ETV Bharat / city

ಹಲಸೂರು ಆಸ್ಪತ್ರೆ, ಪೂರ್ವ ವಲಯ ಕಂಟ್ರೋಲ್ ರೂಂಗೆ ಬಿಬಿಎಂಪಿ ಮುಖ್ಯ ಆಯುಕ್ತರ ಭೇಟಿ, ಪರಿಶೀಲನೆ - ಪೂರ್ವ ವಲಯ ಕಂಟ್ರೋಲ್ ರೂಂಗೆ ಬಿಬಿಎಂಪಿ ಮುಖ್ಯ ಆಯುಕ್ತರ ಭೇಟಿ

ಪಾಲಿಕೆ ವ್ಯಾಪ್ತಿಯಲ್ಲಿ 60,000 ಕೋವಿಡ್ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಅದನ್ನು ಮತ್ತಷ್ಟು ಹೆಚ್ಚಳ ಮಾಡಲು ಕ್ರಮವಹಿಸಲಾಗುವುದು. ರೋಗಲಕ್ಷಣಗಳಿರುವ, ಹೊರ ರಾಜ್ಯ ಅಥವಾ ಬೇರೆ ನಗರಗಳಿಂದ ಬರುವವರು ಸರಿಯಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಹಾಗೂ ಸೋಂಕು ಹೆಚ್ಚಳವಾಗುತ್ತಿರುವ ಪ್ರದೇಶದಲ್ಲಿ ಹೆಚ್ಚು ಪರೀಕ್ಷೆಗಳನ್ನು ಮಾಡಬೇಕು..

bbmp-chief-commissioner-visited-ulsoor-hospital-and-east-zone-control-room
ಬಿಬಿಎಂಪಿ ಮುಖ್ಯ ಆಯುಕ್ತ
author img

By

Published : Apr 2, 2021, 5:36 PM IST

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿತ ವ್ಯಕ್ತಿಗಳ ಸಂಪರ್ಕಗಳನ್ನು ಆದಷ್ಟು ಶೀಘ್ರ ಹಾಗೂ ಸಮರ್ಪಕವಾಗಿ ಪತ್ತೆ ಮಾಡಬೇಕೆಂದು ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೂಚಿಸಿದರು. ಹಲಸೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು.

ನಗರದಲ್ಲಿ ಕೋವಿಡ್ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಪರಿಣಾಮಕಾರಿಯಾಗಿ ನಿಯಮಗಳನ್ನ ಜಾರಿಗೊಳಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲಾಗುತ್ತಿದೆ. ಇರುವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ ಸರಿಯಾದ ರೀತಿ ಕಾರ್ಯನಿರ್ವಹಿಸಲಾಗುವುದು ಎಂದರು.

ಹಲಸೂರು ಆಸ್ಪತ್ರೆ, ಪೂರ್ವ ವಲಯ ಕಂಟ್ರೋಲ್ ರೂಂಗೆ ಬಿಬಿಎಂಪಿ ಮುಖ್ಯ ಆಯುಕ್ತರ ಭೇಟಿ

ಪಾಲಿಕೆ ವ್ಯಾಪ್ತಿಯಲ್ಲಿ 60,000 ಕೋವಿಡ್ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಅದನ್ನು ಮತ್ತಷ್ಟು ಹೆಚ್ಚಳ ಮಾಡಲು ಕ್ರಮವಹಿಸಲಾಗುವುದು. ರೋಗಲಕ್ಷಣಗಳಿರುವ, ಹೊರ ರಾಜ್ಯ ಅಥವಾ ಬೇರೆ ನಗರಗಳಿಂದ ಬರುವವರು ಸರಿಯಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಹಾಗೂ ಸೋಂಕು ಹೆಚ್ಚಳವಾಗುತ್ತಿರುವ ಪ್ರದೇಶದಲ್ಲಿ ಹೆಚ್ಚು ಪರೀಕ್ಷೆಗಳನ್ನು ಮಾಡಬೇಕು ಎಂದು ಹೇಳಿದರು.

ನಾಗರಿಕರು ಸಭೆ ಸಮಾರಂಭ ಹಾಗೂ ಜಾತ್ರೆಗಳಲ್ಲಿ ಸಾಧ್ಯವಾದಷ್ಟು ಭಾಗಿಯಾಗದೇ ಇದ್ದಾಗ ಕೋವಿಡ್ ನಿಯಂತ್ರಣ ಸಾಧ್ಯ. ನಗರದಲ್ಲಿ ಕೋವಿಡ್ ಪ್ರಕರಣ ಕ್ರಮೇಣ ಹೆಚ್ಚಾತ್ತಿವೆ. ಖಾಸಗಿ ಆಸ್ಪತ್ರೆಗಳಲ್ಲಿ ಅವಶ್ಯಕ್ಕತೆಗನುಗುಣವಾಗಿ ಸರ್ಕಾರದ ನಿರ್ದೇಶನದಂತೆ ಹಾಸಿಗೆಗಳನ್ನು ಹಂತ ಹಂತವಾಗಿ ಹೆಚ್ಚಿಸಲಾಗುವುದು ಎಂದರು.

