ETV Bharat / city

ನಾಳೆ‌ ಬಿಬಿಎಂಪಿ ಮೇಯರ್​​​ ಅಭ್ಯರ್ಥಿ ಆಯ್ಕೆ: ಕಟೀಲ್​​ ನೇತೃತ್ವದಲ್ಲಿ ಸಭೆ, ಬಿಎಸ್​ವೈ ಅನುಪಸ್ಥಿತಿ! - ನಳಿನ್​ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ

ಅ. 1ರಂದು ನಡೆಯಲಿರುವ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿ ಆಯ್ಕೆ ಮಾಡಲು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಈ ಸಭೆಗೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಗೈರಾಗಲಿದ್ದಾರೆ ಎನ್ನಲಾಗಿದೆ.

bbmp mayor-candidate-to-be-elected-tomorrow
author img

By

Published : Sep 29, 2019, 5:57 PM IST

ಬೆಂಗಳೂರು: ಮೇಯರ್ ಹಾಗೂ ಉಪ ಮೇಯರ್ ಅಭ್ಯರ್ಥಿ ಆಯ್ಕೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್ ಕಟೀಲ್ ನೇತೃತ್ವದಲ್ಲಿ ನಾಳೆ ಸಭೆ ನಡೆಯಲಿದೆ. ಈ ಸಭೆಗೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ಅನುಪಸ್ಥಿತಿ ಕಾಡಲಿದೆ ಎನ್ನಲಾಗಿದೆ.

ಅಕ್ಟೋಬರ್‌‌ 1ರಂದು ಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಮೇಯರ್ ಹುದ್ದೆಗಾಗಿ ಪೈಪೋಟಿ ತೀವ್ರಗೊಂಡಿದ್ದು, ಪಕ್ಷದ ಏಳು‌ ಪಾಲಿಕೆ ಸದಸ್ಯರು ಮೇಯರ್ ಕುರ್ಚಿ ಮೇಲೆ ಕಣ್ಣಿಟ್ಟಿದ್ದಾರೆ. ಹೀಗಾಗಿ ಶಾಸಕ ಎಸ್.ರಘು ನೇತೃತ್ವದ ಸಮಿತಿ ಆಕಾಂಕ್ಷಿಗಳ ಅಭಿಪ್ರಾಯ ಸಂಗ್ರಹಿಸಿದೆ.

ಕಟೀಲ್ ನೇತೃತ್ವ: ಈಗಾಗಲೇ ಬಿಜೆಪಿ ಪಾಲಿಕೆ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಗಿದೆ. ನಳಿನ್ ​ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಬೆಂಗಳೂರಿನ ಸಚಿವರು, ಸಂಸದರು, ಶಾಸಕರು, ಪರಿಷತ್​ ಸದಸ್ಯರು ಪಾಲ್ಗೊಳ್ಳಲಿದ್ದು, ಇವರೆಲ್ಲರ ಅಭಿಪ್ರಾಯವನ್ನೂ ಕಟೀಲ್​ ಪಡೆಯಲಿದ್ದಾರೆ. ಎಸ್.ರಘು ನೇತೃತ್ವದ ಸಮಿತಿ ತನ್ನ ವರದಿಯನ್ನು ಸಭೆಯಲ್ಲಿ ಸಲ್ಲಿಸಲಿದೆ. ಈ ಎಲ್ಲವನ್ನೂ ಪರಿಗಣಿಸಿ ಮೇಯರ್, ಉಪ ಮೇಯರ್ ಅಭ್ಯರ್ಥಿಯ ಹೆಸರು ಹೊರಬೀಳುವ ಸಾಧ್ಯತೆ ಇದೆ.

