ETV Bharat / city

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಮಿಡಿಯುವ ಹೃದಯ ಶ್ರೀಮಂತಿಕೆ ಮೋದಿಯವರದ್ದು: ಸಿಎಂ ಬೊಮ್ಮಾಯಿ - ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ನಡೆಸುತ್ತಿರುವ ಜನಪರ ಆಡಳಿತಕ್ಕೆ ಎಂಟು ವರ್ಷಗಳು ತುಂಬಿದೆ. ಆತ್ಮಾವಲೋಕನ ಹಾಗೂ ಸಿಂಹಾವಲೋಕನ ಮಾಡಲು ಇದು ಒಂದು ಸುಸಂದರ್ಭ. ಜನಧನ, ಸ್ವಚ್ಛ ಭಾರತ್, ಪಿಎಂ ಸ್ವನಿಧಿ, ಪಿಎಂ ಕಿಸಾನ್ ಸಮ್ಮಾನ್ ಯೋಜನೆ, ಆಯುಷ್ಮಾನ್ ಭಾರತ್ ಮಹತ್ವ ಯೋಜನೆಗಳಿಂದ ಸ್ವಾವಲಂಬಿ ಭಾರತ ನಿರ್ಮಾಣ ವಾಗುತ್ತಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು..

Basavaraj Bommai Chief minister of Karnataka
ಸಿಎಂ ಬೊಮ್ಮಾಯಿ
author img

By

Published : May 31, 2022, 7:15 PM IST

ಬೆಂಗಳೂರು : ಸಮಾಜದ ಕಟ್ಟಕಡೆಯ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮೇಲೆತ್ತುವ ಕೆಲಸವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳೆದ ಎಂಟು ವರ್ಷಗಳಲ್ಲಿ ಮಾಡಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಮಿಡಿಯುವ ಹೃದಯ ಶ್ರೀಮಂತಿಕೆ ಮೋದಿಯವರದ್ದಾಗಿದೆ. ಹಿಂದೆಂದೂ ಈ ಪ್ರಮಾಣದಲ್ಲಿ ಇಂತಹ ಕೆಲಸ ಆಗಿರಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಅವರು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ದುಡಿಯುವ ವರ್ಗ ದೇಶ ಕಟ್ಟುತ್ತಿದೆ. ಇಂತಹ ರೈತರು, ವಿವಿಧ ಕೈಗಾರಿಕೆ, ನಿರ್ಮಾಣ ಕಾರ್ಮಿಕರು, ದುಡಿಯುವ ಮಹಿಳೆಯರು ದೇಶ ನಿರ್ಮಾಣದ ಕಾಯಕದಲ್ಲಿ ತೊಡಗಿದ್ದಾರೆ ಎಂದರು.

