ಬೆಂಗಳೂರು: ಇದೇ ಮೊದಲ ಬಾರಿಗೆ ನಗರದ ಪೊಲೀಸ್ ಪೇದೆಯೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದು ನಗರದ ಪೊಲೀಸರ ಆತಂಕಕ್ಕೆ ಕಾರಣವಾಗಿದೆ.
ಹೌದು, ಹಗಲಿರುಳೆನ್ನದೆ ಸಾರ್ವಜನಿಕರ ಹಿತಕ್ಕಾಗಿ ಶ್ರಮಿಸಿದ ಬೇಗೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ಗೆ ಕೊರೊನಾ ಸೋಂಕು ದೃಢವಾಗಿರುವುದು ಪರೀಕ್ಷೆಯಲ್ಲಿ ಖಚಿತವಾಗಿದೆ.
ಅನಾರೋಗ್ಯ ಕಾರಣ ಕಾನ್ಸ್ಟೇಬಲ್ ಕಳೆದ 20 ದಿನಗಳಿಂದ ರಜೆಯಲ್ಲಿದ್ದರು. ರಜೆ ಮುಗಿಸಿ ನಿನ್ನೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಮುಂಜಾಗ್ರತ ಕ್ರಮವಾಗಿ ಕೊರೊನಾ ಟೆಸ್ಟ್ ನಡೆಸಿದಾಗ ಪಾಸಿಟಿವ್ ಎಂದು ವರದಿ ಬಂದಿದೆ. ಈ ಸಂಬಂಧ ಕಾನ್ಸ್ಟೇಬಲ್ರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದ್ದು. ಪ್ರಾಥಮಿಕ ಸಂಪರ್ಕದಲ್ಲಿರುವ ಸುಮಾರು 25 ವ್ಯಕ್ತಿಗಳನ್ನು ಗುರುತಿಸಿ ಕ್ವಾರಂಟೈನ್ಗೆ ಒಳಪಡಿಸುವ ಕೆಲಸವಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.