ಯಲಹಂಕ: ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನೀರು ನುಗ್ಗಿ ಹಾನಿಗೊಳಲಾಗಿದ್ದ ಯಲಹಂಕದ ಜಕ್ಕೂರು ಬಳಿಯ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಗೆ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜೆಎನ್ಸಿಎಎಸ್ಆರ್ ಸಂಸ್ಥೆಯ ಮುಖ್ಯಸ್ಥ, 'ಭಾರತರತ್ನ' ಸಿ.ಎನ್.ಆರ್.ರಾವ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಭೇಟಿ ಸಮಯದಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಸಹ ಇದ್ದರು.
JNCASR campus flood: ಕಳೆದ ಕೆಲವು ದಿನಗಳಿಂದ ಬೆಂಗಳೂರು ನಗರದಲ್ಲಿ (Bengaluru rains) ಭಾರಿ ಮಳೆಯಾಗುತ್ತಿದೆ. ಪರಿಣಾಮ, ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಗೆ ಮಳೆ ನೀರು ನುಗ್ಗಿತ್ತು. ಮೂರ್ನಾಲ್ಕು ದಿನಗಳಿಂದ ಮಳೆಯ ನೀರು ಹಾಗೆಯೇ ನಿಂತಿದೆ. ಸಂಶೋಧನಾ ಕೊಠಡಿಗೂ ಸಹ ನೀರು ನುಗ್ಗಿದ್ದು, ದಾಖಲೆಗಳು ಮತ್ತು ಕಂಪ್ಯೂಟರ್ಗಳು ಹಾನಿಯಾಗಿವೆ.