ETV Bharat / city

ಅಭಿವೃದ್ಧಿಗೆ ಒತ್ತು ನೀಡುವ ಅತ್ಯುತ್ತಮ ಆಯವ್ಯಯ: ಬೊಮ್ಮಾಯಿ ಬಜೆಟ್ ಶ್ಲಾಘಿಸಿದ ಬಿಎಸ್​ವೈ - ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೆಚ್ಚುಗೆ

ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಗಳಾದ ಎತ್ತಿನಹೊಳೆ, ಮೇಕೆದಾಟು, ಭದ್ರಾ ಮೇಲ್ದಂಡೆ ಹಾಗೂ ತುಂಗಭದ್ರಾ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಅನುದಾನ ಒದಗಿಲಾಗಿದೆ ಎಂದು ಬಿಎಸ್​ವೈ ತಿಳಿಸಿದ್ದಾರೆ.

BSY
ಯಡಿಯೂರಪ್ಪ
author img

By

Published : Mar 4, 2022, 4:53 PM IST

Updated : Mar 4, 2022, 5:00 PM IST

ಬೆಂಗಳೂರು: ಸರ್ವರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಹಾಗೂ ರಾಜ್ಯದ ಎಲ್ಲಾ ಭಾಗಗಳ ಸಮಗ್ರ ಅಭಿವೃದ್ಧಿ ಒಳಗೊಳ್ಳುವ ಜೊತೆಗೆ ಕೋವಿಡ್​​ನಿಂದಾದ ಆರ್ಥಿಕ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ಸಹ ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡು ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ದೀರ್ಘಕಾಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡುವ ಅತ್ಯುತ್ತಮವಾದ ಆಯವ್ಯಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್​​ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರೈತರಿಗೆ ಹೆಚ್ಚಿನ ನೆರವು: ಬಸವರಾಜ ಬೊಮ್ಮಾಯಿ ಮಂಡಿಸಿರುವ 2022-23 ನೇ ಸಾಲಿನ ಆಯವ್ಯಯವು ಅಭಿವೃದ್ಧಿಪರ, ಸರ್ವರನ್ನೂ ಒಳಗೊಂಡು ಸರ್ವಸ್ಪರ್ಶಿಯಾಗಿ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣದ ಉದ್ದೇಶವನ್ನು ಒಳಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಂಕಲ್ಪದಂತೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ದೃಷ್ಟಿಯಲ್ಲಿ ಕೃಷಿಗೆ ಪೂರಕವಾಗಿದ್ದು, ರೈತರಿಗೆ ಹೆಚ್ಚಿನ ನೆರವನ್ನು ಒದಗಿಸುವ ಉದ್ದೇಶ ಹೊಂದಿದೆ. ರೈತರಿಗೆ ಪ್ರತಿ ಎಕರೆಗೆ 250 ರೂ.ರಂತೆ ಡೀಸೆಲ್‌ ಸಹಾಯಧನವನ್ನು ನೀಡುವ ರೈತಶಕ್ತಿ ಮತ್ತು ಕೊಯ್ಲೋತ್ತರ ನಿರ್ವಹಣೆ ಹಾಗೂ ರಫ್ತು ಮಾಡಲು ಅನುದಾನ ಒದಗಿಸಿರುವುದು ಹಾಗೂ ಹೈನುಗಾರಿಕೆಗೆ ಪ್ರೋತ್ಸಾಹ ನೀಡಲು ರಾಜ್ಯದಲ್ಲಿ 'ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್‌' ಸ್ಥಾಪನೆ ಮಾಡಲು ಯೋಜನೆ ರೂಪಿಸಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಶಿಕ್ಷಣಕ್ಕೆ ಒತ್ತು: ರೈತರ ಆರೋಗ್ಯ ರಕ್ಷಣೆಗೆ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿಗೊಳಿಸಲು ಉದ್ದೇಶಿಸಲಾಗಿದೆ. ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಗಳಾದ ಎತ್ತಿನಹೊಳೆ, ಮೇಕೆದಾಟು, ಭದ್ರಾ ಮೇಲ್ದಂಡೆ ಹಾಗೂ ತುಂಗಭದ್ರಾ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಅನುದಾನ ಒದಗಿಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬಡ ಮಕ್ಕಳಿಗೆ 'ಮುಖ್ಯಮಂತ್ರಿ ವಿದ್ಯಾರ್ಥಿ ಮಾರ್ಗದರ್ಶಿನಿ' ಎಂಬ ಉಚಿತ ಆನ್‌ಲೈನ್‌ ಕೋಚಿಂಗ್‌ ವ್ಯವಸ್ಥೆಯನ್ನು ಪ್ರಾರಂಭಿಸಲು ಯೋಜನೆ ರೂಪಿಸುವ ಮೂಲಕ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ ಎಂದಿದ್ದಾರೆ.

