ETV Bharat / city

ಶಶಿಕಲಾ ಜೊಲ್ಲೆ ವಿರುದ್ಧ ಪ್ರತಿಭಟನೆ: ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ - ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಬಳಿ ಶಶಿಕಲಾ ಜೊಲ್ಲೆ ವಿರುದ್ಧ ಪ್ರತಿಭಟನೆ ನಡೆಸಿ, ಸಿಎಂ ನಿವಾಸಕ್ಕೆ ಮೆರವಣಿಗೆ ತೆರಳಲು ಮುಂದಾದ ಮಹಿಳಾ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ.

Arrests of women and youth congress activists
ಮಹಿಳಾ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ
author img

By

Published : Jul 24, 2021, 3:22 PM IST

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಪ್ರತಿಭಟನೆ ನಡೆಸಿ ಮೆರವಣಿಗೆಗೆ ಮುಂದಾದ ಮಹಿಳಾ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಮಹಿಳಾ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಬಳಿ ಶಶಿಕಲಾ ಜೊಲ್ಲೆ ವಿರುದ್ಧ ಪ್ರತಿಭಟನೆ ನಡೆಸಿ, ಶಶಿಕಲಾ ಜೊಲ್ಲೆ ಮೊಟ್ಟೆ ಕಳ್ಳಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಮಹಿಳಾ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿದರು. ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕೃತಿ ದಹಿಸಿ, ಚಪ್ಪಲಿ ಏಟು ಕೊಟ್ಟು ಕಾರ್ಯಕರ್ತೆಯರು ಪ್ರತಿಭಟಿಸಿದರು. ಇನ್ನೊಂದೆಡೆ ಯುವ ಕಾಂಗ್ರೆಸ್ ಕಾರ್ಯಕರ್ತರು ಸಹ ಶಶಿಕಲಾ ಜೊಲ್ಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಘೋಷಣೆ ಕೂಗಿ ರಾಜೀನಾಮೆಗೆ ಆಗ್ರಹಿಸಿದರು.

ಅರ್ಧ ಗಂಟೆಗೂ ಹೆಚ್ಚು ಕಾಲ ಕಾಂಗ್ರೆಸ್ ಭವನದ ಒಳಗೆ ಪ್ರತಿಭಟನೆ ನಡೆಸಿದ ಮಹಿಳಾ ಮತ್ತು ಯುವ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಿಎಂ ನಿವಾಸಕ್ಕೆ ಮೆರವಣಿಗೆ ತೆರಳಲು ಮುಂದಾದರು. ಈ ಸಂದರ್ಭ ಇವರನ್ನು ತಡೆದ ಪೊಲೀಸರು, ಬಂಧಿಸಿ ಕರೆದೊಯ್ದರು. ವಿಡಿಯೋ ಮೆರವಣಿಗೆ ತೆರಳಲು ಮುಂದಾದ ಕಾರ್ಯಕರ್ತರನ್ನು ಬಂಧಿಸಿದ ಸಂದರ್ಭದಲ್ಲಿ ಪೊಲೀಸರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಪೊಲೀಸರ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನೆಗೆ ತೆರಳುವ ಮುನ್ನ ಮಾತನಾಡಿದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್, ಸಚಿವ ಶಶಿಕಲಾ ಜೊಲ್ಲೆ ಶಾಲಾ ಮಕ್ಕಳಿಗೆ ನೀಡುವ ಮೊಟ್ಟೆಯಲ್ಲಿ ಅವ್ಯವಹಾರ ನಡೆಸಿದ್ದಾರೆ. ಮಕ್ಕಳ ಆಹಾರದ ವಿಚಾರದಲ್ಲಿಯೂ ಸಚಿವೆ ಅವ್ಯವಹಾರ ನಡೆಸಿರುವುದು ಅಕ್ಕಮ್ಮ. ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಇಲ್ಲವಾದರೆ ಕಾಂಗ್ರೆಸ್ ಪಕ್ಷ ಇನ್ನಷ್ಟು ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.

ಇದನ್ನೂ ಓದಿ: ‘ಅಪ್ಪ ನೇಣು ಬಿಗಿದುಕೊಂಡಿದ್ದಾರೆ, ಎದ್ದೇಳಮ್ಮ’... ಪೊಲೀಸ್​ ಅಧಿಕಾರಿ ಆತ್ಮಹತ್ಯೆಗೆ ಶರಣು!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.