ಬೆಂಗಳೂರು: ವಿಶ್ವಾಸಮತ ಯಾಚನೆಯಲ್ಲಿ ಕುಮಾರಸ್ವಾಮಿ ವಿಫಲರಾದ ಹಿನ್ನೆಲೆಯಲ್ಲಿ ರಾಜ್ಯ ಸಮ್ಮಿಶ್ರ ಸರ್ಕಾರ ಪತನಗೊಂಡಿದೆ. ಹೀಗಾಗಿ ಬಿಎಸ್ವೈ ಸರ್ಕಾರದ ಆಡಳಿತ ಆರಂಭಕ್ಕೆ ಕ್ಷಣಗಣನೆ ಆರಂಭಗೊಂಡಿದೆ.
ವಿಶ್ವಾಸಮತ ಯಾಚನೆಯಲ್ಲಿ ಸಿಎಂ ಕುಮಾರಸ್ವಾಮಿ ಪರವಾಗಿ ಕೇವಲ 99 ಸದಸ್ಯರು ಬೆಂಬಲ ವ್ಯಕ್ತಪಡಿಸಿದರು. ಬಿಜೆಪಿ ಪರವಾಗಿ 105 ಸದಸ್ಯರು ಬೆಂಬಲ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ವಿಶ್ವಾಸಮತ ಯಾಚನೆಯ ಗೆಲುವು ಬಿಜೆಪಿಯದ್ದಾಯಿತು.
ವಿಶ್ವಾಸಮತ ಯಾಚನೆಯಲ್ಲಿ ಸಿಎಂ ಕುಮಾರಸ್ವಾಮಿ ಸೋತ ಹಿನ್ನೆಲೆಯಲ್ಲಿ ಸದನದಲ್ಲೇ ಬಿಜೆಪಿ ಸದಸ್ಯರು ಹರ್ಷ ವ್ಯಕ್ತಪಡಿಸಿದರು. ಬಿ ಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಸಂಭ್ರಮ ವ್ಯಕ್ತಪಡಿಸಿದರು.
ಬಳಿಕ ಮಾತನಾಡಿದ ಬಎಸ್ವೈ, ಇದು ಪ್ರಜಾಪ್ರಭುತ್ವದ ಗೆಲುವು. 14 ತಿಂಗಳ ಕುಮಾರಸ್ವಾಮಿ ಸರ್ಕಾರದ ಆಡಳಿತದ ನೋಡಿ ರಾಜ್ಯದ ಜನತೆ ಬೇಸತ್ತಿದ್ದರು. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಆರಂಭಗೊಳ್ಳಲಿದೆ. ನಾಡಿನ ಅನ್ನದಾತರ ಕಷ್ಟಕ್ಕೆ ಸ್ಪಂದಿಸುವಲ್ಲಿ ಹೆಚ್ಚು ಒತ್ತು ನೀಡುತ್ತೇನೆ ಎಂದು ಬಿಎಸ್ವೈ ಹೇಳಿದ್ದಾರೆ.
ಗುರುವಾರ ಮುಖ್ಯಮಂತ್ರಿಯಾಗಿ ಬಿಎಸ್ವೈ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.