ETV Bharat / city

ಜೆ.ಪಿ ನಡ್ಡಾ ಭೇಟಿಯಾಗಲಿರುವ ಸಿಎಂ ಬೊಮ್ಮಾಯಿ: ಹಿರಿಯರಿಗೆ ಕೊಕ್, ಹೊಸಬರಿಗೆ ಮಣೆ?

ಸಿಎಂ ಬಸವರಾಜ ಬೊಮ್ಮಾಯಿ ಇಂದು ಸಂಜೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲಿದ್ದು, ಬಹುತೇಕ ಈ ಸಭೆಯಲ್ಲಿಯೇ ಸಚಿವರ ಪಟ್ಟಿ ಅಂತಿಮಗೊಳ್ಳಲಿದೆ.

Bangalore
ಜೆಪಿ ನಡ್ಡಾ ಭೇಟಿಯಾಗಲಿರುವ ಸಿಎಂ
author img

By

Published : Aug 2, 2021, 11:36 AM IST

ಬೆಂಗಳೂರು: ರಾಜ್ಯ ಸಂಪುಟ ರಚನೆ ಕುರಿತು ಮಾತುಕತೆ ನಡೆಸಲು ಹೈಕಮಾಂಡ್ ಭೇಟಿಗೆ ತೆರಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂದು ಸಂಜೆ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ಸಚಿವರ ಪಟ್ಟಿಗೆ ಗ್ರೀನ್ ಸಿಗ್ನಲ್ ಪಡೆದುಕೊಂಡು ಬರಲಿದ್ದಾರೆ.

ಸಂಪುಟ ರಚನೆ ಸರ್ಕಸ್ ಆರಂಭಿಸಿರುವ ಸಿಎಂ ಬೊಮ್ಮಾಯಿ ನಿನ್ನೆ ರಾತ್ರಿಯೇ ನವದೆಹಲಿಗೆ ತೆರಳಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ನಿನ್ನೆ ರಾತ್ರಿ ದೆಹಲಿಯಲ್ಲಿಯೇ ವಾಸ್ತವ್ಯ ಹೂಡಿದ್ದ ಸಿಎಂ, ಇಂದು ಕೂಡ ಕೇಂದ್ರದ ನಾಯಕರನ್ನು ಭೇಟಿ ಮಾಡಲಿದ್ದಾರೆ. ಇಂದು ಸಂಜೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿಗೆ ಸಮಯಾವಕಾಶ ನಿಗದಿಯಾಗಿದ್ದು, ಬಹುತೇಕ ಈ ಸಭೆಯಲ್ಲಿಯೇ ಸಚಿವರ ಪಟ್ಟಿ ಅಂತಿಮಗೊಳ್ಳಲಿದೆ.

ಹಿರಿಯರಿಗೆ ಆತಂಕ:

ಈಗಾಗಲೇ ಜಗದೀಶ್ ಶೆಟ್ಟರ್ ಸಂಪುಟದಿಂದ ಹೊರಗುಳಿಯುವ ಘೋಷಣೆ ಮಾಡಿದ್ದು, ಪಕ್ಷದಲ್ಲಿನ ಇನ್ನು ಕೆಲ ಹಿರಿಯರಿಗೆ ಮತ್ತು ಯಡಿಯೂರಪ್ಪ ಸಂಪುಟದಲ್ಲಿ ಉತ್ತಮ ಸಾಧನೆ ಮಾಡದ ಕೆಲವರಿಗೂ ಸಚಿವ ಸ್ಥಾನ ಕೈತಪ್ಪುವ ಸಾಧ್ಯತೆ ಇದೆ‌. ಜೆ.ಸಿ.ಮಾಧುಸ್ವಾಮಿ, ಸುರೇಶ್ ಕುಮಾರ್, ಶ್ರೀಮಂತ ಪಾಟೀಲ್, ಕೋಟ ಶ್ರೀನಿವಾಸ ಪೂಜಾರಿ, ಲಕ್ಷ್ಮಣ ಸವದಿ, ವಿ.ಸೋಮಣ್ಣ, ಪ್ರಭು ಚವ್ಹಾಣ್, ಸಿ.ಸಿ ಪಾಟೀಲ್, ಆನಂದ್ ಸಿಂಗ್, ಆರ್.ಶಂಕರ್, ಗೋಪಾಲಯ್ಯ, ಶಿವರಾಮ್ ಹೆಬ್ಬಾರ್, ಶಶಿಕಲಾ ಜೊಲ್ಲೆ ಅವರಿಗೆ ಕಮ್ ಬ್ಯಾಕ್ ಮಾಡುವುದು ಕಷ್ಟ ಎನ್ನುವ ಸ್ಥಿತಿ ಇದೆ ಎನ್ನಲಾಗುತ್ತಿದೆ‌.

