ETV Bharat / city

ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ನೀಡಲು ಪ್ರತ್ಯೇಕ ಆಯೋಗ ರಚನೆಗೆ ಆಗ್ರಹ

ಸುಪ್ರೀಂಕೋರ್ಟ್ ನಿರ್ದೇಶನದಂತೆ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಯನ್ನು ನೀಡಲು ಪ್ರತ್ಯೇಕವಾದ ಆಯೋಗವನ್ನು ರಚಿಸಬೇಕು ಎಂದು ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಒತ್ತಾಯಿಸಿದೆ.

backward community group urging as political reservations for the backward classes
ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಅಧ್ಯಕ್ಷರಾದ ಎಂ.ಸಿ. ವೇಣುಗೋಪಾಲ್
author img

By

Published : Mar 6, 2022, 8:51 AM IST

ಬೆಂಗಳೂರು: ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೂ ಮೊದಲು ಸರ್ಕಾರ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಅಧ್ಯಕ್ಷ ಎಂ.ಸಿ.ವೇಣುಗೋಪಾಲ್ ಆಗ್ರಹಿಸಿದ್ದಾರೆ.

ಶನಿವಾರದಂದು ಬೆಂಗಳೂರಿನ ಶಾಸಕರ ಭವನದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಒಡಿಶಾ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ನೀಡದೇ ಚುನಾವಣೆಗಳನ್ನು ನಡೆಸಲಾಗಿದೆ. ಆ ರೀತಿ ಕರ್ನಾಟಕದಲ್ಲಿ ಆಗಬಾರದು. ಚುನಾವಣೆಗೆ ಮುನ್ನವೇ ಮೀಸಲಾತಿಯನ್ನು ಜಾರಿಗೊಳಿಸಬೇಕು.

ಹಿಂದುಳಿದ ವರ್ಗಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಹಾಗೂ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಯನ್ನು ನೀಡಲು ಪ್ರತ್ಯೇಕವಾದ ಆಯೋಗವನ್ನು ರಚಿಸಬೇಕು ಎಂದು ಅವರು ಒತ್ತಾಯಿಸಿದರು.

ಈಗಾಗಲೇ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯು ತಮ್ಮ ಪ್ರಮುಖ ಐದು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳಿಗೆ ಮನವಿ ಸಲ್ಲಿಸಿದೆ. ಮುಖ್ಯವಾಗಿ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ, ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎಗೆ ಸೇರಿಸಬಾರದು, ಹೆಚ್.ಕಾಂತರಾಜು ವರದಿಯನ್ನು ಜಾರಿಗೊಳಿಸಬೇಕು, ಸುಭಾಷ್ ಅಡಿ ಸಮಿತಿಯನ್ನು ರದ್ದುಗೊಳಿಸಬೇಕು, ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ಕರ್ನಾಟಕದ 73 ಜಾತಿ ಉಪಜಾತಿಗಳನ್ನು ಸೇರಿಸಬೇಕು ಎಂಬುದರ ಬಗ್ಗೆ ಈಗಾಗಲೇ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್. ಈಶ್ವರಪ್ಪ, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಜಂಬಿ ದುರ್ಗಾಪರಮೇಶ್ವರಿ ದೇಗುಲದಲ್ಲಿ ಭ್ರಷ್ಟಾಚಾರ ಆರೋಪ: ಜೀರ್ಣೋದ್ಧಾರ ಸಮಿತಿಯಿಂದ ಸ್ಪಷ್ಟನೆ

ನಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಆದರೆ ಈವರೆಗೆ ಯಾವುದೇ ಸಮರ್ಪಕವಾದ ಉತ್ತರಗಳು ಬಂದಿಲ್ಲ. ಒಂದು ವೇಳೆ ನಮ್ಮ ಬೇಡಿಕೆಗಳನ್ನು ಈಡೇರಿಸದೇ ಇದ್ದರೆ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ನಡೆಸುವುದರ ಜೊತೆಗೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಂ.ಸಿ. ವೇಣುಗೋಪಾಲ್ ಎಚ್ಚರಿಕೆ ನೀಡಿದರು.

ಇದೇ ವೇಳೆ ವಸತಿ ಸೌಲಭ್ಯದಿಂದ ವಂಚಿತರಾದ ಅತಿ ಹಿಂದುಳಿದ ವರ್ಗಗಳಿಗೆ ವಸತಿ ಸೌಕರ್ಯಗಳನ್ನು ಕಲ್ಪಿಸುವಂತೆ ವಸತಿ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.