ಬೆಂಗಳೂರು : ಬೆಂಗಳೂರಿನಲ್ಲಿ ಅಟಲ್ ಬಿಹಾರಿ ವಾಜಪೇಯಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜು ಪ್ರಾರಂಭಿಸಲು ಅನುಮತಿ ನೀಡಲಾಗಿದೆ. ಇದೇ 2021-22ನೇ ಶೈಕ್ಷಣಿಕ ಸಾಲಿನಿಂದ ಕಾರ್ಯಾರಂಭ ಮಾಡಲಿದೆ ಅಂತಾ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ. ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಗುಣಾತ್ಮಕ ಹಾಗೂ ಸಂಖ್ಯಾತ್ಮಕ ಬದಲಾವಣೆ ತರುವ ಹಾದಿಯಲ್ಲಿ ಇದು ಮತ್ತೊಂದು ಹೆಜ್ಜೆಯಾಗಲಿದೆ ಅಂತಾ ತಿಳಿಸಿದ್ದಾರೆ.
-
ಬೆಂಗಳೂರಿನಲ್ಲಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜು ಪ್ರಾರಂಭಿಸಲು ಅನುಮತಿ ನೀಡಲಾಗಿದ್ದು, ಇದೇ 2021-22ನೇ ಶೈಕ್ಷಣಿಕ ಸಾಲಿನಿಂದ ಕಾರ್ಯಾರಂಭ ಮಾಡಲಿದೆ.
— Dr Sudhakar K (@mla_sudhakar) August 21, 2021 " class="align-text-top noRightClick twitterSection" data="
ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಗುಣಾತ್ಮಕ ಹಾಗೂ ಸಂಖ್ಯಾತ್ಮಕ ಬದಲಾವಣೆ ತರುವ ಹಾದಿಯಲ್ಲಿ ಇದು ಮತ್ತೊಂದು ಹೆಜ್ಜೆಯಾಗಲಿದೆ.@BSBommai pic.twitter.com/CEAqbhXkhg
">ಬೆಂಗಳೂರಿನಲ್ಲಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜು ಪ್ರಾರಂಭಿಸಲು ಅನುಮತಿ ನೀಡಲಾಗಿದ್ದು, ಇದೇ 2021-22ನೇ ಶೈಕ್ಷಣಿಕ ಸಾಲಿನಿಂದ ಕಾರ್ಯಾರಂಭ ಮಾಡಲಿದೆ.
— Dr Sudhakar K (@mla_sudhakar) August 21, 2021
ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಗುಣಾತ್ಮಕ ಹಾಗೂ ಸಂಖ್ಯಾತ್ಮಕ ಬದಲಾವಣೆ ತರುವ ಹಾದಿಯಲ್ಲಿ ಇದು ಮತ್ತೊಂದು ಹೆಜ್ಜೆಯಾಗಲಿದೆ.@BSBommai pic.twitter.com/CEAqbhXkhgಬೆಂಗಳೂರಿನಲ್ಲಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜು ಪ್ರಾರಂಭಿಸಲು ಅನುಮತಿ ನೀಡಲಾಗಿದ್ದು, ಇದೇ 2021-22ನೇ ಶೈಕ್ಷಣಿಕ ಸಾಲಿನಿಂದ ಕಾರ್ಯಾರಂಭ ಮಾಡಲಿದೆ.
— Dr Sudhakar K (@mla_sudhakar) August 21, 2021
ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಗುಣಾತ್ಮಕ ಹಾಗೂ ಸಂಖ್ಯಾತ್ಮಕ ಬದಲಾವಣೆ ತರುವ ಹಾದಿಯಲ್ಲಿ ಇದು ಮತ್ತೊಂದು ಹೆಜ್ಜೆಯಾಗಲಿದೆ.@BSBommai pic.twitter.com/CEAqbhXkhg
ಈ ಕಾಲೇಜಿನಲ್ಲಿ 2021-22ನೇ ಸಾಲಿನಿಂದ 100 ಸೀಟುಗಳ ಪ್ರವೇಶ ಮಿತಿಯುಳ್ಳ ಬಿಎಸ್ಸಿ ನರ್ಸಿಂಗ್ ಕೋರ್ಸ್ ಅನ್ನು ಹೊಸದಾಗಿ ಪ್ರಾರಂಭಿಸಲಾಗುತ್ತಿದೆ. ಕೋರ್ಸುಗಳ ಸಂಯೋಜನೆಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಂಜೂರಾತಿ ಪಡೆಯಬೇಕಿದೆ.
ವಿಶ್ವವಿದ್ಯಾಲಯವು ನಿಗದಿಪಡಿಸಿರುವ ಪರಿನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು ಅಂತಾ ಆದೇಶಿಸಲಾಗಿದೆ. ಜೊತೆಗೆ ವಿವಿ ನಿಗದಿಪಡಿಸಿರುವ ಮೂಲಸೌಲಭ್ಯಗಳನ್ನು ಕಡ್ಡಾಯವಾಗಿ ಹೊಂದಿರಬೇಕು.
ಸಂಸ್ಥೆಯು ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅನುಮೋದನೆ ಪಡೆದ ನಂತರವೇ, ನಿಗದಿಪಡಿಸಿರುವ ವಿದ್ಯಾರ್ಥಿಗಳ ಪ್ರವೇಶ ಪಡೆಯಬೇಕಿದೆ. ಯಾವುದೇ ಕಾರಣಕ್ಕೂ ಹೆಚ್ಚುವರಿ ವಿದ್ಯಾರ್ಥಿಗಳ ಪ್ರವೇಶ ಪಡೆಯುವಂತಿಲ್ಲ. ಇದನ್ನು ಉಲ್ಲಂಘಿಸಿದಲ್ಲಿ 1991ರ ಕರ್ನಾಟಕ ಮಾನ್ಯತೆ ರಹಿತ ಮತ್ತು ಅಸಂಯೋಜಿತ ಶಿಕ್ಷಣ ಸಂಸ್ಥೆಗಳಿಗೆ ವಿದ್ಯಾರ್ಥಿಗಳ ಪ್ರವೇಶ ನಿಷೇಧ ಅಧಿನಿಯಮದಡಿ ಕ್ರಿಮಿನಲ್ ಮೊಕದ್ದಮೆ ಹೂಡಲಾಗುತ್ತದೆ.
ಇದನ್ನೂ ಓದಿ: ರಾಜ್ಯದಲ್ಲಿಂದು 1,350 ಹೊಸ ಸೋಂಕಿತರು ಪತ್ತೆ: 18 ಮಂದಿ ಕೊರೊನಾಗೆ ಬಲಿ
ರಾಜ್ಯ ಸರ್ಕಾರ ಮತ್ತು ವಿಶ್ವವಿದ್ಯಾಲಯವು ಕಾಲಕಾಲಕ್ಕೆ ನೀಡುವ ಸೂಚನೆ ಹಾಗೂ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ. ಈ ಸಂಸ್ಥೆಗೆ ಕರ್ನಾಟಕ ಸರ್ಕಾರದ ವತಿಯಿಂದ ಯಾವುದೇ ರೀತಿಯ ಅನುದಾನ, ಆರ್ಥಿಕ ಸೌಲಭ್ಯಗಳನ್ನು ನೀಡುವುದಿಲ್ಲ. ಇದು ಶಾಶ್ವತ ಅನುದಾನ ರಹಿತ ಸಂಸ್ಥೆಯಾಗಿರುವ ಷರತ್ತಿಗೆ ಒಳಪಟ್ಟಿದೆ.