ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ 2019-20ನೇ ಶೈಕ್ಷಣಿಕ ವರ್ಷದ ಸ್ನಾತಕೋತ್ತರ ಪದವಿ ತರಗತಿಗಳ ಬೋಧನೆಗಾಗಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ವಿದ್ಯುನ್ಮಾನ ಮಾಧ್ಯಮ ವಿಭಾಗಕ್ಕೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿದ್ಯುನ್ಮಾನ ಮಾಧ್ಯಮದಲ್ಲಿ ಅಥವಾ ತತ್ಸಮಾನದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಇದರ ಜೊತೆಗೆ ಕನಿಷ್ಟ ಐದು ವರ್ಷ ರೇಡಿಯೊ ಅಥವಾ ಟೆಲಿವಿಷನ್ ಚಾನಲ್‍ನಲ್ಲಿ ಕಾರ್ಯನಿರ್ವಹಿಸಿದ ಅನುಭವವಿರಬೇಕು. ಪಿ.ಹೆಚ್.ಡಿ/ಎನ್.ಇ.ಟಿ/ಎಸ್.ಎಲ್.ಇ.ಟಿ. ಹಾಗೂ ಭೋದನೆಯಲ್ಲಿ ಅನುಭವವುಳ್ಳ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು ಅಂತ ಪ್ರಕಟಣೆಯಲ್ಲಿ ತಿಳಿಸಿದೆ.
ಆಸಕ್ತರು ಸಂಪೂರ್ಣ ವಿವರಗಳೊಂದಿಗೆ ಭರ್ತಿ ಮಾಡಿದ ಅರ್ಜಿ ಮತ್ತು ದಾಖಲೆಗಳನ್ನು ಸಂಯೋಜಕರು, ವಿದ್ಯುನ್ಮಾನ ಮಾಧ್ಯಮ ವಿಭಾಗ, ಬೆಂಗಳೂರು ವಿಶ್ವವಿದ್ಯಾಲಯ, ಹಳೆ ಪರೀಕ್ಷಾಭವನ, ಜ್ಞಾನಭಾರತಿ ಆವರಣ, ಬೆಂಗಳೂರು-56 ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು.
ಆಗಸ್ಟ್ 05 ರೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8050965887 ಕ್ಕೆ ಸಂಪರ್ಕಿಸಲು ಕೋರಿದೆ.