ಬಿಜೆಪಿ ಕಚೇರಿಯಲ್ಲಿ ನಡೆದ ಸಭೆ

ಸಚಿವ ಆರ್.ಅಶೋಕ್ ಕ್ಷೇತ್ರದ ಪಾಲಿಕೆ ಸದಸ್ಯ ಎನ್.ಶ್ರೀನಿವಾಸ್, ಪದ್ಮನಾಭ ರೆಡ್ಡಿ ಮೇಯರ್ ಸ್ಥಾನಕ್ಕೆ ಭಾರೀ ಲಾಬಿ ನಡೆಸುತ್ತಿದ್ದಾರೆ. ಇತ್ತ ಆರ್​​ಎಸ್ಎಸ್ ಹಿನ್ನೆಲೆಯುಳ್ಳ ಮುನೇಂದ್ರ ಕುಮಾರ್ ಹೆಸರೂ ಬಲವಾಗಿ ಕೇಳಿಬರುತ್ತಿದೆ. ನಾಳಿನ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಎಲ್ಲರ ಅಭಿಪ್ರಾಯ ಪಡೆದು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

ಸಿಎಂ ಅನುಪಸ್ಥಿತಿಯಲ್ಲಿ ಸಭೆ: ಮೇಯರ್ ಹಾಗೂ ಉಪ ಮೇಯರ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಎಸ್.ರಘು ನೇತೃತ್ವದ ಆಂತರಿಕ ಸಮಿತಿಯನ್ನು ಕಟೀಲ್ ರದ್ದುಗೊಳಿಸಿದ್ದರು. ಹೀಗಾಗಿ ಬಿಎಸ್​​ವೈ ಅಂತರ‌ ಕಾಯ್ದುಕೊಂಡಿದ್ದಾರೆ. ಅಲ್ಲದೆ, ನಾಳೆ ಸಭೆಗೆ ಗೈರಾಗಲಿದ್ದು, ಬಿಎಸ್​ವೈ ತಮ್ಮ ಸ್ವಕ್ಷೇತ್ರ ಶಿಕಾರಿಪುರ ಪ್ರವಾಸ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಅನರ್ಹ ಶಾಸಕರ ಜತೆಯೂ ಚರ್ಚೆ?: ಬೆಂಗಳೂರಿನ ಅನರ್ಹ ಶಾಸಕರೊಂದಿಗೂ ಮೇಯರ್ ಹಾಗೂ ಉಪ ಮೇಯರ್ ಅಭ್ಯರ್ಥಿ ಆಯ್ಕೆ ಕುರಿತು ಸಮಾಲೋಚನೆ ನಡೆಸಲಾಗುತ್ತದೆ. ಅನರ್ಹ ಶಾಸಕ ಎಸ್.ಟಿ.ಸೋಮಶೇಖರ್ ತಮ್ಮ ಅಭಿಪ್ರಾಯವನ್ನೂ ಪಡೆಯವಂತೆ ತಾಕೀತು ಮಾಡಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬರಲು ಅನರ್ಹರ ಬೆಂಬಲಿತ ಪಾಲಿಕೆ‌ ಸದಸ್ಯರ ಬೆಂಬಲವೂ ಅಗತ್ಯವಿದೆ. ಈ ಸಂಬಂಧ ಯಾವ ರಣನೀತಿ ಅನುಸರಿಸರಿಸಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆಸಲು ಸಭೆ ನಡೆಸಲಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡರೆ ಮುಂದೆ ಯಾವ ರೀತಿ ರಣತಂತ್ರ ರೂಪಿಸಬೇಕು ಎಂಬ ಬಗ್ಗೆಯೂ ಚರ್ಚೆ ನಡೆಯಲಿದೆ ಎನ್ನಲಾಗಿದೆ.

Intro:Body:KN_BNG_01_MAYORSELECTIONMEETING_BJP_SCRIPT_7201951

ಮೇಯರ್ ಅಭ್ಯರ್ಥಿ ಆಯ್ಕೆ: ನಾಳೆ‌ ಕಟೀಲ್ ನೇತೃತ್ವದಲ್ಲಿ ಸಭೆ, ಸಿಎಂ ಗೈರು!

ಬೆಂಗಳೂರು: ಮೇಯರ್ ಹಾಗೂ ಉಪಮೇಯರ್ ಅಭ್ಯರ್ಥಿ ಆಯ್ಕೆ ಸಂಬಂಧ ನಾಳೆ‌‌ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಯಲಿದೆ.

