ETV Bharat / city

ಮನೆಯಲ್ಲೇ‌ ನೇಣು ಬಿಗಿದುಕೊಂಡು ಮಾಜಿ ಕಾರ್ಪೊರೇಟರ್ ಆತ್ಮಹತ್ಯೆ - bbmp-former-corporator-shivappa-committed-suicide-in-Bangalore

ಜೀವನದಲ್ಲಿ ಜಿಗುಪ್ಸೆಗೊಂಡು ಬಿಜೆಪಿ(BJP) ಮುಖಂಡ, ಬಿಬಿಎಂಪಿ ಮಾಜಿ ಸದಸ್ಯರೊಬ್ಬರು(Former corporator) ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎಂ.ಬಿ. ಶಿವಪ್ಪ
ಎಂ.ಬಿ. ಶಿವಪ್ಪ
author img

By

Published : Nov 19, 2021, 6:32 AM IST

Updated : Nov 19, 2021, 8:22 AM IST

ಬೆಂಗಳೂರು: ಜೀವನದಲ್ಲಿ ಜಿಗುಪ್ಸೆಗೊಂಡು ಬಿಜೆಪಿ ಮುಖಂಡ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಮಾಜಿ ಕಾರ್ಪೊರೇಟರ್ ಎಂ.ಬಿ. ಶಿವಪ್ಪ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅತ್ತಿಗುಪ್ಪೆ ಸಮೀಪದ ಬಿಸಿಸಿ ಲೇಔಟ್ ನಿವಾಸಿಯಾದ ಶಿವಪ್ಪ, ಪತ್ನಿ ಮತ್ತು ಇಬ್ಬರು ಮಕ್ಕಳ ಜತೆ ವಾಸವಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ಸಮಯದ ನಂತರ ಮನೆಗೆ ಪುತ್ರ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಏರ್‌ಪೋರ್ಟ್ ರಸ್ತೆಯಲ್ಲಿ 2 ಕಾರುಗಳ ನಡುವೆ ಡಿಕ್ಕಿ; ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ

1995ರಲ್ಲಿ ಕಾಂಗ್ರೆಸ್ ಪಕ್ಷದಿಂದ ಬೆಂಗಳೂರು ಮಹಾನಗರ ಪಾಲಿಕೆಗೆ ಅತ್ತಿಗುಪ್ಪೆ ವಾರ್ಡ್ ಸದಸ್ಯರಾಗಿ ಆಯ್ಕೆಯಾಗಿದ್ದರು. ವಸತಿ ಸಚಿವ ವಿ.ಸೋಮಣ್ಣ ಬೆಂಬಲಿಗರಾಗಿ ಗುರುತಿಸಿಕೊಂಡಿದ್ದರು. ಸೋಮಣ್ಣ, ಬಿಜೆಪಿ ಸೇರಿದಾಗ ಶಿವಪ್ಪ ಸಹ ಹಿಂಬಾಲಿಸಿದ್ದರು. ಗಾಂಧಿನಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಬಯಸಿದ್ದರು. ಕ್ಷೇತ್ರದಲ್ಲಿ ಚುನಾವಣಾ ತಯಾರಿ ಸಹ ನಡೆಸಿದ್ದರು.

ಇದನ್ನೂ ಓದಿ: ಭಾರಿ ಮಳೆ ಮುನ್ಸೂಚನೆ; ರಾಜ್ಯದ 7 ಜಿಲ್ಲೆಗಳಲ್ಲಿ ಇಂದು, ನಾಳೆ ಶಾಲಾ-ಕಾಲೇಜುಗಳಿಗೆ ರಜೆ

ಶಿವಪ್ಪ ಅವರು ಹಲವು ದಿನಗಳಿಂದ ಮಧುಮೇಹ ಮತ್ತು ಖಿನ್ನತೆಯಿಂದ ಬಳಲುತ್ತಿದ್ದರು. ಈ ಯಾತನೆಯಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಮೃತರ ಕುಟುಂಬಸ್ಥರು ಹೇಳಿಕೆ ನೀಡಿದ್ದಾರೆ. ಈ ಕುರಿತು ಚಂದ್ರಾಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Nov 19, 2021, 8:22 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.