ಬೆಂಗಳೂರು: ಸೈನಿಕರ ಸೇವೆ ಕೇವಲ ಗಡಿ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರದೆ ದೇಶದ ಆಂತರಿಕ ಗಲಭೆಗಳನ್ನು ಹತ್ತಿಕ್ಕಲು ಸಹ ಸಹಕಾರಿ. ಸೈನಿಕರ ಕಲ್ಯಾಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ರೂಪಿಸಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 'ಒಂದು ಶ್ರೇಣಿ, ಒಂದು ಪೆನ್ಷನ್ ' ಬೇಡಿಕೆಯನ್ನು ಈಡೇರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಕಳೆದ ಏಳು ವರ್ಷದಲ್ಲಿ ಒಟ್ಟಾರೆಯಾಗಿ ಸುಮಾರು ಐವತ್ತು ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಆರ್ಥಿಕ ಸಹಾಯವನ್ನು ಮಾಜಿ ಸೈನಿಕರಿಗೆ ಹಾಗೂ ಅವರ ಕುಟುಂಬ ವರ್ಗದವರಿಗೆ ಒದಗಿಸಿಕೊಟ್ಟಿದ್ದಾರೆ. ಇದಕ್ಕಾಗಿ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಇದನ್ನೂ ಓದಿ: ಕೆಐಎಡಿಬಿ ಜಮೀನು ಹಂಚಿಕೆ ನೀತಿ ತಿದ್ದುಪಡಿಗೆ ಮುಂದಾದ ಸರ್ಕಾರ: ಏನಿದು ಉದ್ದೇಶಿತ ಹೊಸ ನೀತಿ?
ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಂತ್ರಸ್ತ ಕುಟುಂಬಗಳಿಗೆ ಅನುದಾನ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ನಿವೃತ್ತ ಮೇಜರ್ ಜನರಲ್ ಹರೀಶ್ ಎಸ್.ಶಾನುಭಾಗ್, ಭೂ, ನೌಕಾಪಡೆ, ವಾಯುಸೇನಾ ಅಧಿಕಾರಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.