ಅಕ್ಟೋಬರ್‌‌ 1 ಕ್ಕೆ‌ ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆ ಬಿಜೆಪಿಯಲ್ಲಿ ಮೇಯರ್ ಹುದ್ದೆಗಾಗಿ ಪೈಪೋಟಿ ತೀವ್ರಗೊಂಡಿದೆ. ಪ್ರಮುಖವಾಗಿ ಏಳು‌ ಮಂದಿ ಬಿಜೆಪಿ ಕಾರ್ಪೊರೇಟರ್ ಗಳು ಮೇಯರ್ ಹುದ್ದೆ ಮೇಲೆ ಕಣ್ಣಿಟ್ಟಿದ್ದು, ಈ ಸಂಬಂಧ ಮೇಯರ್ ಅಭ್ಯರ್ಥಿ ಆಯ್ಕೆಗಾಗಿನ ಎಸ್.ರಘು ನೇತೃತ್ವದ ಸಮಿತಿ ಈಗಾಗಲೇ ಆಕಾಂಕ್ಷಿಗಳ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ.‌ ಸದ್ಯಕ್ಕೆ ಪದ್ಮನಾಭ ರೆಡ್ಡಿ, ಮುನೇಂದ್ರ ಕುಮಾರ್ ಮತ್ತು ಎಲ್.ಶ್ರೀನಿವಾಸ್ ಹೆಸರು ಮುಂಚೂಣಿಯಲ್ಲಿದೆ.

ನಾಳೆ‌ ಕಟೀಲ್ ನೇತೃತ್ವದಲ್ಲಿ ಸಭೆ:

ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮೇಯರ್ ಅಭ್ಯರ್ಥಿ ಆಯ್ಕೆ ಸಂಬಂಧ ಸಭೆ ನಡೆಯಲಿದೆ‌. ಬೆಂಗಳೂರು ಮಂತ್ರಿಗಳು, ಸಂಸದರು, ಶಾಸಕರು, ಪರಿಷತ್ತು ಸದಸ್ಯರ ಜತೆ ಸಭೆ ನಡೆಯಲಿದೆ.

ಮೇಯರ್ ಆಯ್ಕೆ ಬಗ್ಗೆ ಬೆಂಗಳೂರು ಶಾಸಕರು, ಸಂಸದರು, ಸಚಿವರ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ. ಈಗಾಗಲೇ ಬಿಜೆಪಿ ಪಾಲಿಕೆ ಸದಸ್ಯರ ಜತೆ ಸಭೆ ನಡೆಸಿ, ಮೇಯರ್ ಹಾಗೂ ಉಪಮೇಯರ್ ಅಭ್ಯರ್ಥಿ ಸಂಬಂಧ ಅಭಿಪ್ರಾಯ ಸಂಗ್ರಹಿಸಲಾಗಿದೆ.

ಸಮಿತಿ ತನ್ನ ವರದಿಯನ್ನು ನಾಳೆ ಸಭೆಯಲ್ಲಿ ಸಲ್ಲಿಸಲಿದ್ದು, ಮೇಯರ್, ಉಪಮೇಯರ್ ಅಭ್ಯರ್ಥಿ ಬಗ್ಗೆ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.

ಅತೃಪ್ತ ಆರ್.ಅಶೋಕ್ ಕ್ಷೇತ್ರದ ಪಾಲಿಕೆ ಸದಸ್ಯ ಎನ್.ಶ್ರೀನಿವಾಸ್, ಪದ್ಮನಾಭ ರೆಡ್ಡಿ ಮೇಯರ್ ಸ್ಥಾನಕ್ಕೆ ಭಾರೀ ಲಾಬಿ ನಡೆಸುತ್ತಿದ್ದಾರೆ. ಇತ್ತ ಆರ್ ಎಸ್ಎಸ್ ಮೂಲದ ಪಾಲಿಕೆ ಸದಸ್ಯ ಮುನೇಂದ್ರ ಕುಮಾರ್ ಹೆಸರು ಬಲವಾಗಿ ಕೇಳಿ ಬರುತ್ತಿದೆ. ನಾಳೆ ನಡೆಯುವ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಎಲ್ಲರ ಅಭಿಪ್ರಾಯ ಪಡೆದು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.

