ETV Bharat / city

ಭೂ ಕಬಳಿಕೆ ವಿರುದ್ಧ ಬಿಡಿಎ ಕಾರ್ಯಾಚರಣೆ: 100 ಕೋಟಿ ರೂ ಮೌಲ್ಯದ ಆಸ್ತಿ ವಶ - ಜೆಪಿ ನಗರ ಬಡಾವಣೆ ಬಿಡಿಎ ಭೂಸ್ವಾಧೀನ ಕಾರ್ಯಾಚರಣೆ

ಭೂಕಬಳಿಕೆದಾರ ವಿರುದ್ಧ ತೊಡೆ ತಟ್ಟಿರುವ ಬಿಡಿಎ ಕಾರ್ಯಾಚರಣೆ ಮುಂದುವರೆಸಿದೆ. ಇಂದು ನ್ಯಾಯಾಲಯದ ಆದೇಶದ ಮೇರೆಗೆ ಕಾರ್ಯಪಾಲಕ ಅಭಿಯಂತರ ಚುಂಚೇಗೌಡ, ಪೊಲೀಸ್ ವರಿಷ್ಠಾಧಿಕಾರಿ ಭಾಸ್ಕರ್, ಡಿವೈಎಸ್ ಪಿ ರವಿಕುಮಾರ್ ಸೇರಿದಂತೆ 75 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ತೆರವು ಕಾರ್ಯಾಚರಣೆ ನಡೆಸಲಾಯಿತು.

author img

By

Published : Nov 11, 2021, 7:47 PM IST

ಬೆಂಗಳೂರು: ಜೆ.ಪಿ.ನಗರದ ಆಲಹಳ್ಳಿಯಲ್ಲಿ 4 ಎಕರೆ 20 ಗುಂಟೆ ಸ್ವತ್ತು ಸ್ವಾಧೀನಪಡಿಸಿಕೊಳ್ಳುವ ಮೂಲಕ ಭೂಕಬಳಿಕೆದಾರರ ವಿರುದ್ಧ ಬಿಡಿಎ (Bangalore Development Authority) ಕಾರ್ಯಾಚರಣೆ ಮುಂದುವರಿಸಿದೆ.

ಸರ್ವೆ ಸಂಖ್ಯೆ 5/7, 6/1, 6/4, 6/5, 7/2, 3, 4 ಮತ್ತು 8 ರ 4 ಎಕರೆ 20 ಗುಂಟೆ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ 40 ಶೆಡ್​ಗಳನ್ನು ಬಿಡಿಎ ದಕ್ಷಿಣ ವಲಯದ ಕಾರ್ಯಪಾಲಕ ಅಭಿಯಂತರ ಎಚ್.ಎಸ್.ಚುಂಚೇಗೌಡ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.

bangalore development authority land acquired operation

ಜೆ.ಪಿ.ನಗರ ಬಡಾವಣೆಯ 9ನೇ ಹಂತದ ನಿರ್ಮಾಣಕ್ಕೆಂದು 1988 ರಲ್ಲಿ ಈ ಜಾಗವನ್ನು ಸ್ವಾಧೀನಪಡಿಸಿಕೊಳ್ಳುವ ಬಗ್ಗೆ ಪ್ರಾಥಮಿಕ ಅಧಿಸೂಚನೆಯನ್ನು ಬಿಡಿಎ ಹೊರಡಿಸಿತ್ತು. ಇದಾದ ಬಳಿಕ 1997 ರಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಿ ಜಾಗವನ್ನು ಸ್ವಾಧೀನಕ್ಕೆ ತೆಗೆದುಕೊಂಡಿತ್ತು. ಆದರೆ, ಕೆಲವರು ತಾತ್ಕಾಲಿಕವಾಗಿ 40 ಶೆಡ್‌ಗಳನ್ನು ನಿರ್ಮಾಣ ಮಾಡಿ ಜಾಗ ತಮ್ಮದೆಂದು ಪ್ರತಿಪಾದಿಸಿದ್ದರು. ಆದರೆ, ಇದರ ವಿರುದ್ಧ ಬಿಡಿಎ (BDA) ನ್ಯಾಯಾಲಯದ ಮೆಟ್ಟಿಲೇರಿದ ಪರಿಣಾಮ ನ್ಯಾಯಾಲಯ ಬಿಡಿಎ ಪರವಾಗಿ ತೀರ್ಪು ನೀಡಿ ಜಾಗವನ್ನು ವಶಪಡಿಸಿಕೊಳ್ಳುವಂತೆ ಇತ್ತೀಚೆಗೆ ಆದೇಶ ನೀಡಿತ್ತು.

ನ್ಯಾಯಾಲಯದ ಆದೇಶದ ಮೇರೆಗೆ ಕಾರ್ಯಪಾಲಕ ಅಭಿಯಂತರ ಚುಂಚೇಗೌಡ, ಪೊಲೀಸ್ ವರಿಷ್ಠಾಧಿಕಾರಿ ಭಾಸ್ಕರ್, ಡಿವೈಎಸ್ ಪಿ.ರವಿಕುಮಾರ್ ಸೇರಿದಂತೆ 75ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ಶೆಡ್ ಗಳನ್ನು 5ಕ್ಕೂ ಅಧಿಕ ಜೆಸಿಬಿಗಳನ್ನು ಬಳಸಿ ತೆರವುಗೊಳಿಸಲಾಯಿತು.

ಅತಿಕ್ರಮಣ ತೆರವು ನಿರಂತರ ಪ್ರಕ್ರಿಯೆ:

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ (S.R.Vishwanath), ಬಿಡಿಎಗೆ ಸೇರಿದ ಹಲವಾರು ಆಸ್ತಿಗಳನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಇಂತಹ ಆಸ್ತಿಗಳನ್ನು ಮರುವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಕಳೆದ ಒಂದು ತಿಂಗಳಿಂದ ಆರಂಭಿಸಲಾಗಿದೆ. ಈ ಪ್ರಕ್ರಿಯೆ ಮುಂದುವರಿಯಲಿದೆ ಎಂದರು.

ನಿವೇಶನಗಳ ಹರಾಜು:

ಬಿಡಿಎಗೆ ಸೇರಿದ ಸ್ವತ್ತುಗಳನ್ನು ವಶಪಡಿಸಿಕೊಂಡು ನಿವೇಶನಗಳನ್ನಾಗಿ ಅಭಿವೃದ್ಧಿಪಡಿಸಿ ಅವುಗಳನ್ನು ಸಾರ್ವಜನಿಕರಿಗೆ ಹರಾಜಿನ ಮೂಲಕ ಹಂಚಿಕೆ ಮಾಡಬೇಕೆಂದು ಇತ್ತೀಚೆಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಈ ನಿರ್ದೇಶನದಂತೆ ಬಿಡಿಎ ಆಸ್ತಿಗಳನ್ನು ವಶಪಡಿಸಿಕೊಂಡು ಹಂತಹಂತವಾಗಿ ನಿವೇಶನಗಳನ್ನಾಗಿ ಅಭಿವೃದ್ಧಿಪಡಿಸಿ ಹರಾಜು ಪ್ರಕ್ರಿಯೆಯನ್ನು ನಡೆಸಲಾಗುತ್ತದೆ ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.