ETV Bharat / city

ರಾಜ್ಯ ಸರ್ಕಾರ ಎಥನಾಲ್ ನೀತಿ ರೂಪಿಸುತ್ತಿದೆ : ಸಿಎಂ ಬಸವರಾಜ ಬೊಮ್ಮಾಯಿ - ಬಸವರಾಜ ಬೊಮ್ಮಾಯಿ

ಭಾರತದಲ್ಲಿಯೇ ಅತಿ ಹೆಚ್ಚು ಎಥನಾಲ್ ಉತ್ಪಾದನೆ ಕರ್ನಾಟಕದಲ್ಲಿ ಆಗಲಿದೆ. ಈಗಾಗಲೇ 32 ಸಕ್ಕರೆ ಕಾರ್ಖಾನೆಗಳು ಎಥನಾಲ್ ಉತ್ಪಾದನೆ ಮಾಡುತ್ತಿದ್ದು ಮುಂದಿನ ದಿನಗಳಲ್ಲಿ 60 ಕಾರ್ಖಾನೆಗಳಿಗೆ ಅನುಮತಿ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Basavaraj Bommai
ಬಸವರಾಜ ಬೊಮ್ಮಾಯಿ
author img

By

Published : Jul 8, 2022, 7:53 PM IST

ಬೆಂಗಳೂರು : ಕರ್ನಾಟಕದ 32 ಸಕ್ಕರೆ ಕಾರ್ಖಾನೆಗಳು ಎಥನಾಲ್ ಉತ್ಪಾದನೆಯನ್ನು ಕೈಗೆತ್ತಿಕೊಂಡಿದೆ. ಇನ್ನೂ 60 ಸಕ್ಕರೆ ಕಾರ್ಖಾನೆಗಳು ಅನುಮತಿ ಪಡೆಯುವ ಹಂತದಲ್ಲಿವೆ. ರಾಜ್ಯ ಸರ್ಕಾರ ಎಥನಾಲ್ ನೀತಿಯನ್ನು ರೂಪಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆ, ಬೆಳಗಾವಿ ಹಾಗೂ ಬಿಕ್ವೆಸ್ಟ್ ಕನ್ಸಲ್‍ಟೆನ್ಸಿ ಮತ್ತು ಇಂಜಿನಿಯರಿಂಗ್ ಪ್ರೈ.ಲಿ. ಸಹಯೋಗದೊಂದಿಗೆ ಖಾಸಗಿ ಹೋಟೆಲ್​ನಲ್ಲಿ ಇಂದು ಆಯೋಜಿಸಿದ್ದ ಕರ್ನಾಟಕದಲ್ಲಿ ಎಥನಾಲ್ ಉತ್ಪಾದನೆಯ ನಿಯಮ, ಆವಿಷ್ಕಾರ ಹಾಗೂ ಸ್ಥಿರತೆಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಎಥನಾಲ್ ಉತ್ಪಾದನೆಗೆ ವಿಶೇಷ ರಿಯಾಯಿತಿಗಳನ್ನು ನೀಡಲಾಗುವುದು. ಕೇವಲ ಕಬ್ಬಿನಿಂದ ಮಾತ್ರವಲ್ಲ, ಭತ್ತ, ಜೋಳ ಹಾಗೂ ಗೋಧಿಯ ಹೊಟ್ಟಿನಿಂದ ತಯಾರಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಭಾರತದಲ್ಲಿಯೇ ಅತಿ ಹೆಚ್ಚು ಎಥನಾಲ್ ಉತ್ಪಾದನೆ ಕರ್ನಾಟಕದಲ್ಲಿ ಆಗಲಿದೆ ಎಂದರು.

ರಾಜ್ಯ ಸರ್ಕಾರ ಎಥನಾಲ್ ನೀತಿಯನ್ನು ರೂಪಿಸುತ್ತದೆ

ಇಂಧನ ಕ್ಷೇತ್ರದಲ್ಲಿ ಭಾರತ ಆತ್ಮನಿರ್ಭರತೆ ಸಾಧಿಸಬೇಕಿದೆ : ಎಥನಾಲ್ ಉತ್ಪಾದನೆಯಲ್ಲಿ ಇನ್ನಷ್ಟು ಸಂಶೋಧನೆಗಳಾಗಬೇಕು. ಈಗ ನವೀಕರಿಸಬಹುದಾದ ಇಂಧನ, ಹೈಡ್ರೋಜನ್ ಇಂಧನ ಮತ್ತು ಹಸಿರು ಇಂಧನದ ಬಹಳ ಮುಖ್ಯ. ಭಾರತದ ಶೇ. 43 ರಷ್ಟು ನವೀಕರಿಸಬಹುದಾದ ಇಂಧನವನ್ನು ಕರ್ನಾಟಕದಲ್ಲಿ ಉತ್ಪಾದನೆಯಾಗುತ್ತಿದೆ. ಮೂರು ದೊಡ್ಡ ಸಂಸ್ಥೆಗಳೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಮುದ್ರದ ನೀರಿನಿಂದ ಅಮೋನಿಯಾವನ್ನು ಉತ್ಪಾದಿಸುವ ನಿಟ್ಟಿನಲ್ಲಿ 1 ಲಕ್ಷ 30 ಸಾವಿರ ಕೋಟಿಯಷ್ಟು ಬಂಡವಾಳ ಕರ್ನಾಟಕಕ್ಕೆ ಬರುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನವೀಕರಿಸಬಹುದಾದ ಇಂಧನಗಳ ಉತ್ಪಾದನೆಗೆ ವಿಶೇಷ ನೀತಿಗಳು, ಅನೇಕ ಪ್ರೋತ್ಸಾಹಕಗಳನ್ನು ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ನವೀಕರಿಸಬಹುದಾದ ಇಂಧನ ಉತ್ಪಾದಿಸುವ ಕಾರ್ಖಾನೆಗಳು ಕರ್ನಾಟಕದಲ್ಲಿ ತಲೆ ಎತ್ತಲಿವೆ ಎಂದರು.

ಪರಿಸರ ಸ್ನೇಹಿ ಇಂಧನದ ಉತ್ಪಾದನೆಗೆ ಪ್ರೋತ್ಸಾಹ : ವಾಹನಗಳು ಉಗುಳುವ ಹೊಗೆಯಿಂದ ಹೆಚ್ಚಿನ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ಆದ್ದರಿಂದ ಪರಿಸರ ಸ್ನೇಹಿ ಇಂಧನದ ಅವಶ್ಯಕತೆ ಇದ್ದು, ಸ್ಪರ್ಧಾತ್ಮಕ ದರದಲ್ಲಿ ಲಭ್ಯವಾಗಬೇಕು. ಪರಿಸರ ಸ್ನೇಹಿ ಇಂಧನದ ಉತ್ಪಾದನೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು 248 ಕೋಟಿ ರೂ.ಗಳಷ್ಟು ಸಹಾಯಧನವನ್ನು ಕೇಂದ್ರ ಸರ್ಕಾರ ಒದಗಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಸಚಿವರಾದ ಮುರುಗೇಶ್ ನಿರಾಣಿ, ಶಂಕರ್ ಪಾಟೀಲ್ ಮುನೇನಕೊಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಶಾಸಕ ಬೆಳ್ಳಿ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ನಿವೃತ್ತ ಸರ್ಕಾರಿ ನೌಕರರಿಗೂ ಆರೋಗ್ಯ ಯೋಜನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.