'ಜಲ ಜೀವನ್‌ ಮಿಷನ್' ಯೋಜನೆ: ಪರಿಶಿಷ್ಟ ಜಾತಿ/ಪ.ಪಂಗಡ ಮತ್ತು ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಮತ್ತು ಇತರೆ ಮಕ್ಕಳ ಉನ್ನತ ವಿದ್ಯಾಭ್ಯಾಸ ಪ್ರೋತ್ಸಾಹಿಸಲು ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ಬೃಹತ್ತಾದ 1,000 ವಿದ್ಯಾರ್ಥಿ ಸಾಮರ್ಥ್ಯದ 'ದೀನ್‌ ದಯಾಳ್‌ ಉಪಾಧ್ಯಾಯ ಸೌಹಾರ್ಧ ವಿದ್ಯಾರ್ಥಿ ನಿಲಯ' ಸ್ಥಾಪಿಸಲು ಉದ್ದೇಶಿಸಿರುವುದು ವಿದ್ಯಾರ್ಥಿಗಳಲ್ಲಿ ಭಾವೈಕ್ಯತೆ ಹಾಗೂ ಸೌಹಾರ್ದತೆಯ ಬೆಳವಣಿಗೆಗೆ ಪೂರಕವಾಗಲಿದೆ. ಹುಬ್ಬಳ್ಳಿಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಹೃದ್ರೋಗ ಸಂಸ್ಥೆಯನ್ನು ಸ್ಥಾಪಿಸುವುದು ಹಾಗೂ ಬೆಳಗಾವಿಯಲ್ಲಿ ಕಿದ್ವಾಯಿ ಕ್ಯಾನ್ಸರ್‌ ಕೇಂದ್ರವನ್ನು ಸ್ಥಾಪಿಸುವ ಮೂಲಕ ಜನರ ಆರೋಗ್ಯ ರಕ್ಷಣೆಗೆ ಸರ್ಕಾರ ಒತ್ತು ನೀಡಿದೆ. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡಲಾಗಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ 'ಜಲ ಜೀವನ್‌ ಮಿಷನ್' ಯೋಜನೆಗೆ ಪೂರಕವಾಗಿ ಪ್ರತಿ ಗ್ರಾಮೀಣ ಮನೆಗಳಿಗೆ 2024 ರೊಳಗಾಗಿ ಕುಡಿಯುವ ನೀರನ್ನು ತಲುಪಿಸುವ ಯೋಜನೆಗೆ ಹೆಚ್ಚು ಒತ್ತು ನೀಡಲಾಗಿದ್ದು, ಇದಕ್ಕಾಗಿ 7,000 ಕೋಟಿಗಳ ವೆಚ್ಚದ ಗುರಿ ಹೊಂದಲಾಗಿದೆ‌ ಎಂದು ಶ್ಲಾಘನೀಯ ಎಂದಿದ್ದಾರೆ.

ಇದನ್ನೂ ಓದಿ: ಕಾಶಿಯಾತ್ರೆಗೆ 5 ಸಾವಿರ ರೂ ಸಹಾಯಧನ; ಧರ್ಮಸ್ಥಳ, ಕುಕ್ಕೆ, ಕೊಲ್ಲೂರು, ತಿರುಪತಿಗೆ ವಿಶೇಷ ಪ್ಯಾಕೇಜ್‌ ಟ್ರಿಪ್

'ನವ ಕರ್ನಾಟಕದಿಂದ ನವ ಭಾರತ ನಿರ್ಮಾಣ' ಎಂಬ ಪರಿಕಲ್ಪನೆಯಡಿಯಲ್ಲಿ ಪರಿಸರ ಸ್ನೇಹಿ ನವನಗರಗಳನ್ನು ನಿರ್ಮಿಸಲು ಉದ್ದೇಶಿಸಿರುವುದು 'ಸಾಗರಮಾಲಾ' ಯೋಜನೆಯಡಿ ಪ್ರಮುಖ ಬಂದರುಗಳ ಅಭಿವೃದ್ಧಿ, ಹೊಸ ರೈಲು ಮಾರ್ಗಗಳ ಅಭಿವೃದ್ಧಿಯ ಮೂಲಕ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತುನೀಡಿ ಆ ಮೂಲಕ ಬಂಡವಾಳ ಹೂಡಿಕೆಗೆ ಹೆಚ್ಚಿನ ಸಹಾಯ ಮಾಡಲು ಉದ್ದೇಶಿಸಲಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಗೆ ಹೆಚ್ಚು ಸಹಾಯಕವಾಗಲಿದೆ ಎಂದಿದ್ದಾರೆ.

ವಿಶ್ವದರ್ಜೆಯ ನಗರದ ಕನಸು: ಬೆಂಗಳೂರು ಅಭಿವೃದ್ಧಿಗೂ ಹೆಚ್ಚಿನ ಒತ್ತು ನೀಡಿದ್ದು, ಮೆಟ್ರೋ ಹಂತ-3, ಫೆರಿಫೆರಲ್‌ ರಿಂಗ್‌ ರಸ್ತೆ ನಿರ್ಮಾಣದ ಉದ್ದೇಶ, ರಾಜಕಾಲುವೆಗಳ ಅಭಿವೃದ್ಧಿಗೆ 1,500 ಕೋಟಿ ಅನುದಾನ ಒದಗಿಸಿರುವುದು, ಅಮೃತ್ ನಗರೋತ್ಥಾನದ ಮೂಲಕ 6,000 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಿರುವುದು ವಿಶ್ವದರ್ಜೆಯ ನಗರವನ್ನಾಗಿ ರೂಪಿಸುವಲ್ಲಿ ಸಹಕಾರಿಯಾಗಲಿದೆ. ದೀರ್ಘಕಾಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡುವ ಅತ್ಯುತ್ತಮವಾದ ಆಯವ್ಯಯವಾಗಿದೆ ಎಂಬುದು ನನ್ನ ಅಭಿಪ್ರಾಯ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

Last Updated : Mar 4, 2022, 5:00 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.