ETV Bharat / city

1,801 ಪ್ರೌಢಶಾಲೆ ಸಹ ಶಿಕ್ಷಕ ಹುದ್ದೆಗಳ ಭರ್ತಿಗೆ ಕ್ರಮ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ರಾಜ್ಯದಲ್ಲಿ ಖಾಲಿ ಇರುವ ಪ್ರೌಢಶಾಲೆ ಸಹ ಶಿಕ್ಷಕ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

Assembly Session Question Hour update
1801 ಸಹ ಶಿಕ್ಷಕ ಹುದ್ದೆಗಳ ಭರ್ತಿಗೆ ಕ್ರಮ-ಶಿಕ್ಷಣ ಸಚಿವ ಬಿ.ಸಿ.ನಾಗೇಶ್
author img

By

Published : Sep 16, 2021, 7:45 PM IST

ಬೆಂಗಳೂರು: ರಾಜ್ಯದಲ್ಲಿ 3,590 ಪ್ರೌಢಶಾಲೆ ಸಹ ಶಿಕ್ಷಕ ಹುದ್ದೆಗಳು ಖಾಲಿಯಿದ್ದು, 1,801 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಶಾಸಕ ಟಿ.ಎನ್.ಬಾಲಕೃಷ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 1,801 ಶಿಕ್ಷಕರ ಹುದ್ದೆ ಭರ್ತಿ ಮಾಡಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಣಕಾಸು ಇಲಾಖೆಯ ಅನುಮತಿ ಪಡೆದು ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 47 ಸರ್ಕಾರಿ ಪ್ರೌಢಶಾಲೆಗಳಿದ್ದು, 51 ಆಂಗ್ಲ ಭಾಷಾ ಶಿಕ್ಷಕರ ಹುದ್ದೆಗಳು ಮಂಜೂರಾಗಿವೆ. 11 ಹುದ್ದೆಗಳು ಖಾಲಿ ಇವೆ. ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದರು.

'ಕಾಲೇಜುಗಳಲ್ಲಿ ಹೆಚ್ಚುವರಿ ವರ್ಗ ತೆರೆಯಲು ಅನುಮತಿ'

ಶಾಸಕ ಸುಬ್ಬಾರೆಡ್ಡಿ ಪ್ರಶ್ನೆಗೆ ಉತ್ತರಿಸಿ, ಪ್ರಸಕ್ತ ಸಾಲಿನಲ್ಲಿ ಶೇ.100ಕ್ಕೆ ನೂರರಷ್ಟು ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಂದಿರುವುದರಿಂದ ಕಾಲೇಜುಗಳಲ್ಲಿ ಹೆಚ್ಚುವರಿ ವರ್ಗ(ಸೆಕ್ಷನ್)ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಕೋವಿಡ್ ಕಾರಣದಿಂದ ಎಸ್‌ಎಸ್‌ಎಲ್‌ಸಿ 100ಕ್ಕೆ ನೂರು ಫಲಿತಾಂಶವನ್ನು ಪ್ರಕಟಿಸಿದ್ದೇವೆ. ಹೀಗಾಗಿ ವಿದ್ಯಾರ್ಥಿಗಳ ಪ್ರವೇಶಾತಿ ಸಂಖ್ಯೆ ಹೆಚ್ಚಾಗಿದೆ. 70ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದರೆ ಎರಡು ವರ್ಗಗಳನ್ನು ತೆರೆಯಲು ಅನುಮತಿ ನೀಡಿದ್ದೇವೆ. ಒಂದು ವರ್ಗದಲ್ಲಿ 50 ವಿದ್ಯಾರ್ಥಿಗಳು ಮಾತ್ರ ಇರಬೇಕು ಎಂದು ಹೇಳಿದರು.

ರಾಜ್ಯದಲ್ಲಿ 361 ಕಾಲೇಜುಗಳ ಅವಶ್ಯಕತೆಯಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಚರ್ಚಿಸಿದ್ದೇವೆ. ಹಣಕಾಸು ಇಲಾಖೆ ಅಕಾರಿಗಳ ಜೊತೆ ಚರ್ಚೆ ನಡೆಸಲಾಗುವುದು. ಕಾಲೇಜುಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಸರ್ಕಾರ ಬದ್ಧವಿದೆ ಎಂದು ಸದನಕ್ಕೆ ತಿಳಿಸಿದರು.

ಶಾಸಕ ದೇವಾನಂದ್ ಪೂಲಾಸಿಂಗ್ ಚವ್ಹಾಣ್ ಪ್ರಶ್ನೆಗೆ ಉತ್ತರಿಸಿದ ಸಚಿವ ನಾಗೇಶ್, ಈಗಾಗಲೇ ಮುಖ್ಯಮಂತ್ರಿಗಳು ಶಿಕ್ಷಕರ ದಿನಾಚರಣೆಯಂದು 5,000 ಶಿಕ್ಷಕರನ್ನು ನೇಮಕಾತಿ ಮಾಡುವುದಾಗಿ ಘೋಷಿಸಿದ್ದಾರೆ. ನಾವು ಶಿಕ್ಷಕರನ್ನು ಟಿಇಇ ಮೂಲಕ ನೇಮಕ ಮಾಡಿಕೊಳ್ಳುತ್ತೇವೆ. ಶಾಲೆಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲಾಗುವುದು ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.