ETV Bharat / city

ಪಾಲಿಕೆ ಮುಖ್ಯ ಆಯುಕ್ತರಿಂದ ಸ್ವಚ್ಛತಾ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆ - ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್​ ಗುಪ್ತ

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೂಚನೆಯ ಮೇರೆಗೆ ಸಫಾಯಿ ಕರ್ಮಚಾರಿಗಳ ಕಲ್ಯಾಣಕ್ಕಾಗಿ ಪಾಲಿಕೆಯ ಕಲ್ಯಾಣ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಕೇಂದ್ರ, ರಾಜ್ಯ ಸರ್ಕಾರ, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ವಿವಿಧ ಪುನರ್ವಸತಿ ಯೋಜನೆಯಡಿ ಸೌಲಭ್ಯ ಪಡೆಯಲು ಹಾಗೂ ಪಾಲಿಕೆಯ ಕಲ್ಯಾಣ ಕಾರ್ಯಕ್ರಮಗಳನ್ನು ಆದ್ಯತೆ ಮೇಲೆ ಪಡೆಯಲು ಈ ಗುರುತಿನ ಚೀಟಿ ಅವಶ್ಯವಾಗಿದೆ..

bbmp-comissioner-distributed-identity-cards-to-manual-scavengers
ಸ್ವಚ್ಛತಾ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಿಸಿದ ಪಾಲಿಕೆ ಆಯುಕ್ತ
author img

By

Published : Apr 22, 2022, 7:30 AM IST

ಬೆಂಗಳೂರು : ಕೇಂದ್ರ ಸರ್ಕಾರದ ಸೂಚನೆಯಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಲದ ಗುಂಡಿಗಳನ್ನು ಸ್ವಚ್ಛತೆ ಮಾಡುತ್ತಿದ್ದ ಸ್ವಚ್ಛತಾ ಕಾರ್ಮಿಕರನ್ನು ಗುರುತಿಸಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಗುರುವಾರ ಮುಖ್ಯ ಆಯುಕ್ತ ಗೌರವ್ ಗುಪ್ತ ಸಾಂಕೇತಿಕವಾಗಿ 8 ಮಂದಿಗೆ ಗುರುತಿನ ಚೀಟಿ ವಿತರಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸ್ವಚ್ಛತಾ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಿಸಿದ ಪಾಲಿಕೆ ಆಯುಕ್ತ

ಈ ಹಿಂದೆ ಮಲ ಹೊರುವ ಪದ್ಧತಿ ರೂಢಿಯಲ್ಲಿದ್ದು, ಇದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮಲ ಹೊರುವ ಕಾರ್ಮಿಕರ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ 2013ರ ಕಾಯ್ದೆ ಹಾಗೂ ನಿಯಮಗಳನ್ನು ಜಾರಿಗೆ ತಂದಿತ್ತು. ಗುರುತಿಸಿದ ಸಫಾಯಿ ಕರ್ಮಚಾರಿಗಳಿಗೆ ಕೇಂದ್ರ ಸರ್ಕಾರದಿಂದ ಒಂದು ಬಾರಿ ಧನ ಸಹಾಯ 40,000 ರೂ.ಗಳನ್ನು 201 ಜನರ ಪೈಕಿ ಕೇವಲ 185 ಮಂದಿಗೆ ಮಾತ್ರ ಪಾವತಿಸಲಾಗಿದೆ. ಆದರೆ, ಸಂಪೂರ್ಣವಾಗಿ ಎಲ್ಲರಿಗೂ ಈತನಕ ಪಾವತಿಯಾಗಿಲ್ಲ.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೂಚನೆಯ ಮೇರೆಗೆ ಸಫಾಯಿ ಕರ್ಮಚಾರಿಗಳ ಕಲ್ಯಾಣಕ್ಕಾಗಿ ಪಾಲಿಕೆಯ ಕಲ್ಯಾಣ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಕೇಂದ್ರ, ರಾಜ್ಯ ಸರ್ಕಾರ, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ವಿವಿಧ ಪುನರ್ವಸತಿ ಯೋಜನೆಯಡಿ ಸೌಲಭ್ಯ ಪಡೆಯಲು ಹಾಗೂ ಪಾಲಿಕೆಯ ಕಲ್ಯಾಣ ಕಾರ್ಯಕ್ರಮಗಳನ್ನು ಆದ್ಯತೆ ಮೇಲೆ ಪಡೆಯಲು ಈ ಗುರುತಿನ ಚೀಟಿ ಅವಶ್ಯವಾಗಿದೆ.

ಆದಷ್ಟು ಶೀಘ್ರವಾಗಿ ಪಾಲಿಕೆಯ 8 ವಲಯಗಳಲ್ಲಿರುವ ಈ ಹಿಂದೆ ಕೈಯಿಂದ ಮಲದ ಗುಂಡಿ ಸ್ವಚ್ಛ ಮಾಡುತ್ತಿದ್ದ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಿಸುವುದಾಗಿ ಪಾಲಿಕೆ ಅಧಿಕಾರಿಗಳು ಹೇಳಿದ್ದಾರೆ.

ನೈರ್ಮಲ್ಯ ಕಾರ್ಮಿಕರಾಗಿದ್ದವರಿಗೆ ಪಾಲಿಕೆಯ ಎಲ್ಲಾ ಕಲ್ಯಾಣ ಕಾರ್ಯಕ್ರಮಗಳು ಅನ್ವಯ : ಗುರುತಿನಚೀಟಿ ಪಡೆದ ಕಾಯ್ದೆ ಪೂರ್ವ ನೈರ್ಮಲ್ಯ ಕಾರ್ಮಿಕರಾಗಿದ್ದವರಿಗೆ ಪಾಲಿಕೆಯ ಎಲ್ಲಾ ಕಲ್ಯಾಣ ಕಾರ್ಯಕ್ರಮಗಳಡಿಯಲ್ಲಿ ವಿದ್ಯಾರ್ಥಿ ಶುಲ್ಕ ಮರುಪಾವತಿ, ಒಂಟಿ ಮನೆ ಸೌಲಭ್ಯ, ಕೌಶಲ್ಯ ತರಬೇತಿ, ಸ್ವಯಂ ಉದ್ಯೋಗ ಸೇರಿದಂತೆ ಇನ್ನಿತರೆ ಕಲ್ಯಾಣ ಕಾರ್ಯಕ್ರಮದ ಸೌಲಭ್ಯಗಳನ್ನು ಆದ್ಯತೆ ಮೇಲೆ ಪಡೆಯಲು ಅರ್ಹರಾಗಿರುತ್ತಾರೆ.

ಸೌಲಭ್ಯಗಳನ್ನು ಪಡೆಯುವುದರ ಮೂಲಕ ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದು ಸಮಾಜದಲ್ಲಿ ಗೌರವಯುತವಾದ ಬದುಕನ್ನು ಕಟ್ಟಿಕೊಳ್ಳಬೇಕೆಂಬುದು ಪಾಲಿಕೆಯ ಆಶಯವಾಗಿದೆ. ಇದನ್ನು ಈಡೇರಿಸುವ ನಿಟ್ಟಿನಲ್ಲಿ ಪಾಲಿಕೆಯು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.

ಸ್ಕ್ಯಾವೆಂಜರ್ಸ್​ಗಳನ್ನು ಗುರುತಿಸದಿರುವುದು ಪತ್ತೆ: 2018-19ನೇ ಸಾಲಿನಲ್ಲಿ ಸಂಘ-ಸಂಸ್ಥೆಗಳು ಅಥವಾ ಇನ್ನಿತರ ಸಂಘಗಳಿಂದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್​ಗಳು ಗುರುತಿಸದೇ ಬಿಟ್ಟು ಹೋಗಿರುವುದು ತಿಳಿದು ಬಂದಿದೆ. ಆಗ ಪುನಃ ಸಮೀಕ್ಷೆ ನಡೆಸಿದಾಗ 1,424 ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್​ಗಳನ್ನು ಗುರುತಿಸಿ ಸ್ವಚ್ಛತಾ ಅಭಿಯಾನ ಮೊಬೈಲ್ ಆ್ಯಪ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಆದರೆ, ಆ ಸಮೀಕ್ಷೆಯಲ್ಲಿ ಮಲ ಹೊರುವ ಪದ್ಧತಿಯಲ್ಲಿಲ್ಲದ ಒಳಚರಂಡಿ ಸ್ವಚ್ಛತೆ ಮಾಡುವವರನ್ನೂ ಸೇರಿಸಲಾಗಿತ್ತು.

