಂಟೆ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಯತ್ನ ಕೇಸ್ ದಾಖಲಾಗಿದೆ.