ಬೆಂಗಳೂರು: ಐಷಾರಾಮಿ ಆಡಿ ಕಾರು ಅಪಘಾತವಾಗಿ ಏಳು ಮಂದಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ವೇಗವಾಗಿ ಬಂದ ಕಾರು ರಸ್ತೆ ವಿಭಜಕಕ್ಕೆ ಅಪ್ಪಳಿಸಿರುವ ವಿಡಿಯೋ ಭೀಕರವಾಗಿದೆ.
ರಾತ್ರಿ ಸುಮಾರು 1.30ರ ವೇಳೆಗೆ ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಮಹಿಳೆಯರು ಮತ್ತು ನಾಲ್ವರು ಪುರುಷರು ಸಾವನ್ನಪ್ಪಿದ್ದಾರೆ. 6 ಜನ ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ದುರ್ಘಟನೆಯ ಸುದ್ದಿ ತಿಳಿದ ಪೊಲೀಸರು, ಸ್ಥಳಕ್ಕೆ ಧಾವಿಸಿ ರಸ್ತೆ ತೆರವುಗೊಳಿಸಿದ್ದಾರೆ. ತಮಿಳುನಾಡಿನ ಹೊಸೂರು ಶಾಸಕನ ಪುತ್ರ ಈ ಅಪಘಾತದಲ್ಲಿ ಸಾವನ್ನಪ್ಪಿದ್ದು, ಈಗಾಗಲೇ ಶಾಸಕರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಐಷಾರಾಮಿ ಆಡಿ ಕಾರು ಭೀಕರ ಅಪಘಾತ: ಶಾಸಕರ ಪುತ್ರ, ಭಾವಿ ಸೊಸೆ ಸೇರಿ 7 ಮಂದಿ ದುರ್ಮರಣ