ETV Bharat / city

ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಗೆ ಮತ್ತೊಂದು ವಿಶೇಷ ನ್ಯಾಯಾಲಯ - ಜನಪ್ರತಿನಿಧಿಗಳ ಕ್ರಿಮಿನಲ್ ಪ್ರಕರಣಗಳ ವಿಚಾರಣೆಗೆ ಮತ್ತೊಂದು ವಿಶೇಷ ನ್ಯಾಯಾಲಯ

ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ತ್ವರಿತ ವಿಚಾರಣೆಗೆ ಮತ್ತೊಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಿ ಅಧಿಸೂಚನೆ ಹೊರಡಿಸಲಾಗಿದೆ. ಈ ವಿಶೇಷ ನ್ಯಾಯಾಲಯದಲ್ಲಿ ಸೆಷನ್ಸ್ ನ್ಯಾಯಾಧೀಶರು ಕಾರ್ಯನಿರ್ವಹಿಸಲಿದ್ದಾರೆ.

Another special court for the trial of criminal cases of people representatives
ವಿಶೇಷ ನ್ಯಾಯಾಲಯ
author img

By

Published : Dec 18, 2020, 7:42 PM IST

Updated : Dec 18, 2020, 7:50 PM IST

ಬೆಂಗಳೂರು: ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯದ ನಿರ್ದೇಶನದಂತೆ ಮತ್ತೊಂದು ವಿಶೇಷ ನ್ಯಾಯಾಲಯ ಸ್ಥಾಪಿಸಿ ಅಧಿಸೂಚನೆ ಹೊರಡಿಸಿದ್ದೇವೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್​ಗೆ ಮಾಹಿತಿ ನೀಡಿದೆ.

ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಶೀಘ್ರ ವಿಚಾರಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಲಿಖಿತ ಮಾಹಿತಿ ನೀಡಿ, ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ತ್ವರಿತ ವಿಚಾರಣೆಗೆ ಮತ್ತೊಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಿ ಅಧಿಸೂಚನೆ ಹೊರಡಿಸಲಾಗಿದೆ. ಈ ವಿಶೇಷ ನ್ಯಾಯಾಲಯದಲ್ಲಿ ಸೆಷನ್ಸ್ ನ್ಯಾಯಾಧೀಶರು ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

ಹೇಳಿಕೆ ದಾಖಲಿಸಿಕೊಂಡ ಪೀಠ, ಸಾಕ್ಷಿಗಳ ರಕ್ಷಣಾ ಯೋಜನೆ ಜಾರಿಗೊಳಿಸಲಾಗಿದೆಯೇ, ಅದಕ್ಕೆ ನಿಧಿ ಸ್ಥಾಪಿಸಲಾಗಿದೆಯೇ ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಸರ್ಕಾರದ ಪರ ವಕೀಲರು, ಯೋಜನೆ ಜಾರಿಗೆ ಸಕ್ಷಮ ಪ್ರಾಧಿಕಾರ ರಚಿಸಲು ಕ್ರಮ ಕೈಗೊಳ್ಳಲಾಗಿದೆ. ನಿಧಿ ಸ್ಥಾಪನೆಯನ್ನು ಸದ್ಯದಲ್ಲೇ ಮಾಡಲಾಗುವುದು ಎಂದರು.

ಇನ್ನು, ಪ್ರಕರಣಗಳಲ್ಲಿ ಸಮರ್ಥವಾಗಿ ವಾದಿಸಲು ಅರ್ಹ ಪಬ್ಲಿಕ್ ಪ್ರಾಸಿಕ್ಯೂಟರ್​ಗಳನ್ನು ನಿಯೋಜಿಸುವ ಕುರಿತು ಸಲ್ಲಿಸಿರುವ ವರದಿ ಪರಿಶೀಲಿಸಿದ ಪೀಠ, ವಿಶೇಷ ನ್ಯಾಯಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಪಿಪಿಗಳ ನೇಮಕಾತಿಯನ್ನು ಯಾವ ರೀತಿ ಮಾಡಲಾಗುತ್ತದೆ ಎಂದು ಪ್ರಶ್ನಿಸಿತು.

ಅಲ್ಲದೇ, ಸಮರ್ಥ ಪಿಪಿಗಳನ್ನು ನೇಮಿಸುವ ಕುರಿತು ಉತ್ತಮ ವರದಿ ಸಲ್ಲಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ 2 ವಾರ ಕಾಲಾವಕಾಶ ನೀಡಿ, ವಿಚಾರಣೆಯನ್ನು ಜನವರಿ 8ಕ್ಕೆ ಮುಂದೂಡಿತು.

Last Updated : Dec 18, 2020, 7:50 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.