ಸಿಎಂ ಅನುಪಸ್ಥಿತಿಯಲ್ಲಿ ಸಭೆ:

ಮೇಯರ್ ಹಾಗೂ ಉಪಮೇಯರ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಸಿಎಂ ಯಡಿಯೂರಪ್ಪರನ್ನು ಕಡೆಗಣಿಸಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿದೆ.

ಎಸ್.ರಘು ನೇತೃತ್ವದ ಆಂತರಿಕ ಸಮಿತಿಯನ್ನು ಕಟೀಲ್ ರದ್ದುಗೊಳಿಸಿದ್ದರು. ಇತ್ತ ಸಿಎಂ ಯಡಿಯೂರಪ್ಪ ಮೇಯರ್ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯಿಂದ ಅಂತರ‌ ಕಾಯ್ದುಕೊಂಡಿದ್ದಾರೆ. ನಾಳೆ‌ ನಡೆಯುವ ಸಭೆಯಲ್ಲೂ ಸಿಎಂ ಯಡಿಯೂರಪ್ಪ ಭಾಗವಹಿಸುತ್ತಿಲ್ಲ.

ನಾಳೆ ಸಿಎಂ ತಮ್ಮ ಸ್ವಕ್ಷೇತ್ರ ಶಿಕಾರಿಪುರ ಪ್ರವಾಸದಲ್ಲಿ ಇರಲಿದ್ದು, ಅವರ ಅನುಪಸ್ಥಿತಿಯಲ್ಲಿ ಮೇಯರ್ ಆಯ್ಕೆ ಸಂಬಂಧ ಸಭೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಮೇಯರ್, ಉಪಮೇಯರ್ ಅಭ್ಯರ್ಥಿಗಳ ಹೆಸರನ್ನು ಅವರೇ ಅಂತಿಮ‌ ಮಾಡಲಿದ್ದಾರೆ ಎನ್ನಲಾಗಿದೆ.

ಅನರ್ಹ ಶಾಸಕರ ಜತೆಯೂ ಚರ್ಚೆ?:

ಇತ್ತ ಬೆಂಗಳೂರಿನ ಅನರ್ಹ ಶಾಸಕರ ಜತೆನೂ ಮೇಯರ್ ಹಾಗೂ ಉಪಮೇಯರ್ ಅಭ್ಯರ್ಥಿ ಆಯ್ಕೆ ಸಂಬಂಧ ಸಮಾಲೋಚನೆ ನಡೆಸಲಾಗುತ್ತಿದೆ.

ಈಗಾಗಲೇ ಅನರ್ಹ ಶಾಸಕ ಎಸ್.ಟಿ.ಸೋಮಶೇಖರ್ ಮೇಯರ್ ಅಭ್ಯರ್ಥಿ ಆಯ್ಕೆ ಸಂಬಂಧ ತಮ್ಮ ಅಭಿಪ್ರಾಯವನ್ನೂ ಪಡೆಯವಂತೆ ತಾಕೀತು ಮಾಡಿದ್ದಾರೆ. ಅನರ್ಹ ಶಾಸಕರ ಬೆಂಬಲಿತ ಪಾಲಿಕೆ‌ ಸದಸ್ಯರ ಬೆಂಬಲವೂ ಅಗತ್ಯ ಇರುವುದರಿಂದ, ಈ ಸಂಬಂಧ ಯಾವ ರಣನೀತಿ ಅನುಸರಿಬೇಕು ಎಂಬ ಬಗ್ಗೆ ಅನರ್ಹ ಶಾಸಕರ ಜತೆನೂ ಸಮಾಲೋಚನೆ ನಡೆಸಲಾಗುವುದು ಎನ್ನಲಾಗಿದೆ.

ಒಂದುವೇಳೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿ ಮೇಯರ್ ಅಭ್ಯರ್ಥಿ ಕಣಕ್ಕಿಳಿಸಿದರೆ, ಯಾವ ರೀತಿ ರಣತಂತ್ರ ಅನುಸರಿಸಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.