ETV Bharat / city

ಆಜಾನ್ ವಿರುದ್ಧ ಅಭಿಯಾನ ಮಾಡುವವರು ಭಯೋತ್ಪಾದಕರು: ಬಿ.ಕೆ ಹರಿಪ್ರಸಾದ್ ವಾಗ್ದಾಳಿ

ಎಂಎಲ್​​ಸಿ ಮರಿತಿಬ್ಬೇಗೌಡ ಉಪನ್ಯಾಸಕರ ವರ್ಗಾವಣೆ ಬಗ್ಗೆ ಮಾಡುತ್ತಿರುವ ಪ್ರತಿಭಟನೆಗೆ ಕಾಂಗ್ರೆಸ್​ ಬೆಂಬಲ ಸೂಚಿಸುತ್ತದೆ. ಈ ವರ್ಗಾವಣೆಯಲ್ಲೂ ಸರ್ಕಾರ ಕಮಿಷನ್ ದಂಧೆ ಮಾಡಿದೆ ಎಂಬ ಊಹಾಪೋಹಗಳು ಬರುತ್ತಿದೆ. ಶಿಕ್ಷಕರ ವರ್ಗಾವಣೆಗೆ ಸರ್ಕಾರ ನೀತಿಯನ್ನು ತರಬೇಕು ಎಂದು ಬಿ.ಕೆ. ಹರಿಪ್ರಸಾದ್​ ಒತ್ತಾಯಿಸಿದರು.

Transfer of Lecturers
ಬಿ.ಕೆ ಹರಿಪ್ರಸಾದ್ ವಾಗ್ದಾಳಿ
author img

By

Published : May 9, 2022, 8:36 PM IST

ಬೆಂಗಳೂರು: ಯಾರು ಆಜಾನ್ ವಿರುದ್ಧ ಅಭಿಯಾನವನ್ನು ಪ್ರಾರಂಭ ಮಾಡುತ್ತಿದ್ದಾರೋ ಅವರು ಭಯೋತ್ಪಾದಕರು. ಅವರನ್ನು ಯುಎಪಿಎ ಅಡಿ ಬಂಧನ ಮಾಡಬೇಕು. ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಸಮಾಜ ವಿರೋಧಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಇವರು ಸಂಘ ಪರಿವಾರದ ಆಕ್ಟೋಪಸ್ ಇದ್ದ ಹಾಗೆ, ಅವರ ಕೈಯಲ್ಲಿ ಈ ಕೆಲಸ ಮಾಡಿಸುತ್ತಿದ್ದಾರೆ ಎಂದು ವಿಧಾನ ಪರಿಷತ್​​ನ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ವಿಕಾಸಸೌಧದಲ್ಲಿರುವ ಉನ್ನತ ಶಿಕ್ಷಣ ಸಚಿವರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಎಂಎಲ್​​ಸಿ ಮರಿತಿಬ್ಬೇಗೌಡ ಅವರಿಗೆ ಬೆಂಬಲ ಸೂಚಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಿಯೋಜನೆ ರದ್ದು ಹಾಗೂ ಉಪನ್ಯಾಸಕರ ವರ್ಗಾವಣೆ ನಡೆ ಅವೈಜ್ಞಾನಿಕವಾಗಿದೆ. ಸಚಿವರ ಗಮನಕ್ಕೆ ತರುವ ನಿಟ್ಟಿನಲ್ಲಿ ಪರಿಷತ್ ಸದಸ್ಯ ಮರಿತಿಬ್ಬೇಗೌಡರ ಧರಣಿಗೆ ಬೆಂಬಲ ನೀಡಿದ್ದೇವೆ. ಏಪ್ರಿಲ್, ಮೇ ತಿಂಗಳಲ್ಲಿ ಕಾಲೇಜು ಪರೀಕ್ಷೆ, ಮೌಲ್ಯಮಾಪನ ನಡೆಯುತ್ತಿದೆ. ಈ ಸಂದರ್ಭದಲ್ಲಿ ನಿಯೋಜನೆ ರದ್ದು ಹಾಗೂ ಅವೈಜ್ಞಾನಿಕ ವರ್ಗಾವಣೆ ಸರಿಯಲ್ಲ ಎಂದು ಹೇಳಿದರು.

ಆಜಾನ್ ವಿರುದ್ಧ ಅಭಿಯಾನ ಮಾಡುವವರು ಭಯೋತ್ಪಾದಕರು

ಸರ್ಕಾರ ಕಮಿಷನ್ ದಂಧೆ ನಡೆಯುತ್ತಿರುವುದು ಕುಖ್ಯಾತಿ ಆಗಿದೆ. ಶಿಕ್ಷಕರ ವರ್ಗಾವಣೆ ಕಮಿಷನ್ ದಂಧೆ ಊಹಾಪೋಹಗಳು ಇವೆ. ವರ್ಗಾವಣೆ ನೀತಿಯನ್ನು ಸರ್ಕಾರ ತರಬೇಕು. ಏಕಾಏಕಿ ವರ್ಗಾವಣೆ ಶಿಕ್ಷಣಕ್ಕೆ ಅಡ್ಡಿ ಆಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆ ತೊಂದರೆ ಆಗುತ್ತಿದೆ. ಮರಿತಿಬ್ಬೇಗೌಡರ ಧರಣಿ ಹಿನ್ನೆಲೆಯಲ್ಲಿ ಸಚಿವರು ಖುದ್ದಾಗಿ ಭೇಟಿ ನೀಡಿ ಮಾತನಾಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಸ್ನೇಹಿತರ ಜತೆ ಈಜುವ ಬೆಟ್ಟಿಂಗ್​​ ಕಟ್ಟಿ ಬಲಿಯಾದನಾ ಕೃಷಿಕ!?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.