ETV Bharat / city

ವಲಸೆ ಕಾರ್ಮಿಕರಿಗೆ ಸಿನಿಮಾ ಪ್ರದರ್ಶನದ ವ್ಯವಸ್ಥೆ ಮಾಡಿದ ಬಿಬಿಎಂಪಿ: ನೆಟ್ಟಿಗರಿಂದ ಮೆಚ್ಚುಗೆ

ಬಿಬಿಎಂಪಿ ಅಧಿಕಾರಿಗಳು ವಲಸೆ ಕಾರ್ಮಿಕರಿಗೆ ಸಮಯ ಕಳೆಯಲು ಅನುಕೂಲವಾಗುವಂತೆ ಸಿನಿಮಾ ಪ್ರದರ್ಶನದ‌ ವ್ಯವಸ್ಥೆ ಮಾಡಿದ್ದಾರೆ. ಈ ಹಿನ್ನೆಲೆ ಕಾರ್ಮಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಸಿನಿಮಾ ವೀಕ್ಷಿಸಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಕಾರ್ಮಿಕರಿಗೆ ಸಿನಿಮಾ ಪ್ರದರ್ಶನದ ವ್ಯವಸ್ಥೆ
ಕಾರ್ಮಿಕರಿಗೆ ಸಿನಿಮಾ ಪ್ರದರ್ಶನದ ವ್ಯವಸ್ಥೆ
author img

By

Published : May 18, 2020, 12:04 PM IST

ಬೆಂಗಳೂರು: ಬೇರೆ ಬೇರೆ ಕಡೆಯಿಂದ ನಗರಕ್ಕೆ ಬಂದ ವಲಸೆ ಕಾರ್ಮಿಕರಿಗೆ ತಾತ್ಕಾಲಿಕವಾಗಿ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ತಂಗಲು ಅವಕಾಶ ಮಾಡಿಕೊಡಲಾಗಿದ್ದು, ಕಾರ್ಮಿಕರು ಸಮಯ ಕಳೆಯಲು ಬಿಬಿಎಂಪಿ ಅಧಿಕಾರಿಗಳು ಸಿನಿಮಾ ಪ್ರದರ್ಶನದ‌ ವ್ಯವಸ್ಥೆ ಮಾಡಿದ್ದಾರೆ.

ಕಾರ್ಮಿಕರಿಗೆ ಸಿನಿಮಾ ಪ್ರದರ್ಶನದ ವ್ಯವಸ್ಥೆ

ಲಾಕ್​ಡೌನ್ ಸಡಿಲಿಕೆ ಆದ ನಂತರ ರಾಜ್ಯದಲ್ಲಿರುವ ವಲಸೆ ಕಾರ್ಮಿಕರು ಅವರ ರಾಜ್ಯಗಳಿಗೆ ತೆರಳಲು ಸರ್ಕಾರ ಅನುಮತಿ ನೀಡಿದೆ. ಅಲ್ಲದೆ ಬಸ್ ಹಾಗೂ ರೈಲು ವ್ಯವಸ್ಥೆ ಕೂಡ ಮಾಡಿದ್ದು, ಪ್ರತಿನಿತ್ಯ ಸಾವಿರಾರು ಕಾರ್ಮಿಕರು ಬೆಂಗಳೂರಿನಿಂದ ಅವರವರ ರಾಜ್ಯಗಳಿಗೆ ತೆರಳುತ್ತಿದ್ದಾರೆ. ಆದರೆ ವಲಸೆ ಕಾರ್ಮಿಕರ ಪ್ರಯಾಣಕ್ಕೂ ಮುನ್ನ ಅವರ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.

ತವರಿಗೆ ಹಿಂದಿರುಗಲು ಸಜ್ಜಾಗಿರುವ ವಲಸೆ ಕಾರ್ಮಿಕರಿಗೆ ಪಾಲಿಕೆಯು ತಾತ್ಕಾಲಿಕವಾಗಿ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ವಾಸ್ತವ್ಯಕ್ಕೆ ಅವಕಾಶ ಮಾಡಿಕೊಟ್ಟಿದೆ. ಈ ಸಂದರ್ಭದಲ್ಲಿ ವಲಸೆ ಕಾರ್ಮಿಕರು ಸಮಯ ಕಳೆಯಲು ಬಿಬಿಎಂಪಿ ಅಧಿಕಾರಿಗಳು ಸಿನಿಮಾ ಪ್ರದರ್ಶನದ‌ ವ್ಯವಸ್ಥೆ ಮಾಡಿದ್ದಾರೆ. ವಿಶೇಷ ಅಂದ್ರೆ ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಂಡು ಸಿನಿಮಾ ನೋಡಿ ಸಮಯ ಕಳೆಯುತ್ತಿದ್ದಾರೆ. ಬಿಬಿಎಂಪಿಯ ಈ ಕೆಲಸಕ್ಕೆ ನೆಟ್ಟಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.