ETV Bharat / city

FDA ಪ್ರಶ್ನೆ ಪತ್ರಿಕೆ ಸೋರಿಕೆ ಹಿಂದೆ ಎಷ್ಟೇ ಪ್ರಭಾವಿಗಳಿದ್ದರೂ ಕ್ರಮ: ಬಸವರಾಜ ಬೊಮ್ಮಾಯಿ

author img

By

Published : Jan 24, 2021, 3:59 PM IST

ನಾಳೆ ಸ್ಫೋಟಕಗಳ ಸಂಬಂಧ ಲೈಸನ್ಸ್​​ದಾರರು, ಸ್ಫೋಟಕಗಳ ಬಳಕೆ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಹಳೆಯ ಮಾರ್ಗಸೂಚಿಗಳನ್ನು ನೋಡಿ ಹೊಸ ಮಾರ್ಗಸೂಚಿಗಳನ್ನು‌ ಪ್ರಕಟಿಸುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

Basavaraja Bommai talk
ಬಸವರಾಜ ಬೊಮ್ಮಾಯಿ

ಬೆಂಗಳೂರು: ಎಫ್​ಡಿಎ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ನಾವು ಗಂಭೀರವಾಗಿ ತಗೊಂಡಿದ್ದೇವೆ. ಎಷ್ಟೇ ಪ್ರಭಾವಿಗಳಿದ್ದರೂ ಪ್ರಕರಣಕ್ಕೆ ಕಾರಣಕರ್ತರಾದವರನ್ನು ಬಂಧನ ಮಾಡುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಓದಿ: ಅಕ್ರಮ ಕಲ್ಲು ಗಣಿಗಾರಿಕೆಯನ್ನು ತಕ್ಷಣವೇ ನಿಲ್ಲಿಸಬೇಕು: ಸಿಎಂ ಖಡಕ್​ ಸೂಚನೆ

ಆರ್.ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ಮಾಡಿ ಅವ್ಯವಹಾರ ಭೇದಿಸಿ ಕೆಲವರ ಬಂಧನ ಮಾಡಿದ್ದಾರೆ. ಎಫ್​ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿಂದೆ ಯಾರಿದ್ದಾರೆ ಅಂತ‌ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅತೀ ಶೀಘ್ರದಲ್ಲೇ ಪ್ರಕರಣದ ಹಿಂದೆ ಇರುವವರ ಬಂಧನ ಮಾಡುತ್ತೇವೆ ಎಂದರು.

ಪ್ರಶ್ನೆ ಪತ್ರಿಕೆಗಳನ್ನು ಅತ್ಯಂತ ಸುರಕ್ಷತೆಯಿಂದ ಇಡಲಾಗುತ್ತದೆ. ಸುರಕ್ಷತೆ ಇದ್ದರೂ ಹೇಗೆ ಪ್ರಶ್ನೆ ಪತ್ರಿಕೆಗಳು ಸೋರಿಕೆ ಆಗಿವೆ ಎನ್ನುವುದು ಮಹತ್ವದ ಪ್ರಶ್ನೆಯಾಗಿದೆ. ಪ್ರಕರಣವನ್ನು ನಾವು ಗಂಭೀರವಾಗಿ ತಗೊಂಡಿದ್ದೇವೆ. ಇದರ ಹಿಂದೆ ಎಷ್ಟೇ ಪ್ರಭಾವಿಗಳಿದ್ದರೂ, ಪ್ರಕರಣಕ್ಕೆ ಕಾರಣಕರ್ತರಾದವರನ್ನು ಬಂಧನ ಮಾಡುತ್ತೇವೆ. ಸದ್ಯ ಬಂಧಿತರ ವಿಚಾರಣೆ ನಡೆಸಿ ತನಿಖೆ ಮುಂದುವರೆಸಲಾಗಿದೆ ಎಂದರು.

ಸ್ಫೋಟಕಗಳ ಬಳಕೆಗೆ ಮಾರ್ಗಸೂಚಿಗಳ ವಿಚಾರ ಸಂಬಂಧ ನಾಳೆ ಗೃಹ ಇಲಾಖೆ ವ್ಯಾಪ್ತಿಗೆ ಅನ್ವಯ ಆಗುವಂತೆ ಮಾರ್ಗಸೂಚಿ ಪ್ರಕಟ ಮಾಡುತ್ತೇವೆ. ನಾಳೆ ಸ್ಫೋಟಕಗಳ ಸಂಬಂಧ ಲೈಸನ್ಸ್​​ದಾರರು, ಸ್ಫೋಟಕಗಳ ಬಳಕೆ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಹಳೆಯ ಮಾರ್ಗಸೂಚಿಗಳನ್ನು ನೋಡಿ ಹೊಸ ಮಾರ್ಗಸೂಚಿಗಳನ್ನು‌ ಪ್ರಕಟಿಸುತ್ತೇವೆ.

ಅನಧಿಕೃತವಾಗಿ ಜಿಲೆಟಿನ್ ಸಂಗ್ರಹ ಮಾಡುವವರ ಮೇಲೂ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸದ್ಯ ಪ್ರಕರಣದಲ್ಲಿ ಫೊರೆನ್ಸಿಕ್ ತಂಡ, ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್​​ಗಳಿಂದ ಜಂಟಿ ಕಾರ್ಯಾಚರಣೆ ನಡೀತಿದೆ. ಇವುಗಳ ವರದಿ ಆಧಾರದಲ್ಲಿ ಮುಂದಿನ ತನಿಖೆ ಕೈಗೊಳ್ಳುತ್ತೇವೆ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.