ETV Bharat / city

ಅನುದಾನ ಕಡಿತ ವಿಚಾರ: ನಾಳೆ ವಿಧಾನ ಪರಿಷತ್ ಸದಸ್ಯರ ಸಭೆ ಕರೆದ ಬಸವರಾಜ ಹೊರಟ್ಟಿ - Basavaraj Horatti

ಕೆಲವು ಕಾಮಗಾರಿಗಳು ಆಡಳಿತಾತ್ಮಕ ಮಂಜೂರಾತಿ ಪಡೆದಿದ್ದರೂ ಪೂರ್ಣ ರೀತಿಯಲ್ಲಿ ಅನುಷ್ಠಾನಗೊಂಡಿರುವುದಿಲ್ಲ ಎನ್ನುವ ವಿಧಾನ ಪರಿಷತ್​​ನ ಹಲವು ಸದಸ್ಯರ ಅಭಿಪ್ರಾಯದ ಹಿನ್ನೆಲೆಯಲ್ಲಿ ವಿಧಾನ ಪರಿಷತ್​​ ಸಭಾಪತಿ ಬಸವರಾಜ ಹೊರಟ್ಟಿ, ನಾಳೆ ವಿಧಾನ ಪರಿಷತ್​​ನ ಎಲ್ಲ ಸದಸ್ಯರ ಸಭೆ ಕರೆದಿದ್ದಾರೆ.

Basavaraj Horatti
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ
author img

By

Published : Aug 2, 2021, 9:42 PM IST

ಬೆಂಗಳೂರು: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ಬಿಡುಗಡೆಯಾಗಿರುವ ಅನುದಾನ ಕಡಿತ ಕುರಿತು ವಿಧಾನ ಪರಿಷತ್​​ ಸಭಾಪತಿ ಬಸವರಾಜ ಹೊರಟ್ಟಿ, ನಾಳೆ ವಿಧಾನ ಪರಿಷತ್​​ನ ಎಲ್ಲ 75 ಸದಸ್ಯರ ಸಭೆ ಕರೆದಿದ್ದಾರೆ.

ವಿಧಾನ ಸೌಧದಲ್ಲಿ ನಾಳೆ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಯೋಜನಾ ಮತ್ತು ಸಾಂಖ್ಯಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ರಾಜ್ಯ ಸರ್ಕಾರ ನೀಡುತ್ತಿರುವ ಅನುದಾನದಲ್ಲಿ ಕಳೆದ 3 ವರ್ಷಗಳಲ್ಲಿ 2 ಕೋಟಿ ರೂ. ಅನುದಾನ ಕಡಿತಗೊಳಿಸಲಾಗಿದೆ.‌ ಅನುದಾನಕ್ಕೆ ಅನುಗುಣವಾಗಿ ಆಯಾಯ ವರ್ಷಕ್ಕೆ ಕೈಗೊಳ್ಳಬಹುದಾದ ಕಾಮಗಾರಿಗಳು ಬಹುತೇಕ ಸ್ಥಗಿತಗೊಂಡಿವೆ.

ಕೆಲವು ಕಾಮಗಾರಿಗಳು ಆಡಳಿತಾತ್ಮಕ ಮಂಜೂರಾತಿ ಪಡೆದಿದ್ದರೂ ಪೂರ್ಣ ರೀತಿಯಲ್ಲಿ ಅನುಷ್ಠಾನಗೊಂಡಿರುವುದಿಲ್ಲ ಎನ್ನುವ ವಿಧಾನ ಪರಿಷತ್​​ನ ಹಲವು ಸದಸ್ಯರ ಅಭಿಪ್ರಾಯದ ಹಿನ್ನೆಲೆಯಲ್ಲಿ ಈ ಸಭೆಯನ್ನು ಕರೆಯಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.