ಬೆಂಗಳೂರು: ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಹಾಗೂ ರಾಜ್ಯಸಭಾ ಅಭ್ಯರ್ಥಿ ಆಯ್ಕೆ ವಿಚಾರದಲ್ಲೂ ಬಿ ಎಲ್ ಸಂತೋಷ್ ಪಾತ್ರವಿದೆ ಎಂದು ಪ್ರವಾಸೋದ್ಯಮ ಸಚಿವ ಸಿ ಟಿ ರವಿ ಅಭಿಪ್ರಾಯಪಟ್ಟಿದ್ದಾರೆ.
ವಿಧಾನಸೌಧದ ಬಳಿ ಮಾತನಾಡಿದ ಅವರು, ಬಿ ಎಲ್ ಸಂತೋಷ್ ನಮ್ಮ ರಾಷ್ಟ್ರೀಯ ನಾಯಕರು. ಅವರನ್ನು ಎಲ್ಲರೂ ಒಪ್ಪಿಕೊಂಡಿದ್ದಾರೆ. ಯಡಿಯೂರಪ್ಪ ಬಿ ಎಲ್ ಸಂತೋಷ್ ನಾಯಕತ್ವವನ್ನು ಒಪ್ಪಿಕೊಂಡಿಲ್ಲ ಎಂದು ಹೇಳಿದ್ದಾರಾ?. ಯಾರೂ ಒಪ್ಪಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂದರು.
ಇಬ್ಬರು ಕಾರ್ಯಕರ್ತರನ್ನು ಗುರುತಿಸಿ ನಮ್ಮ ಹೈಕಮಾಂಡ್ ಟಿಕೆಟ್ ನೀಡಿದೆ. ಹೈಕಮಾಂಡ್ ನಿರ್ಧಾರವನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಯಡಿಯೂರಪ್ಪನವರೇ ನಮ್ಮ ನಾಯಕರು. ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಿದ್ದೆವು. ನಾಯಕತ್ವ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು.