ETV Bharat / city

ಬೆಂಗಳೂರು ನಗರ ಮಾಜಿ ಜಿಲ್ಲಾಧಿಕಾರಿ ಮಂಜುನಾಥ್​ಗೆ 14 ದಿನ ನ್ಯಾಯಾಂಗ ಬಂಧನ - ಡಿಸಿ ಮಂಜುನಾಥ್​ ವಿರುದ್ಧ ಲಂಚ ಆರೋಪ

ಜಿಲ್ಲಾಧಿಕಾರಿ ಕಚೇರಿಯಲ್ಲೇ ಲಂಚ ಪಡೆದ ಗಂಭೀರ ಆರೋಪ ಎದುರಿಸುತ್ತಿರುವ ಬೆಂಗಳೂರು ನಗರದ ಮಾಜಿ ಡಿಸಿ ಮಂಜುನಾಥ್​ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್​ಗೆ 14 ದಿನ ನ್ಯಾಯಾಂಗ ಬಂಧನ

author img

By

Published : Jul 5, 2022, 8:35 AM IST

ಬೆಂಗಳೂರು: ಎಸಿಬಿ ಅಧಿಕಾರಿಗಳಿಂದ ಬಂಧಿತರಾಗಿರುವ IAS ಅಧಿಕಾರಿ ಜೆ.ಮಂಜುನಾಥ್​ಗೆ 14 ದಿನ‌ಗಳ ನ್ಯಾಯಾಂಗ ಬಂಧನ ವಿಧಿಸಿ ಸಿಸಿಎಚ್ 24 ರ ವಿಶೇಷ ಎಸಿಬಿ ನ್ಯಾಯಾಲಯದ ನ್ಯಾಯಾಧೀಶ ಲಕ್ಷ್ಮಿ ನಾರಾಯಣ ಭಟ್ ಆದೇಶಿಸಿದ್ದಾರೆ. ನ್ಯಾಯಾಲಯದ ಆದೇಶದನ್ವಯ ಅಧಿಕಾರಿಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಲಾಗಿದೆ.

ಆನೇಕಲ್ ತಾಲೂಕಿನ ಕೂಡ್ಲು ಗ್ರಾಮದ 38 ಗುಂಟೆ ಜಮೀನಿನ ವ್ಯಾಜ್ಯದಲ್ಲಿ ಆಜಂ ಪಾಶಾ ಎಂಬುವವರ ಪರವಾಗಿ ಆದೇಶ ನೀಡಲು 5 ಲಕ್ಷ ರೂಪಾಯಿ ಲಂಚ ಪಡೆದ ಗಂಭೀರ ಆರೋಪ ಮಂಜುನಾಥ್ ಮೇಲಿದೆ. ಮೇ 21ರಂದು ಜಿಲ್ಲಾಧಿಕಾರಿ ಕಚೇರಿ ಮೇಲೆ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು 5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ತಹಶೀಲ್ದಾರ್ ಮಹೇಶ್ ಹಾಗೂ ಗುತ್ತಿಗೆ ನೌಕರ ಚೇತನ್‌ನನ್ನು ಬಂಧಿಸಿದ್ದರು.

ಬಂಧಿತರ ವಿಚಾರಣೆಯಲ್ಲಿ ಆಗ ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ್ ಪಾತ್ರ ಕಂಡುಬಂದ ಕಾರಣ ಬಂಧಿಸಲಾಗಿದೆ. ನಿನ್ನೆ ತಡರಾತ್ರಿ ಕೋರಮಂಗಲದಲ್ಲಿರುವ ನ್ಯಾಯಾಧೀಶರ ಮನೆ ಮುಂದೆ ಆರೋಪಿಯನ್ನು ಎಸಿಬಿ ಅಧಿಕಾರಿಗಳು ಹಾಜರುಪಡಿಸಿದ್ದರು.

ಇದನ್ನೂ ಓದಿ: ಬಂಧಿತ ಐಎಎಸ್, ಐಪಿಎಸ್ ಅಧಿಕಾರಿಗಳ ಅಮಾನತುಗೊಳಿಸಿ ಸರ್ಕಾರ ಆದೇಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.