ಬೆಂಗಳೂರು: ಕೊರೊನಾ ಹಿನ್ನೆಲೆ, ಒಂದು ತಿಂಗಳ ಕಾಲ ಲಾಕ್ಡೌನ್ಗೆ ಕರೆ ನೀಡಲಾಗಿತ್ತು. ಈ ವೇಳೆ ಆಟೋ, ಟ್ಯಾಕ್ಸಿ ಚಾಲಕರಿಗೆ 5,000 ಮೊತ್ತ ಪರಿಹಾರ ಘೋಷಣೆ ಮಾಡಲಾಗಿದ್ದು, ಆದರೆ ಎರಡೂವರೆ ತಿಂಗಳು ಕಳೆದರೂ ಸರ್ಕಾರದ ಭರವಸೆ ಇನ್ನೂ ಈಡೇರಿಲ್ಲ.
ರಾಜ್ಯದಲ್ಲಿರುವ 7 ಲಕ್ಷದ 75 ಸಾವಿರ ಆಟೋ, ಟ್ಯಾಕ್ಸಿ ಚಾಲಕರಿಗೆ ಕಳೆದ ಮಾರ್ಚ್ 6 ರಂದು 5 ಸಾವಿರ ರೂ. ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಆದರೆ, ಇದುವರೆಗೂ 1 ಲಕ್ಷದ 20 ಸಾವಿರ ಚಾಲಕರಿಗೆ ಮಾತ್ರ ಪರಿಹಾರದ ಹಣ ತಲುಪಿದೆ. ಸಾರಿಗೆ ಇಲಾಖೆ ಒಟ್ಟು 60 ಕೋಟಿ ರೂ. ಮಾತ್ರ ಪರಿಹಾರ ನೀಡಿದ್ದು, ಇನ್ನುಳಿದ ಪರಿಹಾರಕ್ಕೆ ಸಾವಿರಾರು ಅರ್ಜಿಗಳು ಬಂದಿದೆ.
ಇನ್ನುಳಿದ ಅರ್ಜಿಗಳಿಗೆ ಪರಿಹಾರ ನೀಡಲು ಕೋರಿ ಸಾರಿಗೆ ಇಲಾಖೆ ಎರಡು ಬಾರಿ ಸರ್ಕಾರಕ್ಕೆ ಪತ್ರ ಬರೆದಿದ್ದು, ಇದೀಗ ಮತ್ತೆ ಜುಲೈ 31ರೊಳಗೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ.