ಬೆಂಗಳೂರು: 2020-21ನೇ ಸಾಲಿನ ವೈದ್ಯಕೀಯ/ದಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ಎಲ್ಲಾ ಅರ್ಹ ಅಭ್ಯರ್ಥಿಗಳಿಂದ ಮತ್ತು ಕರ್ನಾಟಕದ ಅಭ್ಯರ್ಥಿಗಳಿಗೆ ಆಯುಷ್ ಕೋರ್ಸ್ಗಳ ಪ್ರವೇಶಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.
ನೀಟ್-ಯುಜಿ 2020ರಲ್ಲಿ ನಿಗದಿಪಡಿಸಿರುವ ಕನಿಷ್ಠ ಅಂಕ ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ಅಭ್ಯರ್ಥಿಗಳು ಮಾತ್ರ ವೈದ್ಯಕೀಯ/ದಂತ ವೈದ್ಯಕೀಯ/ಆಯುಷ್ ಕೋರ್ಸ್ಗಳ ಪ್ರವೇಶಕ್ಕೆ ನೋಂದಣೆ ಮಾಡಿಕೊಳ್ಳಲು ಅರ್ಹರಿರುತ್ತಾರೆ.
ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ ಸೈಟ್ kea.kar.nic.in ಗೆ ಭೇಟಿ ನೀಡಬಹುದು..