ಬೆಂಗಳೂರು: ಆಮ್ಲಜನಕ ಸಿಲಿಂಡರ್ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಜುನಾಥ್, ರಾಜ್ ಕುಮಾರ್, ಅನಿಲ್ ಕುಮಾರ್ ಬಂಧಿತ ಆರೋಪಿಗಳು. ಕೊರೊನಾ ಸೋಂಕಿತರಿಗೆ ಆಕ್ಸಿಜನ್, ಬೆಡ್, ವೆಂಟಿಲೇಟರ್, ಅಗತ್ಯ ಔಷಧೋಪಚಾರಗಳ ಕೊರತೆಯ ನಡುವೆ ಕಾಳಸಂತೆಯಲ್ಲಿ ಮಾರಾಟ ಮುಂದುವರೆಯುತ್ತಲೇ ಇದೆ.
ಸದ್ಯ ಆಕ್ಸಿಜನ್ ಸಿಲಿಂಡರ್ಗಳನ್ನು ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.
ಓದಿ: ಹುಬ್ಬಳ್ಳಿಯಲ್ಲಿ ಆಕ್ಸಿಜನ್, ವೆಂಟಿಲೇಟರ್ ಬೆಡ್ಗಳು ಫುಲ್: ಸಾಮಾನ್ಯ ಬೆಡ್ ಮಾತ್ರ ಖಾಲಿ