ETV Bharat / city

ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಜೆ.ಪುಟ್ಟಸ್ವಾಮಿ ರಾಜೀನಾಮೆ - Karnataka State Policy and Planning Commission vice president B J Puttaswamy submitted resignation

ಕರ್ನಾಟಕ ರಾಜ್ಯ ನೀತಿ‌ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಜೆ.ಪುಟ್ಟಸ್ವಾಮಿ ರಾಜೀನಾಮೆ ಸಲ್ಲಿಸಿದ್ದು, ಲೌಕಿಕ ಜೀವನದಿಂದ ಆಧ್ಯಾತ್ಮಿಕದತ್ತ ಸಾಗುವುದಾಗಿ ಪ್ರಕಟಿಸಿದ್ದಾರೆ.

b-j-puttaswamy-resigned-to-vice-president-of-k-s-policy-and-planning-commission
ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆ ಪುಟ್ಟಸ್ವಾಮಿ ರಾಜೀನಾಮೆ..!
author img

By

Published : May 1, 2022, 6:54 AM IST

ಬೆಂಗಳೂರು: ಕರ್ನಾಟಕ ರಾಜ್ಯ ನೀತಿ‌ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಹುದ್ದೆಗೆ ಬಿ.ಜೆ.ಪುಟ್ಟಸ್ವಾಮಿ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು, ಲೌಕಿಕ ಜೀವನದಿಂದ ಆಧ್ಯಾತ್ಮಿಕ ಬದುಕಿನತ್ತ ಸಾಗುವುದಾಗಿ ತಿಳಿಸಿದ್ದಾರೆ. ಈ ಮೂಲಕ 50 ವರ್ಷಗಳ ರಾಜಕೀಯ ಜೀವನಕ್ಕೆ ವಿದಾಯ ಹೇಳಿದ್ದಾರೆ.

b-j-puttaswamy-resigned-to-vice-president-of-k-s-policy-and-planning-commission
ರಾಜೀನಾಮೆ ಪತ್ರ

ಸನ್ಯಾಸತ್ವ ಸ್ವೀಕಾರ: ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪ್ರಥಮ ಪೀಠಾಧಿಪತಿಯಾಗಲಿರುವ ಪುಟ್ಟಸ್ವಾಮಿ, ಮೇ 6ರಂದು ಸನ್ಯಾಸ ದೀಕ್ಷೆ ಪಡೆಯುವರು. ಮೇ 15 ರಂದು ಪಟ್ಟಾಭಿಷೇಕ ನಡೆಯಲಿದೆ. ನೆಲಮಂಗಲ ಸಮೀಪವಿರುವ ಈ ಮಠಕ್ಕೆ ಪೀಠಾಧಿಪತಿಯಾಗಲಿದ್ದು, ರಾಜರಾಜೇಶ್ವರಿ ಜಯೇಂದ್ರ ಸ್ವಾಮೀಜಿ ದೀಕ್ಷೆ ನೀಡಲಿದ್ದಾರೆ.

ಇದನ್ನೂ ಓದಿ : ಹಲಾಲ್ ಕಟ್ ವಿವಾದದ ಬೆನ್ನಲ್ಲೇ ಮುಸ್ಲಿಂ ಮಾಂಸ ವ್ಯಾಪಾರಿಗಳಿಗೆ ಶಾಕ್..

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.