ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಇದೀಗ ಸೋಂಕಿಗೆ ಪ್ರತಿಷ್ಠಿತ ಕಾಲೇಜಿನ ಡೀನ್ ಬಲಿಯಾಗಿದ್ದಾರೆ.
ಬನಶಂಕರಿಯ ಅಂಬೇಡ್ಕರ್ ತಾಂತ್ರಿಕ ಕಾಲೇಜಿನ ಸುಮಾರು 50 ವರ್ಷದ ಆಡಳಿತಾಧಿಕಾರಿ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಜೂನ್ 15 ರಂದು ಇವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ ವೈರಸ್ ತಗುಲಿರುವುದು ದೃಢವಾಗಿತ್ತು. ಬಳಿಕ ಅವರ ಸಂಪರ್ಕಿತರನ್ನು ಕ್ವಾರಂಟೈನ್ ಮಾಡಲಾಗಿತ್ತು. ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಇಂದು ಮೃತಪಟ್ಟಿದ್ದಾರೆ.
ಪತ್ನಿಗೂ ಪಾಸಿಟಿವ್:
ಮೃತ ಡೀನ್ ಪತ್ನಿಗೂ ಸೋಂಕು ದೃಢವಾಗಿದ್ದು, ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಗೆ ಇಬ್ಬರು ಮಕ್ಕಳಿದ್ದು, ಕ್ವಾರಂಟೈನ್ನಲ್ಲಿದ್ದಾರೆ.