ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ರಾಜಕೀಯ ಜಂಜಾಟ ಬದಿಗಿಟ್ಟು, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕುಟುಂಬ ಸಮೇತರಾಗಿ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.
ಇತ್ತೀಚೆಗಷ್ಟೇ ದುಬೈ ಪ್ರವಾಸ ಮುಗಿಸಿ ಬಂದಿದ್ದ ಬಿಎಸ್ವೈ ಇದೀಗ ಮತ್ತೆ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿದ್ದಾರೆ. ಕುಟುಂಬ ಸಮೇತ ಲಂಡನ್ಗೆ ತೆರಳಿದ ಯಡಿಯೂರಪ್ಪ 5 ದಿನಗಳ ಕಾಲ ಲಂಡನ್ ಪ್ರವಾಸ ಮುಗಿಸಿ ವಾಪಸ್ ಆಗಲಿದ್ದಾರೆ. ಯಡಿಯೂರಪ್ಪ ಜೊತೆ ಪುತ್ರರಾದ ಬಿ.ವೈ. ವಿಜಯೇಂದ್ರ, ಸಂಸದ ಬಿ ವೈ ರಾಘವೇಂದ್ರ ಸೇರಿದಂತೆ ಕುಟುಂಸ್ಥರೆಲ್ಲ ಲಂಡನ್ ಪ್ರವಾಸಕ್ಕೆ ತೆರಳಿದ್ದಾರೆ.
ಇದನ್ನೂ ಓದಿ: ದುಬೈನ ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ ಮಾಜಿ ಸಿಎಂ ಬಿಎಸ್ವೈ ಕುಟುಂಬ