ETV Bharat / city

ಬಿಡಿಎ ಆಯುಕ್ತರಾಗಿ ರಾಜೇಶ್ ಗೌಡ ನೇಮಕ ಪ್ರಶ್ನಿಸಿ ಅರ್ಜಿ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

author img

By

Published : Dec 30, 2021, 3:00 AM IST

ಬಿಡಿಎ ಆಯುಕ್ತ ಹುದ್ದೆಗೆ ರಾಜೇಶ್ ಗೌಡ ಅವರನ್ನು ನೇಮಿಸಿ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಅರ್ಜಿ ಇತ್ಯರ್ಥವಾಗುವರೆಗೂ ಬಿಡಿಎ ಆಯುಕ್ತ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ರಾಜೇಶ್ ಗೌಡ ಅವರಿಗೆ ನಿರ್ಬಂಧ ಹೇರಬೇಕು ಎಂದು ಪಿಐಎಲ್​ನಲ್ಲಿ ಮನವಿ ಮಾಡಲಾಗಿತ್ತು.

bda-commissioner-issue-high-court-notice-to-state-government
ಬಿಡಿಎ ಆಯುಕ್ತರಾಗಿ ರಾಜೇಶ್ ಗೌಡ ನೇಮಕ ಪ್ರಶ್ನಿಸಿ ಅರ್ಜಿ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಬಿಡಿಎ ಆಯುಕ್ತರಾಗಿ ಐಎಎಸ್ ಅಧಿಕಾರಿ ಎಂ.ಬಿ.ರಾಜೇಶ್ ಗೌಡ ಅವರನ್ನು ನೇಮಕ ಮಾಡಿರುವ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಹುದ್ದೆಗೆ ರಾಜೇಶ್ ಗೌಡ ನೇಮಕ ರದ್ದು ಕೋರಿ ವಕೀಲ ಜಿ. ಮೋಹನ್ ಕುಮಾರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ರಜಾಕಾಲದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ಪೀಠ ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಗೆ ಹಾಗೂ ಬಿಡಿಎ ಆಯುಕ್ತ ಎಂ.ಬಿ. ರಾಜೇಶ್ ಗೌಡ ಅವರಿಗೆ ತುರ್ತು ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ಬೆಂಗಳೂರು ಅಭಿವೃದ್ಧಿ ಕಾಯ್ದೆ-1976ರ ಸೆಕ್ಷನ್ 12ರ ಪ್ರಕಾರ ವಿಭಾಗೀಯ ಆಯುಕ್ತರಿಗಿಂತ ಕಡಿಮೆ ಇರದ ಶ್ರೇಣಿಯ ಅಧಿಕಾರಿಯನ್ನು ಬಿಡಿಎ ಆಯುಕ್ತ ಹುದ್ದೆಗೆ ನೇಮಕ ಮಾಡಬೇಕಿದೆ. ಆದರೆ, ವಿಭಾಗೀಯ ಆಯುಕ್ತರಿಗಿಂತ ಕಡಿಮೆ ಶ್ರೇಣಿಯ ಅಧಿಕಾರಿಯಾಗಿರುವ ಎಂ.ಬಿ. ರಾಜೇಶ್ ಗೌಡ ಅವರನ್ನು ಬಿಡಿಎ ಆಯುಕ್ತ ಹುದ್ದೆಗೆ ನೇಮಿಸಿ ಸರ್ಕಾರ 2021ರ ಏ.30ರಂದು ಆದೇಶಿಸಿದೆ. ಹಾಗಾಗಿ, ಬಿಡಿಎ ಆಯುಕ್ತರ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ರಾಜೇಶ್ ಗೌಡ ಅವರಿಗೆ ಸೂಕ್ತ ಅರ್ಹತೆ ಇಲ್ಲವಾಗಿದೆ. ಅರ್ಹತೆ ಇಲ್ಲದವರನ್ನು ನೇಮಿಸುವುದರಿಂದ ಆಯುಕ್ತರ ಹುದ್ದೆಯ ಕರ್ತವ್ಯಗಳನ್ನು ಪರಿಣಾಮಕಾರಿ ನಿರ್ವಹಿಸಲು ಸಾಧ್ಯವಾಗುವುದಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಅಲ್ಲದೇ, ರಾಜೇಶ್ ಗೌಡ ಅವರನ್ನು ಬಿಡಿಎ ಆಯುಕ್ತ ಹುದ್ದೆಗೆ ನೇಮಕ ಮಾಡಿ ಹೊರಡಿಸಿರುವ ಆದೇಶ ಹಿಂಪಡೆದು, ಸೂಕ್ತ ಅರ್ಹತೆಯುಳ್ಳ ಅಧಿಕಾರಿಯನ್ನು ನೇಮಿಸುವಂತೆ ಕೋರಿ ಅರ್ಜಿದಾರರು 2021ರ ನ.30ರಂದು ಸರ್ಕಾರಕ್ಕೆ ಮನವಿ ಪತ್ರ ನೀಡಿದ್ದಾರೆ. ಆದರೆ, ಸರ್ಕಾರ ಅದನ್ನು ಈವರೆಗೂ ಪರಿಗಣಿಸಿಲ್ಲ. ಆದ್ದರಿಂದ, ಬಿಡಿಎ ಆಯುಕ್ತ ಹುದ್ದೆಗೆ ರಾಜೇಶ್ ಗೌಡ ಅವರನ್ನು ನೇಮಿಸಿ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಅರ್ಜಿ ಇತ್ಯರ್ಥವಾಗುವರೆಗೂ ಬಿಡಿಎ ಆಯುಕ್ತ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ರಾಜೇಶ್ ಗೌಡ ಅವರಿಗೆ ನಿರ್ಬಂಧ ಹೇರಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ನಗದು ರಹಿತವಾಗಿ ವಿದ್ಯಾರ್ಥಿ ವೇತನ ಪಾವತಿಗೆ ರಾಜ್ಯ ಸರ್ಕಾರದ ಡಿಜಿಟಲ್ ಪ್ಲಾನ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.