ಹೀಗಾಗಿ, ಈ ಕುರಿತಂತೆ ಪುನಃ ಪರಿಶೀಲಿಸಿ ಮನೆಗಳಲ್ಲಿನ ಶೌಚಗುಂಡಿಗಳನ್ನು ಕೈಯಿಂದ ಸ್ವಚ್ಛ ಮಾಡುತ್ತಿದ್ದ ನೈಜ ಕಾರ್ಮಿಕರನ್ನು ಗುರುತಿಸಿ ಅಂತಹವರ ಪಟ್ಟಿಯನ್ನು ಮರು ಸಲ್ಲಿಸುವಂತೆ ಕೇಂದ್ರ ಸರ್ಕಾರ ಸೂಚಿಸಿತ್ತು. ಆ ಹಿನ್ನೆಲೆಯಲ್ಲಿ ಬಿಬಿಎಂಪಿ ಕಲ್ಯಾಣ ಇಲಾಖೆ ಹಿರಿಯ ಅಧಿಕಾರಿಗಳು 8 ವಲಯಗಳ ಜಂಟಿ ಆಯುಕ್ತರಿಗೆ ಒಂದು ತಿಂಗಳ ಹಿಂದೆ ಈ ಬಗ್ಗೆ ಸೂಚನೆ ನೀಡಿದ್ದರು ಎಂದಿದ್ದಾರೆ.

ಕಾರ್ಮಿಕರಿಗೆ ಪುನರ್ವಸತಿ ಸೌಲಭ್ಯ : ಈ ಪಟ್ಟಿಯನ್ನು ಮರು ಸಲ್ಲಿಕೆ ಮಾಡಿದ ಬಳಿಕ ಕೇಂದ್ರ ಸರ್ಕಾರದಿಂದ ಅನುಮೋದನೆ ನೀಡಿದ ನಂತರ ನಿಯಮಾನುಸಾರ ಅಂತಹ ಸ್ವಚ್ಛತಾ ಕಾರ್ಮಿಕರಿಗೆ ಪುನರ್ವಸತಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಸಾಂಕೇತಿಕ ಗುರುತಿನ ಚೀಟಿ ಪಡೆದವರು : ಇಂದು ಸಾಂಕೇತಿಕವಾಗಿ ಈ ಹಿಂದೆ ಸ್ವಚ್ಛತಾ ಕಾರ್ಮಿಕರಾಗಿದ್ದ ಮುನಿಕೆಂಚಪ್ಪ, ಕೃಷ್ಣಪ್ಪ, ಮುನಿಸ್ವಾಮಪ್ಪ, ಮಹಾಲಕ್ಷ್ಮಯ್ಯ, ಅಯ್ಯಣ್ಣ ಹನುಮಂತಪ್ಪ, ವೆಂಕಟರಮಣ ಮತ್ತು ನರಸಿಂಹ ಅವರುಗಳಿಗೆ ಗುರುತಿನಚೀಟಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಬಿ.ಶರತ್, ಉಪ ಆಯುಕ್ತ ಮುರಳೀಧರ್, ಸಹಾಯಕ ಆಯುಕ್ತೆ ರಾಜೇಶ್ವರಿ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಬೆಂಗಳೂರು ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ಕಾರ್ಯಾದೇಶ: ಹೈಕೋರ್ಟ್​​ಗೆ ಬಿಬಿಎಂಪಿ ಮಾಹಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.