ಬೆಂಗಳೂರು: ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕೋರಮಂಗಲ ಪ್ರಾದೇಶಿಕ ಸಾರಿಗೆ ಕಚೇರಿ (ಆರ್ಟಿಓ) ಮೇಲೆ ಭ್ರಷ್ಟಾಚಾರ ನಿಗ್ರಹ ಅಧಿಕಾರಿಗಳು ದಾಳಿ ನಡೆಸಿ, ಲಕ್ಷಾಂತರ ರೂಪಾಯಿ ಅಕ್ರಮ ಹಣ ಪತ್ತೆ ಹಚ್ಚಿದ್ದಾರೆ.
ಆರ್ಟಿಓ ಅಧಿಕಾರಿಗಳು, ದಲ್ಲಾಳಿಗಳ ಉಪಟಳ ಕೇಳಿ ಬಂದ ಹಿನ್ನೆಲೆಯಲ್ಲಿ ಕೋರಮಂಗಲ ಆರ್ಟಿಓ ಕಚೇರಿ ಮೇಲೆ ದಾಳಿ ನಡೆಸಿದೆ. ದಾಖಲಾತಿ ಕೊಠಡಿಯ ಕಪಾಟಿನಲ್ಲಿ ಬಚ್ಚಿಟ್ಟಿದ್ದ 5.96 ಲಕ್ಷ ರೂ. ಪತ್ತೆ ಹಚ್ಚಿ ಜಪ್ತಿ ಮಾಡಿಕೊಂಡಿದ್ದಾರೆ.
ಆರ್ಟಿಓ ಕಚೇರಿ ಆವರಣದಲ್ಲಿ ಕೆಲಸ ಮಾಡುತ್ತಿದ್ದ ಏಜೆಂಟರ ಬಳಿ ಮೂಲ ಲೈಸೆನ್ಸ್ ಸ್ಮಾರ್ಟ್ ಕಾರ್ಡ್‌ಗಳು ಮತ್ತು ಇತರ ದಾಖಲೆಗಳು ಪತ್ತೆಯಾಗಿವೆ. ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಎಸಿಬಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.