ನಗರದಲ್ಲಿ ನಿತ್ಯ ಸುಮಾರು 35,000 ಮಂದಿ ಲಸಿಕೆ ಪಡೆಯುತ್ತಿದ್ದಾರೆ. ಅದನ್ನು ಮತ್ತಷ್ಟು ಹೆಚ್ಚಳ ಮಾಡಲು ಕ್ರಮವಹಿಸಲಾಗುತ್ತಿದೆ. ಈ ಪೈಕಿ ಅಪಾರ್ಟ್ಮೆಂಟ್ಸ್‌ಗಳಲ್ಲಿರುವ, ಗಾರ್ಮೆಂಟ್ಸ್ ಗಳಲ್ಲಿ ಕೆಲಸ ಮಾಡುವ ಎಲ್ಲರೂ ಲಸಿಕೆ ತೆಗೆದುಕೊಳ್ಳಬೇಕು.

ಅಪಾರ್ಟ್‌ಮೆಂಟ್ಸ್‌ಗಳಲ್ಲಿ ಎಲ್ಲರೂ ಲಸಿಕೆ ತೆಗದುಕೊಳ್ಳುವ ಸಂಬಂಧ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಜೊತೆ ಸಭೆ ನಡೆಸಿ ಲಸಿಕೆ ಪಡೆಯುವ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಮಾಹಿತಿ ನೀಡಿದರು.

ಪೂರ್ವ ವಲಯ ವಾರ್ ರೂಂಗೆ ಭೇಟಿ : ನಂತರ ಪೂರ್ವ ವಲಯ ವ್ಯಾಪ್ತಿಯ ವಾರ್ ರೂಂಗೆ ಭೇಟಿ ನೀಡಿ ಸಂಪರ್ಕ ಪತ್ತೆ, ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿಕೊಳ್ಳುತ್ತಿರುವ ಬಗ್ಗೆ ಮುಖ್ಯ ಆಯುಕ್ತರು ಪರಿಶೀಲಿಸಿದರು. ಐಸಿಎಂಆರ್ ಪೋರ್ಟಲ್‌ನಿಂದ ವಲಯವಾರು ಇಂಡೆಕ್ಸ್ ತಂತ್ರಾಂಶಕ್ಕೆ ಕೋವಿಡ್ ಸೋಂಕು ಪ್ರಕರಣಗಳ ಮಾಹಿತಿ ಲಭ್ಯವಾಗಲಿದೆ.

ಆ ಮಾಹಿತಿಯ ಅನುಸಾರ ಸೋಂಕಿತ ವ್ಯಕ್ತಿಗಳಿಗೆ ಕರೆಮಾಡಿ ಅನ್ಯ ಕಾಯಿಲೆಯಿರುವ ಸೋಂಕಿತರನ್ನು ಆಸ್ಪತ್ರೆಗಳಲ್ಲಿ ದಾಖಲಿಸುವುದು ಹಾಗೂ ಎ-ಸಿಮ್ಟಾಮ್ಯಾಟಿಕ್ ಇರುವವರು ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೇಳೆ ವಾರ್ ರೂಂನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಸೋಂಕಿತ ವ್ಯಕ್ತಿಗಳಿಗೆ ನಿತ್ಯ ಕರೆ ಮಾಡಿ ಆರೋಗ್ಯ ವಿಚಾರಿಸಿಕೊಳ್ಳಲಿದ್ದಾರೆ ಎಂದು ಆರೋಗ್ಯಾಧಿಕಾರಿಯೊಬ್ಬರು ಮಾಹಿತಿ ನೀಡಿದರು.

2ನೇ ಡೋಸ್ ಲಸಿಕೆ ಪಡೆದ ಮುಖ್ಯ ಆಯುಕ್ತರು : ಬೌರಿಂಗ್ ಆಸ್ಪತ್ರೆಯ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದಲ್ಲಿ ಮುಖ್ಯ ಆಯುಕ್ತ ಗೌರವ್ ಗುಪ್ತ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದರು. ತಪಾಸಣೆ ವೇಳೆ ವಿಶೇಷ ಆಯುಕ್ತರು(ಆರೋಗ್ಯ) ರಾಜೇಂದ್ರ ಚೋಳನ್, ಜಂಟಿ ಆಯುಕ್ತರು ಪಲ್ಲವಿ, ಮುಖ್ಯ ಆರೋಗ್ಯ ಅಧಿಕಾರಿ ಡಾ. ವಿಜೇಂದ್ರ, ವಲಯ ಆರೋಗ್ಯಾಧಿಕಾರಿ ಡಾ. ಸಿದ್ದಪ್ಪಾಜಿ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.