ಬೆಂಗಳೂರು: ನಗರದ ಮಾಗಡಿ ರಸ್ತೆಯ ಮೆಟ್ರೋ ನಿಲ್ದಾಣಕ್ಕೆ ಡಾ.ರಾಜ್ಕುಮಾರ್ ಹೆಸರು ನಾಮಕರಣ ಮಾಡುವಂತೆ ನಮ್ಮ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಾದ ಅಜಯ್ ಸೇಥ್ ಅವರಿಗೆ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಹಾಗೂ ಮಾಜಿ ಕಾರ್ಪೋರೇಟರ್ ಎನ್.ಆರ್.ರಮೇಶ್ ಮನವಿ ಪತ್ರ ಸಲ್ಲಿಸಿದರು.
ಮಾಗಡಿ ರಸ್ತೆಯ ನಮ್ಮ ಮೆಟ್ರೋ ನಿಲ್ದಾಣಕ್ಕೆ ಡಾ.ರಾಜ್ಕುಮಾರ್ ಹೆಸರು ನಾಮಕರಣ ಮಾಡಲು ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಇದರ ಬೆನ್ನಲ್ಲೇ, ಖುದ್ದಾಗಿ ಮೇಯರ್ ಅವರೇ ನಮ್ಮ ಮೆಟ್ರೋ ವ್ಯವಸ್ಥಾಪಕರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಬಿಬಿಎಂಪಿ ಮೇಯರ್ ಮನವಿಗೆ ಪೂರಕವಾಗಿ ಸ್ಪಂದಿಸಿರುವ ನಮ್ಮ ಮೆಟ್ರೋ ವ್ಯವಸ್ಥಾಪಕರು, ಶೀಘ್ರದಲ್ಲೇ ಮಾಗಡಿ ರಸ್ತೆ ನಿಲ್ದಾಣಕ್ಕೆ ಅಣ್ಣಾವ್ರ ಹೆಸರು ನಾಮಕರಣ ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.