ETV Bharat / city

ರಾಜ್ಯ ಹೈಕೋರ್ಟ್​​ನಲ್ಲಿ ಖಾಲಿ ಇರುವ 150 ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ - Applications are invited for the vacancy of 150 Typist posts in the State High Court

ಹೈಕೋರ್ಟ್​​ನಲ್ಲಿ ಖಾಲಿ ಇರುವ 150 ಬೆರಳಚ್ಚುಗಾರ (ಟೈಪಿಸ್ಟ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : Oct 29, 2021, 1:03 PM IST

ಬೆಂಗಳೂರು: ರಾಜ್ಯ ಹೈಕೋರ್ಟ್​​ನಲ್ಲಿ ಖಾಲಿ ಇರುವ 150 ಬೆರಳಚ್ಚುಗಾರ (ಟೈಪಿಸ್ಟ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಲೆ, ವಿಜ್ಞಾನ, ವಾಣಿಜ್ಯ, ವ್ಯವಹಾರ ನಿರ್ವಹಣೆ(ಬ್ಯುಸಿನೆಸ್ ಮ್ಯಾನೇಜ್ಮೆಂಟ್) ಹಾಗೂ ಕಂಪ್ಯೂಟರ್ ಅಪ್ಲಿಕೇಷನ್ಸ್ ವಿಷಯಗಳಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗಗಳು ಶೇ.55ರಷ್ಟು ಅಂಕ ಗಳಿಸಿರಬೇಕು. ಎಸ್​ಸಿ-ಎಸ್​ಟಿ ಅಭ್ಯರ್ಥಿಗಳು ಶೇ.50ರಷ್ಟು ಅಂಕಗಳೊಂದಿಗೆ ಪದವಿ ಪಡೆದಿರಬೇಕು. ಅದೇ ರೀತಿ ಆಂಗ್ಲ ಮತ್ತು ಕನ್ನಡದಲ್ಲಿ ಹಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದರ ಜತೆಗೆ ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರಬೇಕು.

ವೇತನ: ಅಂಗೀಕೃತ ಭತ್ಯೆಗಳೊಂದಿಗೆ 25,500 ರಿಂದ 81100 ರೂ (ದರ್ಜೆ -4)

ವಯೋಮಿತಿ: ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಕೊನೆಯ ದಿನಾಂಕದಂದು 18 ವರ್ಷ ಪೂರೈಸಿರಬೇಕು. ಎಸ್​​-ಎಸ್​ಟಿ, ಪ್ರವರ್ಗ-1 ರ ಅಭ್ಯರ್ಥಿಗಳು 40 ವರ್ಷ ಮೀರಿರಬಾರದು. ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 28 ವರ್ಷ ಮೀರಿರಬಾರದು. ಸಾಮಾನ್ಯ ಅಭ್ಯರ್ಥಿಗಳು 35 ವರ್ಷ ವಯಸ್ಸು ದಾಟಿರಬಾರದು.

ಇದನ್ನೂ ಓದಿ: ಆನ್‌ಲೈನ್‌ ಆಗ್ತಿದೆ ಧಾರವಾಡ ಹೈಕೋರ್ಟ್‌ ಕಾರ್ಯಕಲಾಪ; ವಕೀಲರು, ಕಕ್ಷಿದಾರರಿಗೂ ಅನುಕೂಲ

ಅರ್ಜಿಗಳನ್ನು ಆನ್ ಲೈನ್ ಮೂಲಕವೇ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 27 ಆಗಿದ್ದು, ಶುಲ್ಕ ಪಾವತಿಗೆ ನವೆಂಬರ್ 30 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಹೈಕೋರ್ಟ್ ವೆಬ್ ಸೈಟ್​​ಗೆ ಭೇಟಿ ನೀಡಬಹುದು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.