ಬೆಂಗಳೂರು: ಅಸಾನಿ ಚಂಡಮಾರುತ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಮುಂದಿನ ದಿನಗಳಲ್ಲಿಯೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರವೂ ಹಲವೆಡೆ ಭರ್ಜರಿ ಮಳೆಯಾಗಿದೆ. ಚಾಮರಾಜನಗರದ ಹರದನಹಳ್ಳಿಯಲ್ಲಿ 19 ಮಿಮೀ ಮತ್ತು ಕೊಪ್ಪಳದ ಮುನಿರಾಬಾದ್‌ನಲ್ಲಿ 15 ಮಿಮೀ ಮಳೆ ಸುರಿದಿದೆ ಇಲಾಖೆ ತಿಳಿಸಿದೆ.
ಮೇ 10ರಂದು ರಾಜ್ಯದಲ್ಲಿ ಭಾರಿ ಮಳೆ ಸುರಿಯಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣ, ಒಡಿಶಾದ ಪುರಿಯತ್ತ ಚಂಡಮಾರುತ ಚಲಿಸುತ್ತಿದ್ದು, ಮೇ 10ರಿಂದ ಮೇ 12ರವರೆಗೆ ಈ ಭಾಗಗಳಲ್ಲಿ ಜೋರು ಮಳೆ ಬೀಳಲಿದೆ ಎಂಬ ಮಾಹಿತಿ ಇದೆ.
ಮೀನುಗಾರರಿಗೆ ಎಚ್ಚರಿಕೆ: ಗಂಟೆಗೆ 100 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಎತ್ತರ ಅಲೆಗಳೇಳುತ್ತಿದ್ದು ಮೀನುಗಾರರು ಸಮುದ್ರಕ್ಕಿಳಿಯದಂತೆ ಹಾಗೂ ಅಕ್ಕಪಕ್ಕದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಸಾರಿಗೆ ಇಲಾಖೆಯ ತಾತ್ಕಾಲಿಕ ಹುದ್ದೆಗಳು ಒಂದು ವರ್ಷ ಮುಂದುವರಿಕೆ