ಡಿಸಿಎಂ ರೇಸ್:

ಕೆ.ಎಸ್.ಈಶ್ವರಪ್ಪ, ಬಿ.ಶ್ರೀರಾಮುಲು, ಗೋವಿಂದ ಕಾರಜೋಳ, ಅರವಿಂದ ಲಿಂಬಾವಳಿ, ಆರ್.ಅಶೋಕ್, ಅಶ್ವತ್ಥ ನಾರಾಯಣ ಡಿಸಿಎಂ ಸ್ಥಾನದ ಆಕಾಂಕ್ಷಿಗಳಿದ್ದು, ಹೈಕಮಾಂಡ್ ಯಾವ ಸೂತ್ರ ಅನುಸರಿಸಲಿದೆ ಎನ್ನುವುದು ಕುತೂಹಲ ಮೂಡಿಸಿದೆ. ಈಶ್ವರಪ್ಪ ಅವರನ್ನು ಸಂಪುಟದಿಂದಲೇ ಕೈಬಿಟ್ಟರೂ ಅಚ್ಚರಿಯಿಲ್ಲ ಎನ್ನಲಾಗುತ್ತಿದೆ.

ಸಂಪುಟದಲ್ಲಿ ಉಳಿಯುವ ಸಾಧ್ಯತೆ:

ಆರ್.ಅಶೋಕ್, ಬಿ.ಶ್ರೀರಾಮುಲು, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಅಶ್ವತ್ಥ ನಾರಾಯಣ, ಅರವಿಂದ ಲಿಂಬಾವಳಿ, ಎಸ್.ಅಂಗಾರ, ಎಸ್.ಟಿ ಸೋಮಶೇಖರ್, ಡಾ.ಕೆ.ಸುಧಾಕರ್, ಬಿ.ಸಿ.ಪಾಟೀಲ, ಭೈರತಿ ಬಸವರಾಜು, ನಾರಾಯಣಗೌಡ ಸಂಪುಟದಲ್ಲಿ ಉಳಿಯುವ ಸಾಧ್ಯತೆಯಿದೆ.

ಹೊಸ ಮುಖಗಳು:

ಮುಂದಿನ ಚುನಾವಣೆ ದೃಷ್ಟಿಯಲ್ಲಿರಿಸಿಕೊಂಡು‌ ಹೊಸ ಮುಖಗಳಿಗೆ ಮಣೆ ಹಾಕಲು ಚಿಂತನೆಯಿದೆ ಎನ್ನಲಾಗಿದೆ. ಪಿ.ರಾಜೀವ್, ಸುನೀಲ್ ಕುಮಾರ್, ಅರವಿಂದ ಬೆಲ್ಲದ್, ಪೂರ್ಣಿಮಾ ಶ್ರೀನಿವಾಸ್, ರಾಜುಗೌಡ, ಹಾಲಾಡಿ ಶ್ರೀನಿವಾಸಶೆಟ್ಟಿ, ರಾಮದಾಸ್, ಆರಗ ಜ್ಞಾನೇಂದ್ರ ಅವರಿಗೆ ಸಚಿವ ಸ್ಥಾನ ಸಿಗುವ ಅವಕಾಶವಿದೆ ಎನ್ನಲಾಗಿದೆ.

ಇದನ್ನೂ ಓದಿ: ದ.ಕ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಕೋವಿಡ್ ಕೇಸ್ ದಾಖಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.