ನವದೆಹಲಿ/ಬೆಂಗಳೂರು : ಬಿಜೆಪಿ ಮುಖ್ಯಮಂತ್ರಿಗಳ ಮಂಡಳಿ ಸಭೆಯಲ್ಲಿ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧಿಸಲು ಕೈಗೊಂಡಿರುವ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು. ಯೋಜನೆಗಳ ಅನುಷ್ಠಾನದಲ್ಲಿ ಮುಂದಿರುವ ರಾಜ್ಯಗಳು ತಮ್ಮ ವಿಚಾರ ವಿನಿಮಯ ಮಾಡುತ್ತಾರೆ. ಅದರಂತೆ ಭಾನುವಾರ ನಡೆದ ಸಭೆಯಲ್ಲಿ ವಿಚಾರ ವಿನಿಮಯವಾಯಿತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಯೋಜನೆಗಳಾದ ಐಟಿಐಗಳ ಮೇಲ್ದರ್ಜೆಗೇರಿಸಿರುವುದು, ಕಿಸಾನ್ ಸಮ್ಮಾನ್, 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧಿಸಲು ಕೈಗೊಂಡಿರುವ ಕ್ರಮಗಳು, ನೂತನ ಶಿಕ್ಷಣ ನೀತಿ ಬಗ್ಗೆ ಚರ್ಚಿಸಲಾಯಿತು. ದೇಶದ ವಿವಿಧ ಯೋಜನೆಗಳ ಪ್ರಗತಿಯ ಬಗ್ಗೆ ಚರ್ಚೆಯಾಗುತ್ತದೆ. ವಿಶೇಷವಾಗಿ ಕೇಂದ್ರ ಪ್ರಾಯೋಜಿತ ಯೋಜನೆಗಳ ಬಗ್ಗೆ ಪ್ರಧಾನಮಂತ್ರಿಗಳು ಪರಿಶೀಲಿಸಿ, ಮಾರ್ಗದರ್ಶನ ನೀಡಿದ್ದಾರೆ. ಅಕ್ಟೋಬರ್ನಲ್ಲಿ ಮುಂದಿನ ಸಭೆ ನಡೆಯಲಿದೆ ಎಂದರು.
ಸೋಮವಾರ ಬೆಳಗ್ಗೆ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ನಂತರ ಕ್ರೀಡಾ ಸಚಿವರನ್ನು ಭೇಟಿಯಾಗುತ್ತಿದ್ದೇನೆ. ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಹಾಗೂ ಸಂಜೆ ಭೂಪೇಂದ್ರ ಯಾದವ್ ಅವರನ್ನು ಭೇಟಿಯಾಗುತ್ತಿದ್ದೇನೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.
ಇದನ್ನೂ ಓದಿ : ವರ್ಷದ ಸಾಧನಾ ಸಮಾವೇಶದ ಸಿದ್ಧತೆಯಲ್ಲಿ ಬಿಜೆಪಿ.. ಬೊಮ್ಮಾಯಿ ಸರ್ಕಾರದ ಮೇಲಿದೆ ಹತ್ತಾರು ವೈಫಲ್ಯಗಳ ಛಾಯೆ!