ETV Bharat / city

ವಿದೇಶಿ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ: ಮೂವರು ಆರೋಪಿಗಳ ಬಂಧನ - ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ

ವಿದೇಶದಿಂದ ಮಹಿಳೆಯರನ್ನು ಕಳ್ಳಸಾಗಾಣೆ ಮಾಡಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಹಿತಿ ಮೆರೆಗೆ ದಾಳಿ ನಡೆಸಿದ ಅಧಿಕಾರಿಗಳು ಮೂವರು ಮಧ್ಯವರ್ತಿಗಳನ್ನು ಬಂಧಿಸಿದ್ದಾರೆ. ಇಬ್ಬರು ಬಾಂಗ್ಲಾ ದೇಶದ ಮಹಿಳೆಯರನ್ನು ರಕ್ಷಿಸಲಾಗಿದೆ.

bangalore foreign women prostitution three accused arrested
ವೇಶ್ಯಾವಾಟಿಕೆ
author img

By

Published : Apr 19, 2021, 7:14 PM IST

ಬೆಂಗಳೂರು: ಬಾಂಗ್ಲಾದೇಶ ಹಾಗೂ ಪಶ್ಚಿಮ ಬಂಗಾಳದಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ನಗರದ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೇಶ್ಯಾವಾಟಿಕೆ ದಂಧೆ ನೆಡೆಸುತ್ತಿದ್ದ ಪಶ್ಚಿಮ ಬಂಗಾಳ ಮೂಲದ ನೌಷಾದ್ ಅಲಿ, ರಿಯಾಜುಲ್ ಶೇಖ್, ಸಮೀರ್ ಬಂಧಿತ ಆರೋಪಿಗಳು.

ವಿದೇಶದಿಂದ ಮಹಿಳೆಯರನ್ನು ಕಳ್ಳಸಾಗಾಣೆ ಮಾಡಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಹಿತಿ ಮೆರೆಗೆ ದಾಳಿ ನಡೆಸಿದ ಅಧಿಕಾರಿಗಳು ಮೂವರು ಮಧ್ಯವರ್ತಿಗಳನ್ನ ಬಂಧಿಸಿದ್ದಾರೆ. ಇಬ್ಬರು ಬಾಂಗ್ಲಾ ದೇಶದ ಮಹಿಳೆಯರನ್ನು ರಕ್ಷಿಸಲಾಗಿದೆ. ನಕಲಿ ಆಧಾರ್ ಕಾರ್ಡ್ ಕೊಟ್ಟು ಬಾಡಿಗೆ ಮನೆ ಗಿಟ್ಟಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನುವ ಮಾಹಿತಿ ದೊರೆತಿದೆ.

ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತರಿಂದ 11 ನಕಲಿ ಆಧಾರ್ ಕಾರ್ಡ್​​​ಗಳನ್ನು ವಶಪಡಿಸಿಕೊಳ್ಳಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.