ಸಮಾಜದ ಕಟ್ಟಕಡೆಯ ಜನರಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ, ಅವರು ಸ್ವಾವಲಂಬಿ, ಸ್ವಾಭಿಮಾನಿ ಬದುಕು ಕಟ್ಟಿಕೊಳ್ಳಲು ನೆರವಾಗುವ ಜನಧನ, ಸ್ವಚ್ಛ ಭಾರತ್, ಪಿಎಂ ಸ್ವನಿಧಿ, ಪಿಎಂ ಕಿಸಾನ್ ಸಮ್ಮಾನ್ ಯೋಜನೆ, ಆಯುಷ್ಮಾನ್ ಭಾರತ್ ಮುಂತಾದ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಜಲ ಜೀವನ್ ಮಿಷನ್ ತ್ವರಿತಗತಿಯಲ್ಲಿ ಕಾರ್ಯ : ಪ್ರಧಾನಿಯವರು ಕೆಂಪುಕೋಟೆಯಲ್ಲಿ ಭಾಷಣ ಮಾಡುವಾಗ ದೇಶವನ್ನು ಸ್ವಚ್ಛ ಭಾರತವನ್ನಾಗಿಸುವುದಾಗಿ ಘೋಷಿಸಿದರು. ಆ ಮೂಲಕ ತಳ ಹಂತದ ಜನರೂ, ಸ್ವಚ್ಛತೆಯಿಂದ ಆರೋಗ್ಯವಂತರಾಗಿ, ಸದೃಢ ಸಮಾಜ ಹಾಗೂ ಆ ಮೂಲಕ ಸದೃಢ ದೇಶ ನಿರ್ಮಾಣ ಮಾಡುವ ವಾತಾವರಣ ನಿರ್ಮಿಸಿದರು. ಹಿಂದಿನ ಯಾವ ಪ್ರಧಾನಿಗಳೂ ಮನೆ ಮನೆಗೆ ನೀರು ಕೊಡುವ ಘೋಷಣೆ ಮಾಡುವ ಧೈರ್ಯ ಮಾಡಿರಲಿಲ್ಲ. ಆದರೆ, ನರೇಂದ್ರ ಮೋದಿಯವರು ಪ್ರತಿ ಗ್ರಾಮೀಣ ಮನೆಗೆ ನೀರು ಒದಗಿಸುವ ಘೋಷಣೆ ಮಾಡಿರುವುದಲ್ಲದೆ, ರಾಜ್ಯಗಳನ್ನು ಹುರಿದುಂಬಿಸುತ್ತ, ಮನೆ ಮನೆಗೆ ನೀರು ಒದಗಿಸಲು ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಪ್ರಧಾನಮಂತ್ರಿ ಆವಾಸ್ ಯೋಜನೆ 18 ಲಕ್ಷ ಮನೆ ನಿರ್ಮಾಣ : 2024ರ ವೇಳೆಗೆ ಪ್ರತಿಯೊಬ್ಬರಿಗೂ ಸೂರು ಒದಗಿಸುವ ದೃಷ್ಟಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜಾರಿಗೊಳಿಸುತ್ತಿದ್ದಾರೆ. ಈ ಯೋಜನೆಯಡಿ ರಾಜ್ಯದಲ್ಲಿ 18 ಲಕ್ಷ ಮನೆಗಳನ್ನು ಮುಂದಿನ ಮೂರು ವರ್ಷಗಳಲ್ಲಿ ನಿರ್ಮಿಸಲು ಅವಕಾಶ ನೀಡಿ, ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದರು.

ತುರ್ತು ಪರಿಸ್ಥಿತಿ ಇತಿಹಾಸದಲ್ಲಿ ಒಂದು ಕಪ್ಪುಚುಕ್ಕೆ: ನಾವು ಈಗ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಸಂಭ್ರಮದಲ್ಲಿದ್ದೇವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ನಡೆಸುತ್ತಿರುವ ಜನಪರ ಆಡಳಿತಕ್ಕೆ ಎಂಟು ವರ್ಷಗಳು ತುಂಬಿದೆ. ಆತ್ಮಾವಲೋಕನ ಹಾಗೂ ಸಿಂಹಾವಲೋಕನ ಮಾಡಲು ಇದು ಒಂದು ಸುಸಂದರ್ಭ. ಕಳೆದ 75 ವರ್ಷಗಳಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಿ, ಬೆಳೆಸಿರುವುದೇ ನಮ್ಮ ದೇಶದ ದೊಡ್ಡ ಸಾಧನೆ. ಆದರೆ, ತುರ್ತು ಪರಿಸ್ಥಿತಿ ಘೋಷಣೆ ನಮ್ಮ ಇತಿಹಾಸದಲ್ಲಿ ಒಂದು ಕಪ್ಪುಚುಕ್ಕೆಯಾಗಿ ಉಳಿದಿದೆ. ತುರ್ತುಪರಿಸ್ಥಿತಿಯ ವಿರುದ್ಧ ಜನಾಂದೋಲನ ನಡೆಸಿ, ಪ್ರಜಾಪ್ರಭುತ್ವವನ್ನು ಮರುಸ್ಥಾಪನೆ ಮಾಡಿರುವುದು, ನಮ್ಮ ಪ್ರಜಾಪ್ರಭುತ್ವದ ಅಂತಃಶಕ್ತಿಗೆ ಸಾಕ್ಷಿ ಎಂದು ವಿವರಿಸಿದರು.

ಇದನ್ನೂ ಓದಿ: ಅಪಪ್ರಚಾರದ ಬಗ್ಗೆ ನನಗೆ ಅಪಾರ ದುಃಖ, ಬೇಸರವಿದೆ: ಪಠ್ಯಪುಸ್ತಕ ವಿವಾದ ಕುರಿತು ಚಕ್ರತೀರ್ಥ ವಿವರಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.