ಬೆಂಗಳೂರು : ಕೇವಲ ಆಟೋ ಚಲಾಯಿಸುವ ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ ಅಪ್ರಾಪ್ತ ಬಾಲಕನನ್ನು ಕೆಂಗೇರಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಹಗಲಿನಲ್ಲಿ ನಗರದ ವಿವಿಧೆಡೆ ಸುತ್ತಾಡುತ್ತಾ ಆಟೋಗಳನ್ನು ಗುರುತಿಸಿಕೊಳ್ಳುತ್ತಿದ್ದನಂತೆ. ರಾತ್ರಿ ವೇಳೆ ಅವುಗಳನ್ನು ಕದ್ದು ತೃಪ್ತಿಯಾಗುವವರೆಗೂ ಚಲಾಯಿಸುತ್ತಿದ್ದ ಎಂದು ತಿಳಿದು ಬಂದಿದೆ.
ಮಾರ್ಚ್ 11ರಂದು ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಮನೆ ಮುಂದೆ ನಿಲ್ಲಿಸಲಾಗಿದ್ದ ಆಟೋ ಕಳ್ಳತನವಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಇದೀಗ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಕದ್ದು ಬೇರೆಡೆಗಳಲ್ಲಿ ನಿಲ್ಲಿಸಿದ್ದ 15 ಲಕ್ಷ ಮೌಲ್ಯದ 6 ಆಟೋಗಳನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ : ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ನೀರು ಪಾಲು