ETV Bharat / city

ರಾಷ್ಟ್ರೀಯ ಸೇವಾ ಯೋಜನೆಯ ಪ್ರಶಸ್ತಿ ಪ್ರಕಟ - ರಾಷ್ಟ್ರ ಪ್ರಶಸ್ತಿಗಳು

ರಾಷ್ಟ್ರೀಯ ಸೇವಾ ಯೋಜನೆ ಪ್ರಶಸ್ತಿಗಳು ಪ್ರಕಟಗೊಂಡಿವೆ. ಸೆಪ್ಟೆಂಬರ್ 24ರಂದು ರಾಷ್ಟ್ರೀಯ 6ಸೇವಾ ಯೋಜನೆಯ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಡೆಯುವ ರಾಷ್ಟ್ರಪತಿ ಭವನದ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ರಾಷ್ಟ್ರಪತಿಗಳು ನೀಡಲಿದ್ದಾರೆ.

Awards Announced of National Service scheme
ರಾಷ್ಟ್ರೀಯ ಸೇವಾ ಯೋಜನೆ
author img

By

Published : Sep 18, 2021, 1:33 PM IST

ಬೆಂಗಳೂರು: ರಾಷ್ಟ್ರೀಯ ಸೇವಾ ಯೋಜನೆಯ ಮುಖಾಂತರ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಗ್ರಾಮೀಣ ಸಮಾಜಗಳ ಸರ್ವಾಂಗೀಣ ಅಭಿವೃದ್ಧಿಗೆ ಮತ್ತು ಸಾಮಾಜಿಕ, ಶೈಕ್ಷಣಿಕವಾಗಿ ಸರ್ವತೋಮುಖ ಅಭಿವೃದ್ಧಿಯಲ್ಲಿ ಭಾಗಿಯಾಗುವ ವಿಶ್ವವಿದ್ಯಾಲಯಗಳು, ರಾಷ್ಟ್ರೀಯ ಸೇವಾ ಯೋಜನೆ ಸಂಯೋಜಕರು ಹಾಗೂ ಸ್ವಯಂಸೇವಕ ಸೇವಕಿಯರಿಗೆ ಭಾರತ ಸರ್ಕಾರದಿಂದ ರಾಷ್ಟ್ರ ಮಟ್ಟದಲ್ಲಿ ನೀಡುವ ರಾಷ್ಟ್ರ ಪ್ರಶಸ್ತಿಗಳು ಪ್ರಕಟವಾಗಿವೆ.

ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ವಿವಿಧ ಆಯಾಮಗಳಲ್ಲಿ ವಿಶ್ವವಿದ್ಯಾಲಯದ ಮುಖಾಂತರ ಸೇವೆ ಸಲ್ಲಿಸಿರುವ ಕರ್ನಾಟಕ ರಾಜ್ಯ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕಾರ್ಯಕ್ರಮ ಸಂಯೋಜಕರಾದ ಡಾ. ಬಿ. ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಪ್ರಶಸ್ತಿ (ವಿಶ್ವವಿದ್ಯಾಲಯ ಮಟ್ಟದ ರಾಷ್ಟ್ರೀಯ ಪ್ರಶಸ್ತಿಯ) ನೀಡಲಾಗುತ್ತದೆ.

ಕಾಲೇಜು ಮಟ್ಟದ ಕಾರ್ಯಕ್ರಮಗಳನ್ನು ಗಮನಿಸಿ ಅಧಿಕಾರಿಗಳಿಗೆ ನೀಡಲಾಗುವ ರಾಷ್ಟ್ರಪ್ರಶಸ್ತಿಯು ಧಾರವಾಡದ ಜೆಎಸ್‌ಎಸ್‌ ಬನಶಂಕರಿ ಕಲಾ ಮತ್ತು ವಾಣಿಜ್ಯ ಕಾರ್ಯಕ್ರಮ ಅಧಿಕಾರಿಗಳಾದ ಸುರೇಶಪ್ಪ ಕೆ ಸಜ್ಜನರಿಗೆ ಮತ್ತು ರಾಷ್ಟ್ರಮಟ್ಟದಲ್ಲಿ ಕಾರ್ಯನಿರ್ವಹಿಸಿದ ಸ್ವಯಂಸೇವಕ ಸೇವಕರಿಗೆ ನೀಡಲಾಗುವ ರಾಷ್ಟ್ರ ಪ್ರಶಸ್ತಿ ವಿಭಾಗದಲ್ಲಿ ಬೆಂಗಳೂರಿನ ಕೆಎಸ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಸ್ವಯಂಸೇವಕ ಸಿರೀಶ್ ಗೋವರ್ಧನ್ ಮತ್ತು ಮಂಗಳೂರಿನ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಸ್ವಯಂಸೇವಕಿ ಬಿಂದಿಯಾ ಶೆಟ್ಟಿ ಇವರುಗಳಿಗೆ ಕೊಡಲಾಗುತ್ತದೆ.

ಇದನ್ನೂ ಓದಿ: ಸಿದ್ದರಾಮಯ್ಯ ಹಿಂದೂ ವಿರೋಧಿ: ಬಿಜೆಪಿ ನಾಯಕ ಅರುಣ್ ಸಿಂಗ್ ಕಿಡಿ

ಕರ್ನಾಟಕದಿಂದ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿರುವ ಇವರುಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟೆಂಬರ್ 24ರಂದು ರಾಷ್ಟ್ರೀಯ 6ಸೇವಾ ಯೋಜನೆಯ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಡೆಯುವ ರಾಷ್ಟ್ರಪತಿ ಭವನದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ನೀಡಲಿದ್ದಾರೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಎನ್‌ಎಸ್‌ಎಸ್ ಅಭಿನಂದನೆ:

ಕರ್ನಾಟಕ ರಾಜ್ಯದ ಸರ್ವತೋಮುಖ ಬೆಳವಣಿಗೆಯಲ್ಲಿ ಕಾರಣೀಭೂತರಾದ ಮತ್ತು ಮಹಾತ್ಮ ಗಾಂಧೀಜಿಯವರ ಕನಸಿನ ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರ ಪ್ರಶಸ್ತಿಯನ್ನು ಪಡೆಯುತ್ತಿರುವ ಇವರುಗಳಿಗೆ ಕರ್ನಾಟಕ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಎನ್‌ಎಸ್‌ಎಸ್ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸಿದೆ. ಇವರುಗಳ ಸಾಧನೆಯು ಕೋವಿಡ್ ಸಂದರ್ಭದಲ್ಲಿ ಸಮಾಜಮುಖಿ ಕಾರ್ಯದಲ್ಲಿ ತೊಡಗಿದ ಎಲ್ಲ ರಾಜ್ಯದ ಸ್ವಯಂಸೇವಕ ಸೇವಕಿಯರಿಗೆ ಸ್ಫೂರ್ತಿದಾಯಕವಾಗಿದೆ ಎಂದ ಹೇಳಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.