ETV Bharat / city

ಮೈಸೂರಿನ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ, ಕೇಂದ್ರ ಸಚಿವರಿಗೆ ಮನವಿ - ಧರ್ಮೇಂದ್ರ ಪ್ರಧಾನ್ ಜೊತೆ ದೆಹಲಿಯಲ್ಲಿ ಸುನೀಲ್ ಕುಮಾರ್ ಮಾತುಕತೆ

ಮೈಸೂರಿನ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ನೀಡುವ ಬಗ್ಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಜೊತೆ ದೆಹಲಿಯಲ್ಲಿಂದು ಸಚಿವ ಸುನೀಲ್ ಕುಮಾರ್ ಮಾತುಕತೆ ನಡೆಸಿದ್ದಾರೆ.

Sunil Kumar talks with Dharmendra Pradhan in Delhi
ಧರ್ಮೇಂದ್ರ ಪ್ರಧಾನ್ ಜೊತೆ ದೆಹಲಿಯಲ್ಲಿ ಸುನೀಲ್ ಕುಮಾರ್ ಮಾತುಕತೆ
author img

By

Published : Apr 6, 2022, 6:19 PM IST

ಬೆಂಗಳೂರು: ಮೈಸೂರಿನಲ್ಲಿರುವ ಕೇಂದ್ರೀಯ ಭಾರತೀಯ ಭಾಷಾ ಸಂಸ್ಥಾನ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ನೀಡುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಭರವಸೆ ನೀಡಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ನವದೆಹಲಿಯಲ್ಲಿಂದು ಧರ್ಮೇಂದ್ರ ಪ್ರಧಾನ್ ಅವರನ್ನು ವಿ.ಸುನಿಲ್ ಕುಮಾರ್ ಹಾಗು ಮೈಸೂರು ಹಾಗೂ ಕೊಡಗು ಸಂಸದ ಪ್ರತಾಪ್ ಸಿಂಹ ಅವರೊಂದಿಗೆ ಭೇಟಿ ಮಾಡಿ ಹಲವು ವಿಷಯಗಳ ಬಗ್ಗೆ ಚರ್ಚಿಸಿದರು.

ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ನೀಡಿದರೆ ಮಾತ್ರ ಅದು ರಚನಾತ್ಮಕ ಕಾರ್ಯಚಟುವಟಿಕೆ ಹಮ್ಮಿಕೊಳ್ಳಲು ಸಾಧ್ಯ ಎಂಬ ಸಂಗತಿಯನ್ನು ಕೇಂದ್ರ ಸಚಿವರಿಗೆ ಮನದಟ್ಟು ಮಾಡಿಕೊಡಲಾಗಿದೆ. ಕೇಂದ್ರ ಸಚಿವರು ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು ಎಂದು ಅವರು ತಿಳಿಸಿದ್ದಾರೆ.

ಹೆಚ್ಚಿನ ನೆರವಿಗೆ ಮನವಿ: ಇದೇ ಸಂದರ್ಭದಲ್ಲಿ ಕನ್ನಡ ಶಾಸ್ತ್ರೀಯ ಭಾಷಾ ಅಧ್ಯಯನ ಕೇಂದ್ರದ ಚಟುವಟಿಕೆಗಳಿಗೆ ಹೆಚ್ಚಿನ ಹಣಕಾಸು ನೆರವು ನೀಡುವಂತೆ ಮನವಿ ಸಲ್ಲಿಸಲಾಯಿತು. ಸಚಿವ ಪ್ರಧಾನ್ ಅವರು ಶೀಘ್ರದಲ್ಲಿಯೇ ಮೈಸೂರಿನಲ್ಲಿರುವ ಭಾಷಾ ಸಂಸ್ಥಾನ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಚಟುವಟಿಕೆಗಳನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ ಎಂದು ಸುನಿಲ್ ಕುಮಾರ್ ಹೇಳಿದರು.

ಇದನ್ನೂ ಓದಿ: ಮೋದಿ-ಬೊಮ್ಮಾಯಿಯಿಂದ ಬೆಲೆ ಏರಿಕೆ ಕಂಟ್ರೋಲ್‌.. ನಮೋ ಇರದಿದ್ರೇ ಪೆಟ್ರೋಲ್‌-ಡೀಸೆಲ್ ₹200ಆಗ್ತಿತ್ತು.. ಸಚಿವ ನಿರಾಣಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.