ETV Bharat / city

ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಅಗ್ನಿ ಅವಘಡ - ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಗ್ನಿ ಅವಘಡ

ವಿಧಾನಸೌಧದ ಮೂರನೇ ಮಹಡಿಯ ಸಮ್ಮೇಳನ ಸಂಭಾಗಣದಲ್ಲಿ ಬೆಂಕಿ ಹೊತ್ತಿಕೊಂಡು, ಕೆಲ ಕಾಲತ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Fire Mishap in Vidhana soudha
Fire Mishap in Vidhana soudha
author img

By

Published : Jul 16, 2022, 10:17 PM IST

ಬೆಂಗಳೂರು: ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಅಳವಡಿಸಿರುವ ಎಸಿಯಲ್ಲಿ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ. ಇದರಿಂದ ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ, ಬೆಂಕಿ ನಂದಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಇಂದು ಸಂಜೆ 7 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡು, ದಿಢೀರ್​​ ಸ್ಫೋಟಗೊಂಡಿದೆ. ಶಬ್ದ ಕೇಳಿ ಅಲ್ಲಿಗೆ ಬಂದ ವಿಧಾನಸೌಧದ ಸಿಬ್ಬಂದಿ, ಬೆಂಕಿ ನಂದಿಸಿದ್ದಾರೆ. ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಗ್ನಿ ಅವಘಡ

ಕೊಠಡಿ ಸಂಖ್ಯೆ 334ರಲ್ಲಿ ಈ ಘಟನೆ ನಡೆದಿದ್ದು, ಶಾರ್ಟ್​ ಸರ್ಕೀಟ್​​ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ವಿಧಾನಸೌಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.