ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನೌಕರ ಆತ್ಮಹತ್ಯೆಗೆ ಶರಣಾಗಿದ್ದಾರೆ. ವೈಯುಕ್ತಿಕ ಕಾರಣಗಳಿಂದ ಮನನೊಂದು ಅವರು ಸಾವಿನ ಹಾದಿ ತುಳಿದಿರುವ ಶಂಕೆ ವ್ಯಕ್ತವಾಗಿದೆ.
ರಾಕೇಶ್ ನೇಣಿಗೆ ಶರಣಾದ ಬಿಬಿಎಂಪಿ ನೌಕರ ಎನ್ನಲಾಗಿದೆ. ಪೂರ್ವ ವಲಯದ ಜಂಟಿ ಆಯುಕ್ತೆ ಪಲ್ಲವಿ ಕಚೇರಿಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದು, ತನ್ನ ವಿಜಯನಗರದ ಮನೆಯಲ್ಲಿ ನೇಣು ಬಿಗಿದುಕೊಂಡು ರಾಕೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇದನ್ನೂ ಓದಿ: ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ವರ್ಗಾವಣೆ: ಗೌರವ್ ಗುಪ್ತ ನೂತನ ಆಯುಕ್ತ
ಜಂಟಿ ಆಯುಕ್ತೆ ಪಲ್ಲವಿ ಕಚೇರಿಯಲ್ಲಿ ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ರಾಕೇಶ್ಗೆ ಕರ್ತವ್ಯದ ಸ್ಥಳದಲ್ಲಿ ಏನಾದರೂ ಕಿರುಕುಳವಿತ್ತೇ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.
ಕಚೇರಿಯಲ್ಲಿ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದ ಬಗ್ಗೆ ತನ್ನ ಸಹದ್ಯೋಗಿಗಳಲ್ಲಿ ದುಃಖ ತೋಡಿಕೊಂಡಿದ್ದರು ಎನ್ನಲಾಗಿದೆ. ರಾಕೇಶ್ ಅಸಹಜ ಸಾವಿನ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.