ETV Bharat / city

ಬೆಂಗಳೂರಲ್ಲಿ ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್ ರೇಪ್ ಕೇಸ್: ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ - ಬಾಂಗ್ಲಾ ಯುವತಿ ಗ್ಯಾಂಗ್ ರೇಪ್ ಆರೋಪಿಗಳಿಗೆ ಶಿಕ್ಷೆ

ಬಾಂಗ್ಲಾ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಅಪರಾಧಿಗಳಿಗೆ ಬೆಂಗಳೂರು ಕೋರ್ಟ್ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

Bangla woman gang rape case
Bangla woman gang rape case
author img

By

Published : May 20, 2022, 5:28 PM IST

Updated : May 20, 2022, 10:21 PM IST

ಬೆಂಗಳೂರು: ದೇಶಾದ್ಯಂತ ಭಾರೀ ಸುದ್ದಿಯಾಗಿದ್ದ ಬಾಂಗ್ಲಾ ಯುವತಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.

ಕಳೆದ ವರ್ಷ 2021, ಮೇ 18ರಂದು ನಗರದ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ವಾಸವಾಗಿದ್ದ ಬಾಂಗ್ಲಾದೇಶದ ಯುವತಿ ಮೇಲೆ ಕಾಮುಕರು ಅಟ್ಟಹಾಸ ಮೆರೆದಿದ್ದರು. ಅಷ್ಟೇ ಅಲ್ಲದೇ ಆಕೆಯ ಮೇಲೆ ನಡೆಸಿದ ಅತ್ಯಾಚಾರವನ್ನ ಮೊಬೈಲ್​​ನಲ್ಲಿ ಸೆರೆ ಹಿಡಿದು ವೈರಲ್ ಮಾಡಿದ್ದರು. ಆ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚತ್ತ ಬಾಂಗ್ಲಾ ಪೊಲೀಸರು, ಬೆಂಗಳೂರು ಪೊಲೀಸರನ್ನ ಸಂಪರ್ಕಿಸಿದ್ದರು. ಬಳಿಕ ಬೆಂಗಳೂರಿನ ರಾಮಮೂರ್ತಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕೆಲವೇ ದಿನಗಳಲ್ಲಿ ಬರೋಬ್ಬರಿ 10 ಆರೋಪಿಗಳನ್ನ ಬಂಧಿಸಿ ಜೈಲಿಗಟ್ಟಿದ್ದರು.

ಪೊಲೀಸ್ ಅಧಿಕಾರಿಗಳಿಂದ ಮಾಹಿತಿ

ಕೇವಲ ಅತ್ಯಾಚಾರ ಪ್ರಕರಣವಲ್ಲದೇ ಮಾನವ ಕಳ್ಳ ಸಾಗಾಣಿಕೆ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡ ಪೊಲೀಸರು, ತನಿಖೆ ಕೈಗೊಂಡು ಆರೋಪಿಗಳ ವಿರುದ್ಧ ಪ್ರಮುಖ ಸಾಕ್ಷಿಗಳನ್ನ ಸಂಗ್ರಹಿಸಿ, 12 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಇಂದು ಶಿಕ್ಷೆ ಪ್ರಕಟಿಸಿದೆ.

ಪ್ರಕರಣದ ಪ್ರಮುಖ 7 ಜನ ಅಪರಾಧಿಗಳಾದ ಸೋಭುಜ್ ಶೇಖ್, ರಿದಯ್ ಬಾಬು, ರಫ್ ಸನ್ ಮಂಡಲ್, ರಕಿಬುಲ್ ಇಸ್ಲಾಂ ಸಾಗರ್, ಮಹಮ್ಮದ್ ಬಾಬು, ದಲಿಮ್, ಅಜೀಂಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಉಳಿದಂತೆ ಆರೋಪಿಗಳ ಪೈಕಿ ಎ6 ಆರೋಪಿಯಾದ ತಾನಿಯಾಗೆ 20 ವರ್ಷ ಜೈಲು ಹಾಗೂ ಎ9 ಆರೋಪಿಯಾದ ಜಮಾಲ್​​ಗೆ 5 ವರ್ಷ ಜೈಲು ಶಿಕ್ಷೆ ನೀಡಲಾಗಿದೆ. ಜೊತೆಗೆ ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಅಖಿಲ್ ಎಂಬಾತ ಪ್ರಕರಣದಿಂದ ಖುಲಾಸೆಯಾಗಿದ್ದು, ನುಸ್ರತ್ ಹಾಗೂ ಕಾಜಲ್ ಎಂಬುವರಿಗೆ 9 ತಿಂಗಳ ಶಿಕ್ಷೆ ಹಾಗೂ ದಂಢ ವಿಧಿಸಲಾಗಿದೆ.

ಓದಿ: ಬೆಂಗಳೂರಲ್ಲಿ ಯುವತಿಗೆ ಸ್ನೇಹಿತರಿಂದಲೇ ಲೈಂಗಿಕ ಕಿರುಕುಳ.. ವಿಡಿಯೋ ಮಾಡಿ ವಿಕೃತಿ ಮೆರೆದವರು ಅರೆಸ್ಟ್

Last Updated : May 20, 2022, 10:21 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.