ಬೆಂಗಳೂರು: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಶ್ರೀರಾಮಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕೆ.ಪಿ. ಅಗ್ರಹಾರದ ನಾರಾಯಣ್ (45) ಮತ್ತು ಶ್ರೀರಾಮಪುರದ ಈಶ್ವರ್ (34) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 22 ಕೆಜಿ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ್ದ ಬೈಕ್ ಜಪ್ತಿ ಮಾಡಲಾಗಿದೆ.
ಆರೋಪಿಗಳು ಏಪ್ರಿಲ್ 8ರ ಮಧ್ಯಾಹ್ನ ಗಾಂಜಾ ಮಾರಾಟಕ್ಕೆ ಸಂಜಯ್‌ಗಾಂಧಿ ನಗರದ ಕಡೆಗೆ ಬಂದಾಗ, ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ಆರೋಪಿ ರೌಡಿ ಶೀಟರ್ ನಾರಾಯಣ್ ವಿರುದ್ಧ ಈಗಾಗಲೇ 4 ಎನ್‌ಡಿಪಿಎಸ್ ಪ್ರಕರಣ, ನಂದಿನಿ ಲೇಔಟ್ ಠಾಣೆಯಲ್ಲಿ ಎನ್‌ಡಿಪಿಎಸ್ ಪ್ರಕರಣ ದಾಖಲಾಗಿವೆ.
ಜೊತೆಗೆ ಕೊಲೆ ಯತ್ನ ಪ್ರಕರಣದಲ್ಲಿ 8 ತಿಂಗಳ ಹಿಂದೆಯಷ್ಟೇ ಜೈಲುಪಾಲಾಗಿದ್ದ ಆರೋಪಿ ಒಂದೂವರೆ ತಿಂಗಳ ಹಿಂದೆ ಜಾಮೀನು ಪಡೆದು ಹೊರಬಂದಿದ್ದ ಎಂದು ತಿಳಿದುಬಂದಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ಲಗೇಜ್ ಸೋಗಿನಲ್ಲಿ ಬಸ್‌ನಲ್ಲಿ ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಓದಿ : ಮಾಟಮಂತ್ರದ ಶಂಕೆ, ಅಪರಿಚಿತ ಮಹಿಳೆಯನ್ನು ಹಿಡಿದು ಥಳಿಸಿದ ಗ್ರಾಮಸ್ಥರು: ವಿಡಿಯೋ