ಬೆಂಗಳೂರು: ತಳ ಹಂತದಲ್ಲಿ ಕಾರ್ಯನಿರ್ವಹಿಸುವ ಆರೋಗ್ಯ ಕಾರ್ಯಕರ್ತರೊಂದಿಗೆ ಸೌಜನ್ಯದಿಂದ ವರ್ತಿಸಿ. ಅವರು ನಿಮ್ಮೆಲ್ಲರ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದನ್ನು ಮರೆಯದಿರಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.
![Be courteous with health workers: CM BS Y](https://etvbharatimages.akamaized.net/etvbharat/prod-images/kn-bng-11-cm-bsy-press-statement-script-9021933_02042020224431_0204f_1585847671_614.jpg)
ಕೊರೊನಾ ವೈರಸ್ ತಡೆಗಟ್ಟಲು ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ಜೊತೆಗೆ ಸಮೀಕ್ಷೆ ನಡೆಸುವ ಮಹತ್ವದ ಕಾರ್ಯನಿರ್ವಹಿಸುತ್ತಿದ್ದಾರೆ. ತಮ್ಮ ಜೀವಕ್ಕಿರುವ ಅಪಾಯ ಲೆಕ್ಕಿಸದೇ ಅವರೆಲ್ಲಾ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಸೂಕ್ತ ಮಾಹಿತಿ ನೀಡಿ ಸಹಕರಿಸುವುದು ನಾಗರಿಕರ ಕರ್ತವ್ಯ.
ಈ ಸೋಂಕು ತಡೆಗಟ್ಟಲು ಸಮುದಾಯದ ಸಹಕಾರ, ಸಹಭಾಗಿತ್ವ ಅಗತ್ಯ. ಆದ್ದರಿಂದ ಸರ್ಕಾರದ ಸೂಚನೆಗಳನ್ನು ಪಾಲಿಸಿ ಎಂದು ಸಿಎಂ ಮನವಿ ಮಾಡಿದ್ದಾರೆ.